ಹೈಕೋರ್ಟ್: ಮಾಜಿ ಶಾಸಕ ಸಂಜಯ ಪಾಟೀಲ ವಿರುದ್ಧದ ಪ್ರಕರಣ ರದ್ದು
ಬೆಂಗಳೂರು: 2024ರ ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ಸಚಿವೆಯ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಬಿಜೆಪಿಯ ಮಾಜಿ ಶಾಸಕ ಸಂಜಯ ಪಾಟೀಲ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.ತಮ್ಮ ವಿರುದ್ಧದ ಪ್ರಕರಣ ರದ್ದುಗೊಳಿಸುವಂತೆ ಕೋರಿ ಸಂಜಯ ಪಾಟೀಲ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ

ಬೆಂಗಳೂರು: 2024ರ ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ಸಚಿವೆಯ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಬಿಜೆಪಿಯ ಮಾಜಿ ಶಾಸಕ ಸಂಜಯ ಪಾಟೀಲ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.ತಮ್ಮ ವಿರುದ್ಧದ ಪ್ರಕರಣ ರದ್ದುಗೊಳಿಸುವಂತೆ ಕೋರಿ ಸಂಜಯ ಪಾಟೀಲ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ (ಧಾರವಾಡ) ಪುರಸ್ಕರಿಸಿದೆ.‘ಆರೋಪಿಯ ವಿರುದ್ಧ, ಭಾರತೀಯ ದಂಡ ಸಂಹಿತೆ–1860ರ (ಐಪಿಸಿ) ಕಲಂ 509 ಅನ್ವಯ ಆಗಬೇಕಾದರೆ, ನಿರ್ದಿಷ್ಟ ಮಹಿಳೆಯ ಘನತೆಯನ್ನು ಅವಮಾನಿಸುವ ಉದ್ದೇಶ ಹೊಂದಿದ ಮಾತು, ಸನ್ನೆ ಅಥವಾ ಕೃತ್ಯ ನಡೆದಿರಬೇಕು. ಆದರೆ, ಈ ಪ್ರಕರಣದಲ್ಲಿ ಆರೋಪಿ ವಿರುದ್ಧದ ದೂರಿನಲ್ಲಿ ಅಂತಹ ಅಗತ್ಯ ಅಂಶಗಳು ಒಳಗೊಂಡಿಲ್ಲ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.ಪ್ರಕರಣ: ‘ಸಂಜಯ್ ಪಾಟೀಲ್ 2024ರ ಲೋಕಸಭಾ ಚುನಾವಣೆ ವೇಳೆ ಬೆಳಗಾವಿ ಕ್ಷೇತ್ರದ ಪ್ರಚಾರ ಸಭೆಯೊಂದರಲ್ಲಿ ಆಗಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದರು’ ಎಂದು ಆರೋಪಿಸಲಾಗಿತ್ತು.
Read the complete story at Prajavani