ವೃತ್ತಿಶಿಕ್ಷಣ: ಸರ್ಕಾರಿ ಶಾಲಾ ಮಕ್ಕಳಿಗೆ ಶೇ 7.5 ಮೀಸಲು
ಬೆಂಗಳೂರು: ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ಶೇ 7.5ರಷ್ಟು ಮೀಸಲಾತಿ ಸಿಗಲಿದೆ.ಈ ಕುರಿತು ರಾಜ್ಯ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಸರ್ಕಾರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿವರೆಗೆ ಓದಿದ ಮಕ್ಕಳಿಗೆ ಈ ಪ್ರಯೋಜನ ಲಭ್ಯವಾಗಲಿದೆ.ವೃತ್ತ

ಬೆಂಗಳೂರು: ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ಶೇ 7.5ರಷ್ಟು ಮೀಸಲಾತಿ ಸಿಗಲಿದೆ.ಈ ಕುರಿತು ರಾಜ್ಯ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಸರ್ಕಾರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿವರೆಗೆ ಓದಿದ ಮಕ್ಕಳಿಗೆ ಈ ಪ್ರಯೋಜನ ಲಭ್ಯವಾಗಲಿದೆ.ವೃತ್ತಿಶಿಕ್ಷಣ ಕೋರ್ಸ್ಗಳ ಪ್ರವೇಶದ ವೇಳೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಶೇ 15ರಷ್ಟು ಸೀಟುಗಳನ್ನು ಈಗಾಗಲೇ ನೀಡಲಾಗುತ್ತಿದೆ. ಈ ಮೀಸಲಾತಿಯಲ್ಲಿ ಅರ್ಧದಷ್ಟು ಸೀಟುಗಳನ್ನು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೇ ಮೀಸಲಿಡಲು ನಿಯಮಕ್ಕೆ ತಿದ್ದುಪಡಿ ತರಲಾಗಿದೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾದ ನಂತರ ಶಿಕ್ಷಣ ಕ್ಷೇತ್ರದ ಪ್ರಗತಿಗೆ ಹಲವು ಯೋಜನೆಗಳನ್ನು ಪ್ರಕಟಿಸಿದ್ದರು. ಅವುಗಳಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ವೃತ್ತಿಶಿಕ್ಷಣ ಕೋರ್ಸ್ಗಳ ಪ್ರವೇಶದಲ್ಲಿ ಶೇ 7.5ರಷ್ಟು ಮೀಸಲಾತಿ ಕಲ್ಪಿಸುವುದೂ ಒಂದು. ಈ ಕುರಿತು ಕಳೆದ ತಿಂಗಳು ಕರಡು ಅಧಿಸೂಚನೆ ಪ್ರಕಟಿಸಲಾಗಿತ್ತು.
Read the complete story at Prajavani