ದೇವನಹಳ್ಳಿ: ಇಂದಿರಾ ಕ್ಯಾಂಟೀನ್ಗೆ ಪುರಸಭೆ ಅಧಿಕಾರಿ ಭೇಟಿ
ದೇವನಹಳ್ಳಿ: ‘ಬಡವರು ಹಾಗೂ ಮಧ್ಯಮ ವರ್ಗದ ಜನರಿಗೆ ಕಡಿಮೆ ದರದಲ್ಲಿ ಗುಣಮಟ್ಟದ ಆಹಾರ ಒದಗಿಸುವ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ. ಆಹಾರದ ಗುಣಮಟ್ಟ ಮತ್ತು ಸ್ವಚ್ಛತೆ ಕಾಪಾಡಲು ನಿರಂತರ ನಿಗಾ ವಹಿಸಲಾಗುತ್ತಿದೆ’ ಎಂದು ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕಿ ಶ್ರೀದೇವಿ ತಿಳಿಸಿದರು.ಪಟ್ಟಣದ ಹಳೆಯ ಬಸ್ ನಿಲ್ದಾಣದ ಸಮೀಪವಿರುವ ಇಂ

ದೇವನಹಳ್ಳಿ: ‘ಬಡವರು ಹಾಗೂ ಮಧ್ಯಮ ವರ್ಗದ ಜನರಿಗೆ ಕಡಿಮೆ ದರದಲ್ಲಿ ಗುಣಮಟ್ಟದ ಆಹಾರ ಒದಗಿಸುವ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ. ಆಹಾರದ ಗುಣಮಟ್ಟ ಮತ್ತು ಸ್ವಚ್ಛತೆ ಕಾಪಾಡಲು ನಿರಂತರ ನಿಗಾ ವಹಿಸಲಾಗುತ್ತಿದೆ’ ಎಂದು ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕಿ ಶ್ರೀದೇವಿ ತಿಳಿಸಿದರು.ಪಟ್ಟಣದ ಹಳೆಯ ಬಸ್ ನಿಲ್ದಾಣದ ಸಮೀಪವಿರುವ ಇಂದಿರಾ ಕ್ಯಾಂಟೀನ್ಗೆ ಈಚೆಗೆ ಭೇಟಿ ನೀಡಿ, ಅಡುಗೆ ಕೋಣೆ, ಆಹಾರ ತಯಾರಿಕೆ ವಿಧಾನ ಹಾಗೂ ಸ್ವಚ್ಛತೆ ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.‘ಕ್ಯಾಂಟೀನ್ನಲ್ಲಿ ಪ್ರತಿದಿನ ಸುಮಾರು 250–300 ಮಂದಿ ಊಟ ಮಾಡುತ್ತಾರೆ. ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಆಹಾರ ತಯಾರಿಕೆ ಮತ್ತು ವಿತರಣೆಯಲ್ಲಿ ಶುಚಿತ್ವಕ್ಕೆ ಆದ್ಯತೆ ನೀಡಬೇಕು. ಅಡುಗೆ ಕೋಣೆಯನ್ನು ಸ್ವಚ್ಛವಾಗಿಟ್ಟುಕೊಳ್ಳುವ ಜೊತೆಗೆ ಆಹಾರದ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ಸಿಬ್ಬಂದಿಗೆ ಸೂಚಿಸಲಾಗಿದೆ’ ಎಂದು ತಿಳಿಸಿದರು.‘ಸರ್ಕಾರದಿಂದ ಇಂದಿರಾ ಕ್ಯಾಂಟೀನ್ಗೆ ಅಗತ್ಯ ಸೌಲಭ್ಯ ಒದಗಿಸಲಾಗುತ್ತಿದೆ. ಸ್ಥಳೀಯ ಪುರಸಭೆಯಿಂದ ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ. ಇಲ್ಲಿಗೆ ಬರುವ ಸಾರ್ವಜನಿಕರಿಗೆ ಅನನುಕೂಲವಾಗದಂತೆ ಕ್ರಮ ವಹಿಸಲಾಗುತ್ತಿದೆ. ಕ್ಯಾಂಟೀನ್ನ ಕಾರ್ಯನಿರ್ವಹಣೆ ಹಾಗೂ ಸ್ವಚ್ಛತೆಯನ್ನು ಪ್ರತಿದಿನ ಪರಿಶೀಲಿಸಲಾಗುತ್ತಿದೆ’ ಎಂದು ಹೇಳಿದರು.‘ಕ್ಯಾಂಟೀನ್ನಲ್ಲಿ ಊಟ ಮಾಡುವ ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಿ, ಆಹಾರದ ಗುಣಮಟ್ಟ ಮತ್ತು ಸೌಲಭ್ಯಗಳ ಕುರಿತು ಅಭಿಪ್ರಾಯ ಸಂಗ್ರಹಿಸಲಾಗಿದೆ. ಉತ್ತಮ ಆಹಾರ ದೊರೆಯುತ್ತಿರುವುದಾಗಿ ಸಾರ್ವಜನಿಕರು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಇದೇ ಗುಣಮಟ್ಟ ಕಾಯ್ದುಕೊಳ್ಳಲು ಸಿಬ್ಬಂದಿಗೆ ನಿರ್ದೇಶನ ನೀಡಲಾಗಿದೆ’ ಎಂದು ತಿಳಿಸಿದರು.ಕಡಿಮೆ ದರದಲ್ಲಿ ದೊರೆಯುವ ತಿಂಡಿ ಮತ್ತು ಊಟದ ಸೌಲಭ್ಯವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ದೇವನಹಳ್ಳಿ ಎಫ್ಎಸ್ಟಿಪಿ ಎಂಜಿನಿಯರ್ ಆದರ್ಶ ಪಾಲ್ಗೊಂಡಿದ್ದರು.261012-15-1943627886