ಸಂಪರ್ಕಕ್ಕೆ ಸಿಗದ ದೀಪ್ಕೆ, ರಾಂಕಾ, ಸೌರವ್ – ಮತ್ತೆ ಜಂತರ್ ಮಂತರ್ ಚಲೋಗೆ ಸಿಜೆಪಿ ಕರೆ
– ಭಾನುವಾರ ಬೆಳಗ್ಗೆ 10 ಗಂಟೆಗೆ ಪ್ರತಿಭಟನೆ ಘೋಷಣೆ ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (CJP) ಅಕ್ಟೋಬರ್ 11ರ ಭಾನುವಾರ ಮತ್ತೆ ‘ಜಂತರ್ ಮಂತರ್ ಚಲೋ’ ಪ್ರತಿಭಟನೆಗೆ ಕರೆ ನೀಡಿದೆ. 11 October | Sunday | 10am Chalo Jantar Mantar! @Cockroachisback https://t.co/U7Gk8i6fYV — Ajinkya Shinde (@AjinkyaCJP) October 10, 2026 ಪಕ್ಷದ ಸಂಸ್ಥಾಪ

– ಭಾನುವಾರ ಬೆಳಗ್ಗೆ 10 ಗಂಟೆಗೆ ಪ್ರತಿಭಟನೆ ಘೋಷಣೆ ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (CJP) ಅಕ್ಟೋಬರ್ 11ರ ಭಾನುವಾರ ಮತ್ತೆ ‘ಜಂತರ್ ಮಂತರ್ ಚಲೋ’ ಪ್ರತಿಭಟನೆಗೆ ಕರೆ ನೀಡಿದೆ. 11 October | Sunday | 10am Chalo Jantar Mantar! @Cockroachisback https://t.co/U7Gk8i6fYV — Ajinkya Shinde (@AjinkyaCJP) October 10, 2026 ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ, ಸಹ ಸಂಚಾಲಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಾಂಕಾ ಅವರನ್ನ ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದು, ಈ ಮೂವರು ಇನ್ನೂ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಪಕ್ಷದ ನೂತನ ಸಾರಥಿ ಅಜಿಂಕ್ಯ ಶಿಂಧೆ ಕಳವಳ ವ್ಯಕ್ತಪಡಿಸಿದ್ದಾರೆ. 10 ಗಂಟೆ ಕಳೆದರೂ ಸಂಪರ್ಕಕ್ಕೆ ಸಿಕ್ಕಿಲ್ಲ ಶನಿವಾರ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೆಲವೇ ಕ್ಷಣಗಳಲ್ಲಿ ವಿಮಾನದಲ್ಲೇ ಮೂವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಮೂವರನ್ನು ವಶಕ್ಕೆ ಪಡೆದು 10 ಗಂಟೆಗಳಿಗೂ ಹೆಚ್ಚು ಸಮಯ ಕಳೆದಿದ್ದರೂ ಅವರೊಂದಿಗೆ ಸಂಪರ್ಕ ಸಾಧಿಸಲು ಸಾಧ್ಯವಾಗಿಲ್ಲ. ಅಲ್ಲದೆ, ಅವರನ್ನು ಎಲ್ಲಿಗೆ ಕರೆದೊಯ್ಯಲಾಗಿದೆ ಎಂಬ ಮಾಹಿತಿಯೂ ಲಭ್ಯವಾಗಿಲ್ಲ ಎಂದು ಸಿಜೆಪಿ ಹೇಳಿದೆ. ಪಕ್ಷದ ಪ್ರಮುಖ ನಾಯಕರು ಪೊಲೀಸ್ ವಶದಲ್ಲಿರುವ ಹಿನ್ನೆಲೆ, ಸಿಜೆಪಿ ನಾಯಕ ಅಜಿಂಕ್ಯ ಶಿಂಧೆ ಪ್ರತಿಭಟನೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಭಾನುವಾರ ಬೆಳಗ್ಗೆ 10 ಗಂಟೆಗೆ ಜಂತರ್ ಮಂತರ್ನಲ್ಲಿ ಮತ್ತೆ ಪ್ರತಿಭಟನೆ ನಡೆಸುವುದಾಗಿ ಅವರು ಘೋಷಿಸಿದ್ದಾರೆ. ಶನಿವಾರ ನಿಗದಿಯಾಗಿದ್ದ ಪ್ರತಿಭಟನೆ ತಡೆಯಲು ದೆಹಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 3,000ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ. ಪ್ರತಿಭಟನೆ ನಡೆಯದಂತೆ ತಡೆಯಲು ರಾಷ್ಟ್ರ ರಾಜಧಾನಿಯಾದ್ಯಂತ ವ್ಯಾಪಕ ಭದ್ರತಾ ನಿರ್ಬಂಧಗಳನ್ನೂ ವಿಧಿಸಲಾಗಿದೆ. ಈ ಬೆಳವಣಿಗೆಗಳ ನಡುವೆಯೇ ಸಿಜೆಪಿ ಭಾನುವಾರ ಮತ್ತೊಮ್ಮೆ ಪ್ರತಿಭಟನೆಗೆ ಕರೆ ನೀಡಿದ್ದು, ದೆಹಲಿಯಲ್ಲಿ ಭದ್ರತಾ ವ್ಯವಸ್ಥೆ ಹಾಗೂ ರಾಜಕೀಯ ಬೆಳವಣಿಗೆಗಳ ಕುರಿತು ಕುತೂಹಲ ಮೂಡಿಸಿದೆ.