ಆಗ್ನೇಯ ಪದವೀಧರ ಕ್ಷೇತ್ರ | 8 ಬಾರಿ ಗೆದ್ದ ಪಕ್ಷದ ಸಾಧನೆ ಶೂನ್ಯ: ಹುಲಿಕುಂಟೆಮಠ್
ದಾವಣಗೆರೆ: ‘ವಿಧಾನಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದಲ್ಲಿ 8 ಬಾರಿ ಗೆದ್ದಿರುವುದಾಗಿ ಹೇಳಿಕೊಳ್ಳುತ್ತಿರುವ ಪಕ್ಷದ (ಬಿಜೆಪಿ) ಸಾಧನೆ ಶೂನ್ಯ. ಸುಳ್ಳು ಆಶ್ವಾಸನೆಗಳನ್ನು ನೀಡಿ ವಿಜೇತರಾದವರು ಪದವೀಧರರಿಗೆ ಸ್ಪಂದಿಸಿದ್ದು ವಿರಳ’ ಎಂದು ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಆರೋಪಿಸಿದರು.ಇಲ್ಲಿನ ಬಾಪೂಜಿ ಎಂಬಿಎ ಕಾಲೇಜು ಆವರಣದಲ್ಲಿ ಕಾಂಗ್ರೆಸ್ ಭಾನುವಾರ

ದಾವಣಗೆರೆ: ‘ವಿಧಾನಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದಲ್ಲಿ 8 ಬಾರಿ ಗೆದ್ದಿರುವುದಾಗಿ ಹೇಳಿಕೊಳ್ಳುತ್ತಿರುವ ಪಕ್ಷದ (ಬಿಜೆಪಿ) ಸಾಧನೆ ಶೂನ್ಯ. ಸುಳ್ಳು ಆಶ್ವಾಸನೆಗಳನ್ನು ನೀಡಿ ವಿಜೇತರಾದವರು ಪದವೀಧರರಿಗೆ ಸ್ಪಂದಿಸಿದ್ದು ವಿರಳ’ ಎಂದು ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಆರೋಪಿಸಿದರು.ಇಲ್ಲಿನ ಬಾಪೂಜಿ ಎಂಬಿಎ ಕಾಲೇಜು ಆವರಣದಲ್ಲಿ ಕಾಂಗ್ರೆಸ್ ಭಾನುವಾರ ಏರ್ಪಡಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.‘ಶಿಕ್ಷಣ ಸಂಸ್ಥೆಗಳ ಮಾಲೀಕರು ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಗಳು ಬಿಜೆಪಿ ಅಭ್ಯರ್ಥಿಗಳಾಗುತ್ತಾ ಬಂದಿದ್ದಾರೆ. ಚುನಾವಣೆಯಲ್ಲಿ ಗೆದ್ದ ಬಳಿಕ ಕ್ಷೇತ್ರದಲ್ಲಿ ಕಾಣಿಸಿಕೊಂಡಿದ್ದು ಅಪರೂಪ. ಅವರಿಗೆ ಇದೊಂದು ರೀತಿ ರೆಸಾರ್ಟ್ ಆಗಿದೆ’ ಎಂದರು.‘ಸರ್ಕಾರಿ ನೌಕರರ ಪಿಂಚಣಿ ವ್ಯವಸ್ಥೆಯನ್ನು ಬದಲಿಸಿದ್ದು ಬಿಜೆಪಿ. ನಿವೃತ್ತ ನೌಕರರಿಗೆ ಆರ್ಥಿಕ ಭದ್ರತೆ ಕಲ್ಪಿಸಿದ್ದ ಹಳೆಯ ಪಿಂಚಣಿ ವ್ಯವಸ್ಥೆ (ಒಪಿಎಸ್) ರದ್ದುಪಡಿಸಿ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (ಎನ್ಪಿಎಸ್) ಜಾರಿಗೆ ತರಲಾಗಿದೆ. ಇದರಿಂದ ನಿವೃತ್ತಿ ಹೊಂದಿದ ನೌಕರರು ಸಂಕಷ್ಟ ಎದುರಿಸುತ್ತಿದ್ದಾರೆ. ಹೀಗಾಗಿ, ಹಳೆಯ ಪಿಂಚಣಿ ವ್ಯವಸ್ಥೆ ಮರುಜಾರಿಗೆ ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ’ ಎಂದರು.‘ಉದ್ಯೋಗ ಸೃಷ್ಟಿಸುವ ಭರವಸೆ ನೀಡಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಈಗ ಕೈಚೆಲ್ಲಿದೆ. ಉದ್ಯೋಗ ಸಿಗದೇ ಪದವೀಧರರು ತೊಂದರೆ ಅನುಭವಿಸುತ್ತಿದ್ದಾರೆ. ಯುವಜನರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ 75,000 ಸರ್ಕಾರಿ ಹುದ್ದೆ ಭರ್ತಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಅನುದಾನಿತ ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರಯತ್ನಿಸುತ್ತಿದೆ’ ಎಂದು ಹೇಳಿದರು.‘ಧೂಡಾ’ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ‘ಕ್ಷೇತ್ರದಲ್ಲಿ ಈವರೆಗೆ ಒಂದು ಪಕ್ಷದ ಪರ ವಾತಾವರಣವಿತ್ತು. ಕಾಲ ಬದಲಾಗಿದ್ದು, ಕಾಂಗ್ರೆಸ್ ಕೂಡ ಸಬಲವಾಗಿದೆ. ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳು ಪಕ್ಷದ ಕೈಹಿಡಿಯಲಿವೆ. ಆಗ್ನೇಯ ಶಿಕ್ಷಕರ ಕ್ಷೇತ್ರದ ರೀತಿಯಲ್ಲಿ ಪದವೀಧರ ಕ್ಷೇತ್ರವನ್ನು ಗೆದ್ದು ಇತಿಹಾಸ ನಿರ್ಮಿಸಬೇಕಿದೆ’ ಎಂದರು.ಕೆಪಿಸಿಸಿ ವಕ್ತಾರ ಡಿ.ಬಸವರಾಜ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಇಬ್ರಾಹಿಂ ಖಲೀಲುಲ್ಲಾ, ಮಾಜಿ ಮೇಯರ್ ಕೆ. ಚಮನ್ ಸಾಬ್, ಪ್ರೊ.ಮುರುಗೇಂದ್ರಪ್ಪ, ಅರವಿಂದ್, ಕಾಂಗ್ರೆಸ್ ಮುಖಂಡರಾದ ಅಯೂಬ್ ಪೈಲ್ವಾನ್, ಪರಶುರಾಮ್, ಕೆ.ಜಿ. ಶಿವಕುಮಾರ್, ಸುಧಾ ಇಟ್ಟಿಗುಡಿ, ನಾಗಭೂಷಣ್ ಹಾಜರಿದ್ದರು.ಎಸ್.ಎಸ್. ಮಲ್ಲಿಕಾರ್ಜುನ್, ಜಿಲ್ಲಾ ಉಸ್ತುವಾರಿ ಸಚಿವಕ್ಷೇತ್ರ ವ್ಯಾಪ್ತಿಯ ಶಾಸಕರ ಅಭಿಪ್ರಾಯ ಸಂಗ್ರಹಿಸಿ ಅರ್ಹ ಅಭ್ಯರ್ಥಿಗೆ ಟಿಕೆಟ್ ನೀಡಲಾಗಿದೆ. ಚುನಾವಣೆ ಗೆಲುವಿಗೆ ಕಾಂಗ್ರೆಸ್ ನಾಯಕರು ತಂಡವಾಗಿ ಕಾರ್ಯನಿರ್ವಹಿಸಬೇಕಿದೆ ಅನೀಶ್ ಪಾಶ, ವಕೀಲದೇಶದ ಅಕ್ಷರಸ್ಥ ಯುವ ಸಮುದಾಯ ಎಚ್ಚೆತ್ತುಕೊಂಡಿದೆ. ಎಸ್ಐಆರ್ ವಿರುದ್ಧ ಬೀದಿಗಿಳಿದು ಹೋರಾಟ ಮಾಡುತ್ತಿದೆ. ಬಿಜೆಪಿ ಹಿಂಬಾಗಿಲ ಮೂಲಕ ಕ್ಷೇತ್ರ ಗೆಲ್ಲಲು ಸಾಧ್ಯವಿಲ್ಲ