ಪೊಲೀಸರ ದೌರ್ಜನ್ಯ: ಜನವಾದಿ ಸಂಘಟನೆ ಖಂಡನೆ
ಬೆಂಗಳೂರು: ಎಸ್ಐಆರ್ ಪ್ರಕ್ರಿಯೆ ರದ್ದುಗೊಳಿಸುವಂತೆ ಆಗ್ರಹಿಸಿ ದೆಹಲಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿರುವುದನ್ನು ಅಖಿಲ ಭಾರತ ಜನವಾದಿ ಸಂಘಟನೆ ಖಂಡಿಸಿದೆ.ರಾಜಕೀಯ ನಾಯಕರು, ಹೋರಾಟಗಾರರು, ವಿದ್ಯಾರ್ಥಿಗಳು, ಯುವಜನರು ಮತ್ತು ನಾಗರಿಕ ಸಮಾಜದ ಸದಸ್ಯರನ್ನು ಸಾಮೂಹಿಕವಾಗಿ ಬಂಧಿಸಿರುವುದು ಪ್ರಜಾಸತ್ತಾತ್ಮಕ ಹಕ್ಕುಗಳ
ಬೆಂಗಳೂರು: ಎಸ್ಐಆರ್ ಪ್ರಕ್ರಿಯೆ ರದ್ದುಗೊಳಿಸುವಂತೆ ಆಗ್ರಹಿಸಿ ದೆಹಲಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿರುವುದನ್ನು ಅಖಿಲ ಭಾರತ ಜನವಾದಿ ಸಂಘಟನೆ ಖಂಡಿಸಿದೆ.ರಾಜಕೀಯ ನಾಯಕರು, ಹೋರಾಟಗಾರರು, ವಿದ್ಯಾರ್ಥಿಗಳು, ಯುವಜನರು ಮತ್ತು ನಾಗರಿಕ ಸಮಾಜದ ಸದಸ್ಯರನ್ನು ಸಾಮೂಹಿಕವಾಗಿ ಬಂಧಿಸಿರುವುದು ಪ್ರಜಾಸತ್ತಾತ್ಮಕ ಹಕ್ಕುಗಳು ಮತ್ತು ಸಂವಿಧಾನಬದ್ಧ ಸ್ವಾತಂತ್ರ್ಯದ ಮೇಲಿನ ಗಂಭೀರ ದಾಳಿಯಾಗಿದೆ ಎಂದು ಸಂಘಟನೆ ಅಧ್ಯಕ್ಷೆ ಚಂದ್ರಕುಮಾರಿ ತಿಳಿಸಿದ್ದಾರೆ.ಪ್ರತಿಭಟನಕಾರರ ಮೇಲೆ ದೈಹಿಕ ಹಲ್ಲೆ ನಡೆಸಲಾಗಿದ್ದು, ಹಲವರಿಗೆ ಗಾಯಗಳಾಗಿವೆ. ವಿಶೇಷವಾಗಿ ಮಹಿಳೆಯೊಂದಿಗೆ ಪೊಲೀಸರು ನಡೆದುಕೊಂಡ ರೀತಿ ಸರಿಯಲ್ಲ. ಗಂಟೆಗಟ್ಟಲೆ ಪೊಲೀಸ್ ವಾಹನಗಳಲ್ಲಿ ಇರಿಸಲಾಗಿದ್ದು, ಆಹಾರ ಮತ್ತು ನೀರನ್ನೂ ನೀಡದೆ ಸತಾಯಿಸಲಾಗಿದೆ ಎಂದು ಹೇಳಿದ್ದಾರೆ.ಪ್ರಧಾನ ಕಾರ್ಯದರ್ಶಿ ದೇವಿ, ‘ಮೌರ್ಯ ಎನ್ಕ್ಲೇವ್ ಪೊಲೀಸ್ ಠಾಣೆಯಲ್ಲಿ ಬಂಧನದಲ್ಲಿದ್ದ ನಾಯಕಿಯರಿಗೆ ಶೌಚಾಲಯ ಸೌಲಭ್ಯ ನಿರಾಕರಿಸಲಾಗಿದೆ. ಅವರ ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡು, ಅಗತ್ಯ ಔಷಧ ಪಡೆಯಲೂ ಅವಕಾಶ ನೀಡಲಾಗಿಲ್ಲ’ ಎಂದು ಆರೋಪಿಸಿದ್ದಾರೆ.‘ಮತದಾರರ ಪಟ್ಟಿಯ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ಮತದಾರರ ಹೆಸರುಗಳನ್ನು ಅಳಿಸುವ ಕ್ರಮದ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಉತ್ತರಿಸುವ ಬದಲು, ಸರ್ಕಾರವು ಬಲ ಪ್ರಯೋಗದ ಮೂಲಕ ಪ್ರತಿಕ್ರಿಯಿಸುತ್ತಿದೆ. ಅರ್ಹ ನಾಗರಿಕರನ್ನು ಮತದಾರರ ಪಟ್ಟಿಯಿಂದ ಹೊರಗಿಡುವುದು ಸಾರ್ವತ್ರಿಕ ವಯಸ್ಕ ಮತದಾನದ ಮೂಲತತ್ವದ ಮೇಲಿನ ದಾಳಿಯಾಗಿದೆ. ಇದರಿಂದ ಪ್ರಜಾಸತ್ತಾತ್ಮಕ ಪ್ರಕ್ರಿಯೆಯಲ್ಲಿ ಜನರ ಭಾಗವಹಿಸುವಿಕೆ ದುರ್ಬಲಗೊಳ್ಳುತ್ತದೆ. ವಿಶೇಷವಾಗಿ ಈಗಾಗಲೇ ಆಡಳಿತಾತ್ಮಕ ಪ್ರಕ್ರಿಯೆಗಳಿಂದ ಹೊರಗುಳಿಯುವ ಅಪಾಯ ಎದುರಿಸುತ್ತಿರುವ ಜನರಿಗೆ ಇದರಿಂದ ಹೆಚ್ಚಿನ ಅನ್ಯಾಯವಾಗುತ್ತದೆ’ ಎಂದು ತಿಳಿಸಿದ್ದಾರೆ.