ಮೈಸೂರು ದಸರಾ 2026: ಚಾಮುಂಡಿ ಬೆಟ್ಟದ ಮಹಿಷಾಸುರ ಪ್ರತಿಮೆ ಬಳಿ ನಿಷೇಧಾಜ್ಞೆ ಜಾರಿ
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2026ರ (Mysuru Dasara) ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಚಾಮುಂಡಿ ಬೆಟ್ಟದಲ್ಲಿ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿದ್ದು, ನಾಳೆ ಬೆಳಗ್ಗೆ ಶುಭ ಲಗ್ನದಲ್ಲಿ ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ ಸಿಗಲಿದೆ. ಮತ್ತೊಂದೆಡೆ, ಚಾಮುಂಡಿ ಬೆಟ್ಟದ ಮಹಿಷಾಸುರ ಪ್ರತಿಮೆ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2026ರ (Mysuru Dasara) ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಚಾಮುಂಡಿ ಬೆಟ್ಟದಲ್ಲಿ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿದ್ದು, ನಾಳೆ ಬೆಳಗ್ಗೆ ಶುಭ ಲಗ್ನದಲ್ಲಿ ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ ಸಿಗಲಿದೆ. ಮತ್ತೊಂದೆಡೆ, ಚಾಮುಂಡಿ ಬೆಟ್ಟದ ಮಹಿಷಾಸುರ ಪ್ರತಿಮೆ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಹಿಷಾಸುರ ಪ್ರತಿಮೆಯ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಪ್ರತಿಮೆಯ ಸುತ್ತಲೂ ಪೊಲೀಸರು ಬ್ಯಾರಿಕೇಡ್ಗಳನ್ನು ಅಳವಡಿಸಿದ್ದಾರೆ. ಚಾಮುಂಡಿ ಬೆಟ್ಟದ ಮೇಲೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆಗೆ ಜಿಲ್ಲಾಡಳಿತ ಅವಕಾಶ ನೀಡದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಮಹಿಷ ದಸರಾ ಆಚರಣೆಗೆ ನಗರದ ಟೌನ್ ಹಾಲ್ನಲ್ಲಿ ಅವಕಾಶ ಕಲ್ಪಿಸಲಾಗಿದೆ. ದಸರಾ ಉದ್ಘಾಟನೆಗೆ ಸಿದ್ಧತೆ ಇನ್ನೊಂದೆಡೆ, ಚಾಮುಂಡೇಶ್ವರಿ ದೇವಾಲಯದಲ್ಲಿ ದಸರಾ ಉದ್ಘಾಟನೆಗೆ ಅಂತಿಮ ಹಂತದ ಸಿದ್ಧತೆಗಳು ಭರದಿಂದ ಸಾಗಿವೆ. ಚಾಮುಂಡೇಶ್ವರಿ ತಾಯಿಯ ಉತ್ಸವ ಮೂರ್ತಿಯ ಶುದ್ಧಿ ಕಾರ್ಯವನ್ನು ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ಅವರ ನೇತೃತ್ವದಲ್ಲಿ ನೆರವೇರಿಸಲಾಗಿದೆ. ಮೈಸೂರು ಅರಮನೆಯಿಂದ ಚಾಮುಂಡಿ ಬೆಟ್ಟಕ್ಕೆ ತರಲಾಗಿರುವ ಮಹಿಷಮರ್ದಿನಿ ಅವತಾರದ ಉತ್ಸವ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ನವರಾತ್ರಿಯ ಪ್ರತಿದಿನ ಚಾಮುಂಡೇಶ್ವರಿ ತಾಯಿಗೆ ಪ್ರಾಣಪ್ರತಿಷ್ಠಾಪನೆ ನೆರವೇರಿಸಿ, ಉತ್ಸವ ಮೂರ್ತಿಗೆ ವಿಶೇಷ ಪೂಜೆಗಳನ್ನು ಸಲ್ಲಿಸಲಾಗುತ್ತದೆ.ಇದನ್ನೂ ಓದಿ: ದೆಹಲಿ ಪೊಲೀಸರ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ ನಾಳೆ ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ನಾಳೆ ಬೆಳಗ್ಗೆ ನಿಗದಿತ ಶುಭ ಲಗ್ನದಲ್ಲಿ ಚಾಮುಂಡೇಶ್ವರಿ ದೇವಾಲಯದ ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಲಾಗುತ್ತದೆ. ಕಾರ್ಯಕ್ರಮಕ್ಕಾಗಿ ದೇವಾಲಯದ ಆವರಣದಲ್ಲಿ ವೇದಿಕೆ ನಿರ್ಮಿಸಲಾಗಿದ್ದು, ದಸರಾ ಉದ್ಘಾಟಕರು, ಮುಖ್ಯಮಂತ್ರಿ, ಸಚಿವರು ಹಾಗೂ ಶಾಸಕರು ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ.ಇದನ್ನೂ ಓದಿ: ದೊಡ್ಮನೆಯಲ್ಲಿ ಬೀಪ್ಗಳದ್ದೇ ಸದ್ದು; ಮಂಜು ಜೊತೆ ಈ ಮೂರು ಸ್ಪರ್ಧಿಗಳಿಗೂ ಎಲಿಮಿನೇಷನ್ ಭೀತಿ ಈ ಬಾರಿ 100ಕ್ಕೂ ಹೆಚ್ಚು ವಿವಿಧ ಧರ್ಮಗುರುಗಳು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಧರ್ಮಗುರುಗಳಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಲಾಗಿದ್ದು, ವಿವಿಐಪಿ, ವಿಐಪಿ ಹಾಗೂ ಸಾರ್ವಜನಿಕರಿಗೂ ಪ್ರತ್ಯೇಕ ಆಸನಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಕಾರ್ಯಕ್ರಮ ಸುಗಮವಾಗಿ ನಡೆಯಲು ಬ್ಯಾರಿಕೇಡ್ಗಳನ್ನು ಅಳವಡಿಸಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.