ಮಕ್ಕಳ ನಡೆ ಆಡಳಿತ ಕಡೆ: ವಿದ್ಯಾರ್ಥಿಗಳಿಗಾಗಿ ‘ಸ್ಪೂರ್ತಿ’ ಯೋಜನೆ
ಚಿಕ್ಕಮಗಳೂರು: ಶಿಕ್ಷಣ ಪಡೆದು ಅಧಿಕಾರಿಗಳಾಗಬೇಕು ಎಂಬ ಆಸೆ–ಕನಸು ಹಲವು ವಿದ್ಯಾರ್ಥಿಗಳಲ್ಲಿ ಇರುತ್ತದೆ. ಆ ಕನಸನ್ನು ಮತ್ತಷ್ಟು ಚಿಗುರೊಡೆಯುಂತೆ ಮಾಡಲು ಜಿಲ್ಲಾ ಮಟ್ಟದ ಕಚೇರಿಗೇ ವಿದ್ಯಾರ್ಥಿಗಳನ್ನು ಕರೆತಂದು ಕಾರ್ಯವೈಖರಿ ಪರಿಚಯಿಸುವ ‘ಸ್ಪೂರ್ತಿ’ ಎಂಬ ಹೊಸ ಯೋಜನೆಯನ್ನು ಜಿಲ್ಲಾಡಳಿತ ಆರಂಭಿಸಿದೆ.ಪ್ರತಿ ತಿಂಗಳು ಮೂರನೇ ಶನಿವಾರ ಜಿಲ್ಲಾ ಮಟ್ಟದ ಕಚೇರಿಗಳಿಗೆ ವಿದ್ಯಾ

ಚಿಕ್ಕಮಗಳೂರು: ಶಿಕ್ಷಣ ಪಡೆದು ಅಧಿಕಾರಿಗಳಾಗಬೇಕು ಎಂಬ ಆಸೆ–ಕನಸು ಹಲವು ವಿದ್ಯಾರ್ಥಿಗಳಲ್ಲಿ ಇರುತ್ತದೆ. ಆ ಕನಸನ್ನು ಮತ್ತಷ್ಟು ಚಿಗುರೊಡೆಯುಂತೆ ಮಾಡಲು ಜಿಲ್ಲಾ ಮಟ್ಟದ ಕಚೇರಿಗೇ ವಿದ್ಯಾರ್ಥಿಗಳನ್ನು ಕರೆತಂದು ಕಾರ್ಯವೈಖರಿ ಪರಿಚಯಿಸುವ ‘ಸ್ಪೂರ್ತಿ’ ಎಂಬ ಹೊಸ ಯೋಜನೆಯನ್ನು ಜಿಲ್ಲಾಡಳಿತ ಆರಂಭಿಸಿದೆ.ಪ್ರತಿ ತಿಂಗಳು ಮೂರನೇ ಶನಿವಾರ ಜಿಲ್ಲಾ ಮಟ್ಟದ ಕಚೇರಿಗಳಿಗೆ ವಿದ್ಯಾರ್ಥಿಗಳನ್ನು ಕರೆರಲಾಗುತ್ತದೆ. ಅಲ್ಲಿ ನಡೆಯುವ ಆಡಳಿತ ವೈಖರಿ, ಅಧಿಕಾರಿಗಳ ಕೆಲಸ ಕಾರ್ಯಗಳನ್ನು ತಿಳಿದುಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ.ವಿದ್ಯಾರ್ಥಿಗಳು ಶಾಲೆಯಲ್ಲಿ ಕೇವಲ ಪಾಠ-ಪ್ರವಚನ, ಕ್ರೀಡೆ, ಮನರಂಜನೆಗೆ ಮಾತ್ರ ಸಿಮೀತವಾಗುತ್ತಾರೆ. ಇಲ್ಲಿನ ವಿದ್ಯಾರ್ಥಿಗಳು ಮಕ್ಕಳಿಗೆ ಕಲಿಕೆಯ ಹಂತದಲ್ಲಿ ಆಡಳಿತ ವೈಖರಿಯ ಬಗ್ಗೆ ಅರಿವು ಮೂಡಿಸುವ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಜತೆ ಇಡೀ ದಿನ ಕಳೆಯುತ್ತಾರೆ.ಸರ್ಕಾರಿ ಮತ್ತು ಅನುದಾನಿತ ಶಾಲೆಯ ಮಕ್ಕಳಿಗೆ ‘ಸ್ಪೂರ್ತಿ’ ಯೋಜನೆಯ ಲಾಭ ದೊರಕುತ್ತಿದೆ. ಜಿಲ್ಲೆಯ ಒಂಬತ್ತು ತಾಲ್ಲೂಕಿನಿಂದ ಒಬ್ಬ ವಿದ್ಯಾರ್ಥಿ ಅಥವಾ ವಿದ್ಯಾರ್ಥಿನಿಯನ್ನು ಆಯ್ಕೆ ಮಾಡಲಾಗುತ್ತದೆ. ಪ್ರತಿ ತಿಂಗಳು ನಾಲ್ಕನೇ ಶುಕ್ರವಾರ ಜಿಲ್ಲಾ ಮಟ್ಟದ ಕಚೇರಿಗಳಿಗೆ ಶಿಕ್ಷಕರ ತೇತೃತ್ವದಲ್ಲಿ ಕರೆತರಲಾಗುತ್ತದೆ.ಒಂದು ಕಚೇರಿಗೆ ತಲಾ ಮೂರು ವಿದ್ಯಾರ್ಥಿಗಳನ್ನು ನಿಯೋಜಿಸಿ ಆಡಳಿತ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಮೊದಲ ಹಂತದಲ್ಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಕಾರಿ ಕಚೇರಿಗಳಿಗೆ ಭೇಟಿ ನೀಡಿದ್ದಾರೆ. ಅಧಿಕಾರಿಗಳ ಜತೆ ಕೆಲಕಾಲ ಚರ್ಚೆ ನಡೆಸಿದ್ದಾರೆ.ಅಧಿಕಾರಿಗಳ ಜತೆ ಸಮಾಲೋಚನೆ ಬಳಿಕ ಇಡೀ ಕಚೇರಿಯ ಕಾರ್ಯವೈಖರಿಯ ಪರಿಚಯಿಸಲು ಒಬ್ಬ ಸಿಬ್ಬಂದಿ ನಿಯೋಜಿಸಲಾಗುತ್ತದೆ. ಅವರು ಎಲ್ಲರನ್ನು ಪರಿಚಯಿಸಿ ಅವರ ಕೆಲಸ ಏನು, ಆಡಳಿತ ವ್ಯವಸ್ಥೆ ಹೇಗೆ ನಡೆಯುತ್ತದೆ ಎಂಬುದನ್ನು ವಿವರಿಸುತ್ತಾರೆ.ಇದರ ಜತೆಗೆ ಅಧಿಕಾರಿಗಳು ನಡೆಸುವ ಸಭೆಗಳಲ್ಲಿ ಪಾಲ್ಗೊಳ್ಳಲು ಕೂಡ ವಿದ್ಯಾರ್ಥಿಗಳಿಗೆ ಅವಕಾಶ ಮಾಡಲಾಗುತ್ತಿದೆ. ವಿಡಿಯೊ ಕಾನ್ಫರೆನ್ಸ್ಗಳು, ನೇರ ಸಭೆಗಳು, ಕ್ಷೇತ್ರ ಭೇಟಿಗೂ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಲಾಗುತ್ತಿದೆ. ವಿದ್ಯಾರ್ಥಿಗಳು ಎಲ್ಲವನ್ನೂ ಕುತೂಹಲದಿಂದ ಗಮನಿಸುತ್ತಿದ್ದು, ನಾನೂ ಅಧಿಕಾರಿಯಾಗಬೇಕು ಎಂಬ ಕನಸು ಅವರಲ್ಲಿ ಬೆಳೆಯಲು ಇದು ಅನುಕೂಲ ಆಗಲಿದೆ ಎನ್ನುತ್ತಾರೆ ಅಧಿಕಾರಿಗಳು. ಜಿಲ್ಲಾಡಳಿತದ ಈ ಪ್ರಯೋಗಕ್ಕೆ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವಿದ್ಯಾರ್ಥಿಗಳ ಆಯ್ಕೆ ಹೇಗೆ: ಮೊದಲ ಹಂತದಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಮಾತ್ರ ಈ ಅವಕಾಶ ಕಲ್ಪಿಸಲಾಗಿದೆ. ಶಾಲೆಯಲ್ಲಿ ಶಿಕ್ಷಣದ ಜತೆಗೆ ಕ್ರೀಡೆ, ಪಠ್ಯೇತರ ಚಟುವಟಿಕೆಯಲ್ಲಿ ಆಸಕ್ತಿ ಇರುವ ವಿದ್ಯಾರ್ಥಿಗಳನ್ನು ಆಯಾ ಶಿಕ್ಷಕರು ಆಯ್ಕೆ ಮಾಡುತ್ತಾರೆ. ಮಾನಸಿಕವಾಗಿ ನೊಂದಿರುವ, ಗ್ರಾಮೀಣ ಭಾಗದ ಬಡ, ಮಧ್ಯಮ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುತ್ತಿದೆ.ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಸೇರಿ ಎಲ್ಲರನ್ನೂ ಗುರುತಿಸಿ ಪ್ರಾಶಸ್ತ್ಯ ನೀಡಲಾಗುತ್ತಿದೆ. ಪ್ರತಿ ತಿಂಗಳು ಒಂಬತ್ತು ವಿದ್ಯಾರ್ಥಿಗಳ ಪೈಕಿ ಐವರು ವಿದ್ಯಾರ್ಥಿನಿಯರಿಗೆ ಅವಕಾಶ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.ಸ್ಪೂರ್ತಿ ಎಂಬ ಯೋಜನೆ ಮಕ್ಕಳಲ್ಲಿ ಐಎಎಸ್, ಐಪಿಎಸ್ ಬಗ್ಗೆ ಕನಸು ಬಿತ್ತುವ ಜತೆಗೆ ವಿದ್ಯಾರ್ಥಿ ದೆಸೆಯಲ್ಲಿಯೇ ಆಡಳಿತದ ಬಗ್ಗೆ ಅರಿವು ಮೂಡಿಸುತ್ತದೆ. ಮಕ್ಕಳ ನಡೆ ಆಡಳಿತ ಕಡೆ ಎಂಬ ಹೊಸ ಯೋಜನೆಯನ್ನು ರೂಪಿಸಲಾಗಿದೆ. 6 ತಿಂಗಳಿಂದ ಪ್ರತಿ ತಿಂಗಳು ತಪ್ಪದೇ ಈ ಕಾರ್ಯಕ್ರಮ ನಡೆಯುತ್ತಿದೆ. ಮಕ್ಕಳ ಜತೆ ಮಾತನಾಡುವಾಗ ಜನರ ತಳಮಟ್ಟದ ಸಮಸ್ಯೆಗಳನ್ನು ಅಧಿಕಾರಿಗಳು ಅರ್ಥ ಮಾಡಿಕೊಳ್ಳಲು ಸಹ ಅನುಕೂಲವಾಗಲಿದೆ ಎನ್ನುತ್ತಾರೆ ಹಿರಿಯ ಅಧಿಕಾರಿಗಳು.PV WEB Exclusive: ‘ಮತ’ದ ಲೆಕ್ಕ; ಚಿಕ್ಕಬಳ್ಳಾಪುರದಲ್ಲಿ ದಲಿತರೇ ದಾಳPV WEB Exclusive: ಅರಣ್ಯ ಅಪರಾಧಗಳ ಪತ್ತೆಗೆ ಬಂದಿವೆ ಬೆಲ್ಜಿಯಂ ಶೆಫರ್ಡ್..