ಪ್ರಜಾಪ್ರಭುತ್ವದ ತಾಯಿಯನ್ನು ದಮನಿಸಲು ಯತ್ನ: ಮಲ್ಲಿಕಾರ್ಜುನ ಖರ್ಗೆ
ನವದೆಹಲಿ: ಸಿಜೆಪಿ ಪ್ರತಿಭಟನೆಯನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಜಾಪ್ರಭುತ್ವದ ತಾಯಿಯನ್ನು ದಮನಿಸಲು ಯತ್ನಿಸಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಮೋದಿ ಸರ್ಕಾರವು ಪ್ರಜಾಪ್ರಭುತ್ವದ ತಾಯಿಯನ್ನು ದಮನಕಾರಿ ಪ್ರಭುತ್ವವನ್ನಾಗಿ ಬದಲಾಯಿಸಿ

ನವದೆಹಲಿ: ಸಿಜೆಪಿ ಪ್ರತಿಭಟನೆಯನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಜಾಪ್ರಭುತ್ವದ ತಾಯಿಯನ್ನು ದಮನಿಸಲು ಯತ್ನಿಸಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಮೋದಿ ಸರ್ಕಾರವು ಪ್ರಜಾಪ್ರಭುತ್ವದ ತಾಯಿಯನ್ನು ದಮನಕಾರಿ ಪ್ರಭುತ್ವವನ್ನಾಗಿ ಬದಲಾಯಿಸಿದೆ. ಬಿಜೆಪಿ-ಆರ್ಎಸ್ಎಸ್ನ ಹೇಡಿತನ ಇಂದು ಬಹಿರಂಗವಾಗಿದೆ ಎಂದು ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ‘ನಮ್ಮ ಯುವಜನರು, ವಿದ್ಯಾರ್ಥಿಗಳು, ವಕೀಲರು, ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು, ರೈತ ಮುಖಂಡರು, ಯೂಟ್ಯೂಬರ್ಗಳು ಮತ್ತು ಕಂಟೆಂಟ್ ಕ್ರಿಯೇಟರ್ಗಳು...ಹೀಗೆ ಈ ಸರ್ಕಾರದ ನೀತಿಗಳನ್ನು ಪ್ರಶ್ನಿಸುವ ಪ್ರತಿಯೊಬ್ಬರನ್ನೂ ಬಂಧಿಸಲಾಗುತ್ತಿದೆ’ ಎಂದು ಆರೋಪಿಸಿದ್ದಾರೆ.ಬಂಧನಗಳು, ಸೆರೆಮನೆವಾಸಗಳು, ಲಾಠಿಚಾರ್ಜ್ ಹಾಗೂ ಗುಂಡಿನ ದಾಳಿಗಳ ಮೂಲಕ ಭಾರತದ ಜನರನ್ನು ಕಟ್ಟಿ ಹಾಕಲು ಸಾಧ್ಯವಿಲ್ಲ ಎಂದು ಖರ್ಗೆ ಉಲ್ಲೇಖಿಸಿದ್ದಾರೆ. Our youth, students, lawyers, journalists, social activists, farm union leaders, You Tubers, content creators, everyone who is questioning this regime are being detained. Modi Govt has turned the “Mother of Democracy” into a ‘Muzzled Democracy’!The cowardice of the BJP-RSS is…— Mallikarjun Kharge (@kharge) October 10, 2026 ಸ್ವಾತಂತ್ರ್ಯ ಹೋರಾಟದ ದಿನಗಳಿಂದಲೂ ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಯುವಜನತೆ ಮುಂಚೂಣಿಯಲ್ಲಿದೆ ಎಂದ ಅವರು, ಕಾಂಗ್ರೆಸ್ ಪಕ್ಷ ಹಾಗೂ ಒಗ್ಗಟ್ಟಿನ ವಿರೋಧ ಪಕ್ಷಗಳು ಈ ಸರ್ವಾಧಿಕಾರಿ ಸರ್ಕಾರದ ವಿರುದ್ಧ ಕೊನೆಯವರೆಗೆ ಹೋರಾಡಲಿವೆ ಎಂದು ಎಚ್ಚರಿಸಿದ್ದಾರೆ.ದೇಶದ ಸ್ವಾತಂತ್ರ್ಯಕ್ಕಾಗಿ ನಾವು ರಕ್ತ ಹರಿಸಿದ್ದೇವೆ. ನಮ್ಮ ಪ್ರಜಾಪ್ರಭುತ್ವ, ಸಂವಿಧಾನ ಮತ್ತು ಪ್ರತಿಯೊಬ್ಬ ಭಾರತೀಯನ ಮೂಲಭೂತ ಹಕ್ಕುಗಳ ರಕ್ಷಣೆಗೆ ಹೋರಾಟ ಮುಂದುವರಿಯಲಿದೆ ಎಂದು ಪ್ರತಿಪಾದಿಸಿದ್ದಾರೆ. ಈ ಮೊದಲು ಸಂಸತ್ ಭವನ ಸಂಕೀರ್ಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಖರ್ಗೆ, ಸರ್ಕಾರಕ್ಕೆ ಭಯ ಹುಟ್ಟಿದೆ. ಜೋ ಡರ್ ಗಯಾ ಸಮ್ಜೊ ಮರ್ ಗಯಾ’ (ಯಾರು ಹೆದರುತ್ತಾರೋ ಅವರು ಸತ್ತಂತೆ) ಎಂದು 1975ರ ಜನಪ್ರಿಯ 'ಶೋಲೆ' ಚಲನಚಿತ್ರದ ಗಬ್ಬರ್ ಸಿಂಗ್ನ ಡೈಲಾಗ್ ಅನ್ನು ಉಲ್ಲೇಖಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು.ಸಿಜೆಪಿ ಪ್ರತಿಭಟನೆ LIVE | ದೀಪ್ಕೆ, ಮಮತಾ, ಕೇಜ್ರಿವಾಲ್ ಸೇರಿದಂತೆ ಪ್ರಮುಖರು ವಶಕ್ಕೆಅಜಿಂಕ್ಯ ಶಿಂದೆ ಹೆಗಲಿಗೆ ಜಂತರ್ ಮಂತರ್ ಪ್ರತಿಭಟನೆಯ ನೇತೃತ್ವ: ದೀಪ್ಕೆ ಘೋಷಣೆ