ಕಬ್ಬು ಬೆಳೆಗಾರರ ಸಮಸ್ಯೆ ಇತ್ಯರ್ಥಕ್ಕೆ ಒಂದು ವಾರದೊಳಗೆ ಉನ್ನತ ಮಟ್ಟದ ಸಮಿತಿ:ಜೋಶಿ
ನವದೆಹಲಿ: ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಮತ್ತು ರೈತರ ಹಿತದೃಷ್ಟಿಯಿಂದ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಹಾಗೂ ಅವರ ಆಶೋತ್ತರಗಳಿಗೆ ಸ್ಪಂದಿಸಲು ಒಂದು ವಾರದೊಳಗೆ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.ಸಮಿತಿಯಲ್ಲಿ ಕೃಷಿ ಸಚಿವಾಲಯ ಅಧಿಕಾರಿಗಳು, ರಾಜ್ಯ ಸರ್ಕಾರದ ಅಧಿಕಾರಿಗಳ
ನವದೆಹಲಿ: ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಮತ್ತು ರೈತರ ಹಿತದೃಷ್ಟಿಯಿಂದ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಹಾಗೂ ಅವರ ಆಶೋತ್ತರಗಳಿಗೆ ಸ್ಪಂದಿಸಲು ಒಂದು ವಾರದೊಳಗೆ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.ಸಮಿತಿಯಲ್ಲಿ ಕೃಷಿ ಸಚಿವಾಲಯ ಅಧಿಕಾರಿಗಳು, ರಾಜ್ಯ ಸರ್ಕಾರದ ಅಧಿಕಾರಿಗಳು, ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳು ಹಾಗೂ ರೈತ ಮುಖಂಡರು ಇರಲಿದ್ದಾರೆ.ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಇಂದು ನವದೆಹಲಿಯಲ್ಲಿ ಕರ್ನಾಟಕ ಹಾಗೂ ಮಹರಾಷ್ಟ್ರದ ರೈತ ಮುಖಂಡರು ಹಾಗೂ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳ ನೇತೃತ್ವದಲ್ಲಿ ಕೇಂದ್ರ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರ ಉಪಸ್ಥಿತಿಯಲ್ಲಿ ಕಬ್ಬು ಹಾಗೂ ಸಕ್ಕರೆ ಸಂಬಂಧಿಸಿದ ವಿಷಯಗಳ ಕುರಿತು ಸವಿವರವಾಗಿ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಕಬ್ಬು ಬೆಳೆಗಾರರಿಗೆ ಸಂಬಂಧಿಸಿದ ಪ್ರತಿಯೊಂದು ಸಮಸ್ಯೆಗಳನ್ನು ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು ಎಂದಿದ್ದಾರೆ.ಇಂದು ನವದೆಹಲಿಯಲ್ಲಿ ಕರ್ನಾಟಕ ಹಾಗೂ ಮಹರಾಷ್ಟ್ರದ ರೈತ ಮುಖಂಡರು ಹಾಗೂ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳ ನೇತೃತ್ವದಲ್ಲಿ ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ @ChouhanShivraj ಅವರ ಉಪಸ್ಥಿತಿಯಲ್ಲಿ ಕಬ್ಬು ಹಾಗೂ ಸಕ್ಕರೆ ಸಂಬಂಧಿಸಿದ ವಿಷಯಗಳ ಕುರಿತು ಸವಿವರವಾಗಿ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಕಬ್ಬು ಬೆಳೆಗಾರರಿಗೆ… pic.twitter.com/Hz7PL2bcEU— Pralhad Joshi (@JoshiPralhad) October 12, 2026 ಕಬ್ಬು ಬೆಳೆಗಾರರಿಗೆ ವೇಸ್ಟೇಜ್ ನಲ್ಲಿನ ಮೋಸ, ತೂಕದಲ್ಲಿ ಆಗುತ್ತಿರುವ ಮೋಸ, ಸಕ್ಕರೆ ಇಳುವರಿ (ರಿಕವರಿ)ಯಲ್ಲಿ ಮೋಸವಾಗುತ್ತಿದ್ದು, ಈ ವಿಷಯಗಳಲ್ಲಿ ರೈತರಿಗೆ ಆಗುತ್ತಿರುವ ಅನ್ಯಾಯದ ಕುರಿತು ಹಾಗೂ ಎಫ್.ಆರ್.ಪಿ (FRP) ಎಸ್.ಎ.ಪಿ (SAP-Minimum Selling Price), ಎಥನಾಲ್ ಹಾಗೂ ಇನ್ನು ಹಲವು ವಿಷಯಗಳ ಬಗ್ಗೆ ಈ ಸಭೆಯಲ್ಲಿ ಚರ್ಚಿಸಲಾಯಿತು. ರೈತ ಮುಖಂಡರು ಪ್ರಸ್ತಾಪಿಸಿದ ಬೇಡಿಕೆಗಳು ಮತ್ತು ಸಲಹೆಗಳನ್ನು ಪರಿಗಣಿಸಿ, ರೈತರ ಹಿತದೃಷ್ಟಿಯಿಂದ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಹಾಗೂ ಅವರ ಆಶೋತ್ತರಗಳಿಗೆ ಸ್ಪಂದಿಸಲು ಒಂದು ವಾರದೊಳಗೆ ಕೇಂದ್ರ ಕೃಷಿ ಸಚಿವಾಲಯ ಅಧಿಕಾರಿಗಳು, ರಾಜ್ಯ ಸರ್ಕಾರದ ಅಧಿಕಾರಿಗಳು, ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳು ಹಾಗೂ ರೈತ ಮುಖಂಡರನ್ನು ಒಳಗೊಂಡ ಒಂದು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಸದಾ ರೈತರ ಹಿತಾಸಕ್ತಿ ಮತ್ತು ಕಲ್ಯಾಣಕ್ಕೆ ಬದ್ಧವಾಗಿದ್ದು, ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ದೊರೆಯುವುದರ ಜೊತೆಗೆ ಸಕ್ಕರೆ ಕ್ಷೇತ್ರದ ಸುಸ್ಥಿರ ಬೆಳವಣಿಗೆ ಹಾಗೂ ರೈತರ ಆರ್ಥಿಕ ಸ್ಥಿತಿಯ ಸುಧಾರಣೆಗೆ ಆದ್ಯತೆ ನೀಡುವುದು ಈ ಉನ್ನತ ಸಮಿತಿಯ ಉದ್ದೇಶವಾಗಿದೆ ಎಂದೂ ಪೋಸ್ಟ್ನಲ್ಲಿ ಉಲ್ಲೇಖಿಸಿದ್ದಾರೆ.ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಸಚಿವಾಲಯದ ಆಹಾರ ಇಲಾಖೆಯ ಅಧಿಕಾರಿಗಳು, ರಾಜ್ಯ ಸರ್ಕಾರದ ಸಹಕಾರ ಇಲಾಖೆಯ ಸಚಿವ ಲಕ್ಷಣ ಸವದಿ , ಕೃಷಿ ಇಲಾಖೆಯ ಸಚಿವ ನರೇಂದ್ರ ಸ್ವಾಮಿ, ಸಕ್ಕರೆ ಮತ್ತು ಜವಳಿ ಖಾತೆ ಸಚಿವ ರುದ್ರಪ್ಪ ಮಾನಪ್ಪ ಲಮಾಣಿ ರೈತ ಮುಖಂಡರು ಮತ್ತು ಮಾಜಿ ಸಂಸದರಾದ ರಾಜು ಶೆಟ್ಟಿ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳು ಪಾಲ್ಗೊಂಡಿದ್ದರು.