ಗೃಹಜ್ಯೋತಿ: ದಾಖಲೆ ಪರಿಶೀಲನೆ ಅವಧಿ ವಿಸ್ತರಣೆ
ಬೆಂಗಳೂರು: ಗೃಹಜ್ಯೋತಿ ಯೋಜನೆಯ ಫಲಾನುಭವಿ ಗಳ ದಾಖಲೆ ಪರಿಶೀಲನೆಗೆ ಇದೇ 31ರ ವರೆಗೆ ಅವಧಿ ವಿಸ್ತರಿಸಿ ಇಂಧನ ಇಲಾಖೆ ಆದೇಶ ಹೊರಡಿಸಿದೆ.ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ ಮನೆ ಪರಿಶೀಲನಾ ಕಾರ್ಯ ಜುಲೈ 1ರಿಂದ ಆರಂಭ ವಾಗಿತ್ತು. ಆಗಸ್ಟ್ 31ಕ್ಕೆ ಮುಗಿಯಬೇಕಿದ್ದ ಪರಿಶೀಲನೆಯನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿತ್ತು.ವಿದ್ಯುತ್ ಸರಬರಾಜು ಕಂಪನಿಗಳ ಸಿಬ್ಬಂ

ಬೆಂಗಳೂರು: ಗೃಹಜ್ಯೋತಿ ಯೋಜನೆಯ ಫಲಾನುಭವಿ ಗಳ ದಾಖಲೆ ಪರಿಶೀಲನೆಗೆ ಇದೇ 31ರ ವರೆಗೆ ಅವಧಿ ವಿಸ್ತರಿಸಿ ಇಂಧನ ಇಲಾಖೆ ಆದೇಶ ಹೊರಡಿಸಿದೆ.ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ ಮನೆ ಪರಿಶೀಲನಾ ಕಾರ್ಯ ಜುಲೈ 1ರಿಂದ ಆರಂಭ ವಾಗಿತ್ತು. ಆಗಸ್ಟ್ 31ಕ್ಕೆ ಮುಗಿಯಬೇಕಿದ್ದ ಪರಿಶೀಲನೆಯನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿತ್ತು.ವಿದ್ಯುತ್ ಸರಬರಾಜು ಕಂಪನಿಗಳ ಸಿಬ್ಬಂದಿ ಭೇಟಿ ನೀಡಿದಾಗ ಮನೆ ಮಾಲೀಕರು ಅಥವಾ ಬಾಡಿಗೆದಾರರು ಮಾಹಿತಿ ನೀಡಲು ನಿರಾಕರಿಸಿರುವುದು ಅಥವಾ ಮನೆಗೆ ಬೀಗ ಹಾಕಿರುವುದು ಕಂಡುಬಂದಿದೆ. ಅಂತಹ ಪ್ರಕರಣಗಳಲ್ಲಿ ಸಿಬ್ಬಂದಿ ಮತ್ತೊಮ್ಮೆ ಮನೆ ಮನೆಗೆ ತೆರಳಿ ಪರಿಶೀಲಿಸಬೇಕಾಗಿದೆ. ಹೀಗಾಗಿ ಅವಧಿ ವಿಸ್ತರಿಸಲಾಗಿದೆ.ಮನೆ ಮನೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಬೀಗ ಹಾಕಿರುವ ಅಥವಾ ಮಾಹಿತಿ ನೀಡಲು ನಿರಾಕರಿಸಿರುವವರ ವಿವರಗಳು ಲಭ್ಯವಿವೆ. ಅಂತಹವರಿಗೆ ಮತ್ತೊಂದು ಅವಕಾಶ ನೀಡಲಾಗುವುದು. ಅವರೆಲ್ಲ ಈ ಅವಧಿಯಲ್ಲಿ ಸಿಬ್ಬಂದಿಗೆ ಮಾಹಿತಿ ನೀಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.ಎಸ್ಕಾಂ ಸಿಬ್ಬಂದಿ ಮನೆಗಳಿಗೆ ಭೇಟಿ ನೀಡಿ ಆಧಾರ್, ಮತದಾರರ ಗುರುತಿನ ಚೀಟಿ ಅಥವಾ ಪಡಿತರ ಚೀಟಿ ಸೇರಿದಂತೆ ಅಗತ್ಯ ದಾಖಲೆಗಳನ್ನು ಪರಿಶೀಲಿಸಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಫಲಾನುಭವಿಗಳು ಈ ಪ್ರಕ್ರಿಯೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಇಂಧನ ಇಲಾಖೆ ಮನವಿ ಮಾಡಿದೆ.