ಷರತ್ತು ವಿಧಿಸಿ ಅಭಿಜಿತ್ ದೀಪ್ಕೆ, ಅಶುತೋಷ್ ರಾಂಕಾ, ಸೌರವ್ ದಾಸ್ ಬಿಡುಗಡೆ
ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿಯ(CJP) ಸಂಸ್ಥಾಪಕ ಅಭಿಜಿತ್ ದೀಪ್ಕೆ(Abhijit Dipke) ಮತ್ತು ವಕ್ತಾರರಾದ ಸೌರವ್ ದಾಸ್(Sourav Das), ಅಶುತೋಷ್ ರಾಂಕಾ(Ashutosh Ranka) ಅವರನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಜಂತರ್ ಮಂತರ್ನಲ್ಲಿ ಸಿಜೆಪಿ ಪ್ರತಿಭಟನೆ ಕರೆ ನೀಡಿದ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ವಶಕ್ಕೆ

ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿಯ(CJP) ಸಂಸ್ಥಾಪಕ ಅಭಿಜಿತ್ ದೀಪ್ಕೆ(Abhijit Dipke) ಮತ್ತು ವಕ್ತಾರರಾದ ಸೌರವ್ ದಾಸ್(Sourav Das), ಅಶುತೋಷ್ ರಾಂಕಾ(Ashutosh Ranka) ಅವರನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಜಂತರ್ ಮಂತರ್ನಲ್ಲಿ ಸಿಜೆಪಿ ಪ್ರತಿಭಟನೆ ಕರೆ ನೀಡಿದ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ವಶಕ್ಕೆ ಪಡೆದ 24 ಗಂಟೆಯ ಒಳಗಡೆ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಬೇಕಾದ ಕಾರಣ ಇಂದು ಬೆಳಗ್ಗೆ ಮೂವರನ್ನು ಸ್ಪೆಷಲ್ ಎಕ್ಸುಕ್ಯೂಟಿವ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯ್ತು. Condition – no breach of peace for one year. — Ratna Singh (@whattalawyer) October 11, 2026 ಈ ವೇಳೆ ಮ್ಯಾಜಿಸ್ಟ್ರೇಟ್ ಒಂದು ವರ್ಷದವರೆಗೆ ಒಂದು ವರ್ಷದವರೆಗೆ ಶಾಂತಿ ಭಂಗ ಉಂಟುಮಾಡಬಾರದು ಎಂಬ ಷರತ್ತು ವಿಧಿಸಿ ಮೂವರ ಬಿಡುಗಡೆಗೆ ಸೂಚಿಸಿತು. #WATCH | Delhi: CJP leaders Abhijeet Dipke, Ashutosh Ranka, and Saurav Das have been released after they were produced before the Executive Magistrate at Delhi Cantt Police Station. CJP National Spokesperson Ashutosh Ranka says, “We will hold a press conference at 2 PM.” https://t.co/v1lNTEbhp3 — ANI (@ANI) October 11, 2026 ಬಿಡುಗಡೆಯ ಬಳಿಕ ಮಾತನಾಡಿದ ಅಶುತೋಷ್ ರಾಂಕಾ ಇಂದು ಮಧ್ಯಾಹ್ನ 2 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ವಿವರ ನೀಡುವುದಾಗಿ ತಿಳಿಸಿದರು. ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಸಲಾದ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ನಾಯಕರು ಕರೆ ನೀಡಿದ್ದರು. ಈ ಪ್ರತಿಭಟನೆಯ ಸಂದರ್ಭದಲ್ಲೇ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪೊಲೀಸರು ಮುಂಬೈನಿಂದ ದೆಹಲಿಗೆ ಬಂದಿಳಿದ ಈ ಮೂವರನ್ನು ವಿಮಾನದ ಒಳಗಡೆಯೇ ವಶಕ್ಕೆ ಪಡೆದಿದ್ದರು. #WATCH | Delhi: CJP leaders Abhijeet Dipke, Ashutosh Ranka, and Saurav Das at Delhi Cantt Police Station after they were produced before the Executive Magistrate. https://t.co/14nNpXvqvT — ANI (@ANI) October 11, 2026