ರಾಯಚೂರು| ಅರ್ಹ ಮತದಾರರು ಹೊರಗುಳಿಯದಂತೆ ನೋಡಿಕೊಳ್ಳಿ: ಬಸನಗೌಡ ದದ್ದಲ್
ರಾಯಚೂರು: ‘ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಬೂತ್ ಮಟ್ಟದ ಏಜೆಂಟರು (ಬಿಎಲ್ಎ) ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು’ ಎಂದು ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಸೂಚಿಸಿದರು.ನಗರದ ನಡೆದ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಬೂತ್ ಮಟ್ಟದ ಏಜೆಂಟರ ಸಭೆಯಲ್ಲಿ ಮಾತನಾಡಿದರು.ಎಸ್ಐಆರ್ ಪ್ರಕ್ರಿಯೆ ಹಾಗೂ ಅಂತಿಮ ಮತದಾರರ

ರಾಯಚೂರು: ‘ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಬೂತ್ ಮಟ್ಟದ ಏಜೆಂಟರು (ಬಿಎಲ್ಎ) ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು’ ಎಂದು ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಸೂಚಿಸಿದರು.ನಗರದ ನಡೆದ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಬೂತ್ ಮಟ್ಟದ ಏಜೆಂಟರ ಸಭೆಯಲ್ಲಿ ಮಾತನಾಡಿದರು.ಎಸ್ಐಆರ್ ಪ್ರಕ್ರಿಯೆ ಹಾಗೂ ಅಂತಿಮ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಅಗತ್ಯ ಸೂಚನೆಗಳನ್ನು ನೀಡಿದ ಅವರು, ಮತದಾರರ ಹಕ್ಕುಗಳ ರಕ್ಷಣೆ ಮತ್ತು ಎಸ್ಐಆರ್ ಪ್ರಕ್ರಿಯೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.ವಿಧಾನ ಪರಿಷತ್ ಚುನಾವಣೆ ಸಿದ್ಧತೆಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು. ಚುನಾವಣೆಗೆ ಸಂಬಂಧಿಸಿದ ಕಾರ್ಯಚಟುವಟಿಕೆಗಳನ್ನು ಸಮನ್ವಯದಿಂದ ಕೈಗೊಳ್ಳಲು ಮಾರ್ಗದರ್ಶನ ನೀಡಿದರು.ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳ ಹಿನ್ನೆಲೆಯಲ್ಲಿ ಈಗಿನಿಂದಲೇ ತಳಮಟ್ಟದಲ್ಲಿ ಸಂಘಟಿತವಾಗಿ ಕಾರ್ಯನಿರ್ವಹಿಸಬೇಕು. ಕ್ಷೇತ್ರದ ಪ್ರತಿ ಗ್ರಾಮ, ವಾರ್ಡ್ ಹಾಗೂ ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸಬೇಕು. ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರ ನಡುವೆ ಸಮನ್ವಯ ಸಾಧಿಸಿ, ಜನರ ಸಮಸ್ಯೆ ಹಾಗೂ ನಿರೀಕ್ಷೆಗಳನ್ನು ಅರಿಯುವ ಮೂಲಕ ಜನಸಂಪರ್ಕ ವಿಸ್ತರಿಸಬೇಕು ಎಂದು ಸೂಚಿಸಿದರು.ಚುನಾವಣಾ ಪೂರ್ವ ಸಿದ್ಧತೆಗಳನ್ನು ವ್ಯವಸ್ಥಿತವಾಗಿ ಕೈಗೊಳ್ಳುವುದು, ಕಾರ್ಯಕರ್ತರಿಗೆ ಸೂಕ್ತ ಜವಾಬ್ದಾರಿಗಳನ್ನು ವಹಿಸುವುದು ಹಾಗೂ ಸ್ಥಳೀಯ ಮಟ್ಟದಲ್ಲಿ ಪಕ್ಷ ಸಂಘಟನೆಯನ್ನು ಬಲಪಡಿಸುವಂತೆ ಮುಖಂಡರು ಮತ್ತು ಕಾರ್ಯಕರ್ತರಿಗೆ ತಿಳಿಸಲಾಯಿತು.ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಶಾಂತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪಕ್ಷದ ಹಿರಿಯ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಏಜೆಂಟರು ಉಪಸ್ಥಿತರಿದ್ದರು.261012-32-2063115938