ಮುಂಜಾನೆ ಯೂಟ್ಯೂಬರ್ ಧ್ರುವ್ ರಾಠಿ ಬಿಡುಗಡೆ
ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ(CJP) ಹಮ್ಮಿಕೊಂಡಿದ್ದ ಪ್ರತಿಭಟನೆಯ ಮುನ್ನಾದಿನದಂದು ಗುರುಗ್ರಾಮದಲ್ಲಿ(Gurugram) ವಶಕ್ಕೆ ಪಡೆಯಲಾಗಿದ್ದ ಪ್ರಸಿದ್ಧ ಯೂಟ್ಯೂಬರ್ ಧ್ರುವ್ ರಾಠಿ(Dhruv Rathee) ಅವರನ್ನು ಗುರುಗ್ರಾಮ್ ಪೊಲೀಸರು ಭಾನುವಾರ ಮುಂಜಾನೆ ಬಿಡುಗಡೆ ಮಾಡಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ

ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ(CJP) ಹಮ್ಮಿಕೊಂಡಿದ್ದ ಪ್ರತಿಭಟನೆಯ ಮುನ್ನಾದಿನದಂದು ಗುರುಗ್ರಾಮದಲ್ಲಿ(Gurugram) ವಶಕ್ಕೆ ಪಡೆಯಲಾಗಿದ್ದ ಪ್ರಸಿದ್ಧ ಯೂಟ್ಯೂಬರ್ ಧ್ರುವ್ ರಾಠಿ(Dhruv Rathee) ಅವರನ್ನು ಗುರುಗ್ರಾಮ್ ಪೊಲೀಸರು ಭಾನುವಾರ ಮುಂಜಾನೆ ಬಿಡುಗಡೆ ಮಾಡಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಸಲು ಉದ್ದೇಶಿಸಲಾಗಿದ್ದ ಪ್ರತಿಭಟನೆಯ ಹಿನ್ನೆಲೆಯಲ್ಲಿ, ಶನಿವಾರ ಗುರುಗ್ರಾಮದ ಸೆಕ್ಟರ್ 56 ರಲ್ಲಿರುವ ತಮ್ಮ ನಿವಾಸದಲ್ಲಿದ್ದಾಗ ಧ್ರುವ್ ರಾಠಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಪೊಲೀಸ್ ಮೂಲಗಳ ಪ್ರಕಾರ, ಶನಿವಾರ ಬೆಳಿಗ್ಗೆ ಸುಮಾರು 6 ಗಂಟೆಗೆ ಅಪರಾಧ ವಿಭಾಗದ (ಕ್ರೈಂ ಬ್ರಾಂಚ್) ಮೂರು ತಂಡಗಳು ರಾಠಿ ಅವರನ್ನು ವಶಕ್ಕೆ ಪಡೆದಿದ್ದವು. ನಂತರ ಅವರನ್ನು ಕ್ರೈಂ ಬ್ರಾಂಚ್ ಕಚೇರಿಗೆ ಕರೆದೊಯ್ದು ಸುಮಾರು ಒಂದು ಗಂಟೆ ಕಾಲ ವಿಚಾರಣೆ ನಡೆಸಲಾಗಿತ್ತು. ವಿಚಾರಣೆಯ ನಂತರ ಅವರನ್ನು ಭಾನುವಾರ ಮುಂಜಾನೆ ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: ಮುನ್ನೆಚ್ಚರಿಕಾ ಕ್ರಮವಾಗಿ ದೀಪ್ಕೆ, ರಾಂಕಾ, ದಾಸ್ ವಶಕ್ಕೆ – ದೆಹಲಿ ಪೊಲೀಸ್ ಜಂತರ್ ಮಂತರ್ನಲ್ಲಿ ನಡೆದ ಪ್ರತಿಭಟನೆಗೆ ಪೊಲೀಸರು ಅನುಮತಿ ನೀಡಿರಲಿಲ್ಲ. ಅನುಮತಿ ನೀಡದಿದ್ದರೂ ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸಿದ್ದಕ್ಕೆ ವಿರೋಧ ಪಕ್ಷದ ನಾಯಕರು, ಸಾಮಾಜಿಕ ಕಾರ್ಯಕರ್ತರು ಮತ್ತು ಸೋಶಿಯಲ್ ಮೀಡಿಯಾ ಕ್ರಿಯೇಟರ್ಗಳು ಸೇರಿದಂತೆ ಸುಮಾರು 7,000 ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.