ರೈತರ ಕೃಷಿ ಸಾಲಮನ್ನಾಕ್ಕೆ ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ, ಬೇಡಿಕೆ ಏನಿವೆ?
ಬೆಂಗಳೂರು: ರೈತರ ಕೃಷಿ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆ ಜಾರಿಗೆ ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಸೋಮವಾರ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನಾ ಧರಣಿ ನಡೆಸಲಾಯಿತು.ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಸ್ಥಳಕ್ಕೆ ಬಂದ ಸಚಿವ ಸತ
ಬೆಂಗಳೂರು: ರೈತರ ಕೃಷಿ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆ ಜಾರಿಗೆ ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಸೋಮವಾರ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನಾ ಧರಣಿ ನಡೆಸಲಾಯಿತು.ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಸ್ಥಳಕ್ಕೆ ಬಂದ ಸಚಿವ ಸತೀಶ ಜಾರಕಿಹೊಳಿ, ಒಂದು ವಾರದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ರೈತ ಮುಖಂಡರ ಸಭೆ ಕರೆಯುವ ಭರವಸೆ ನೀಡಿದರು.ನಾಣ್ಯ ಸಂಗ್ರಹರಾಜ್ಯದ 217 ತಾಲೂಕು ಭೀಕರ ಬರಗಾಲಕ್ಕೆ ತುತ್ತಾಗಿ ಸುಮಾರು 20 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ರೈತರ ಬೆಳೆ ನಾಶವಾಗಿದೆ. ಈ ರೀತಿ ಸಂಕಷ್ಟಕ್ಕೆ ಒಳಗಾದ ರೈತರಿಗೆ ಸರ್ಕಾರದ ಭಿಕ್ಷೆ ಬೇಡ ಎಂದು ಆಕ್ರೋಶ ಹೊರ ಹಾಕಿದ ರೈತರು, ತಲಾ ₹1 ಹಾಗೂ ₹ 5 ನಾಣ್ಯ ಭಿಕ್ಷೆ ಮೂಲಕ ಸಂಗ್ರಹಿಸಿ ಸರ್ಕಾರಕ್ಕೆ ₹1770 ನೀಡಲು ಮುಂದಾದರು. ಈ ವಿಚಾರವನ್ನು ಮಂತ್ರಿ ಸತೀಶ್ ಜಾರಕಿಹೊಳಿ ಗಮನಕ್ಕೆ ತಂದು ಮನವಿ ಜತೆಗೆ ಚೆಕ್ ಹಸ್ತಾಂತರಿಸಿದರು.ಮಳೆಯ ಅಭಾವದಿಂದ ಬೆಳೆ ಕೈಕೊಟ್ಟಿರುವ ಸಂದರ್ಭದಲ್ಲಿ ರೈತರು ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ, ಕೂಲಿ, ಕೃಷಿ ಯಂತ್ರೋಪಕರಣ ಮತ್ತು ನೀರಾವರಿಗಾಗಿ ಮಾಡಿದ ವೆಚ್ಚವನ್ನು ಮರಳಿ ಗಳಿಸಿಕೊಳ್ಳಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ಕಡೆ ಬೆಳೆ ನಷ್ಟವಾದರೆ, ಮತ್ತೊಂದು ಕಡೆ ಕುಟುಂಬದ ಜೀವನ ನಡೆಸುವುದು ಕಷ್ಟವಾಗಿದೆ. ಸಾಲ ವಶೂಲಾತಿ ಕಿರುಕುಳ ಹೆಚ್ಚಾಗುತ್ತಿದೆ. ಅಂದಾಜು ₹ 20 ಸಾವಿರ ಕೋಟಿ ಗಳಿಗೂ ಅಧಿಕ ಬೆಳೆ ನಷ್ಟದಿಂದ ರೈತರು ಕಂಗಾಲಾಗಿದ್ದಾರೆ. ಮಹಾರಾಷ್ಟ್ರ ರಾಜ್ಯದಲ್ಲಿ ₹ 2ಲಕ್ಷ ತನಕ ರೈತರ ಸಾಲ ಮನ್ನಾ ಮಾಡಿದ್ದಾರೆ ತಮಿಳುನಾಡಿನಲ್ಲಿ ರೈತರ ಸಾಲ ಮನ್ನಾ ಮಾಡಿದ್ದಾರೆ. ಕೂಡಲೇ ಕರ್ನಾಟಕದಲ್ಲೂ ಸಾಲ ಮನ್ನಾ ಮಾಡಬೇಕೆಂದು ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಸರ್ಕಾರವನ್ನು ಒತ್ತಾಯಿಸಿದರು.ಪ್ರಮುಖ ಬೇಡಿಕೆಗಳುರೈತ ಮಹಿಳೆಯರು ಸಂಕಷ್ಟದಲ್ಲಿದ್ದಾರೆ. ಗ್ರಾಮೀಣ ಪ್ರದೇಶದ ರೈತ ಮಹಿಳೆಯರು ಖಾಸಗಿ ಫೈನಾನ್ಸ್ಗಳಿಂದ ವಾರ ಹಾಗೂ ತಿಂಗಳ ಆಧಾರದ ಮೇಲೆ ಪಡೆದಿರುವ ಸಾಲಗಳ ಮರುಪಾವತಿಸಲು ಕಷ್ಟವಾಗುತ್ತಿದೆ ಇಂತಹ ಸಾಲದ ವಸೂಲಾತಿಯನ್ನು ಮುಂದಿನ ಎರಡು ವರ್ಷಗಳವರೆಗೆ ಸ್ಥಗಿತಗೊಳಿಸಲು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.ಸಚಿವರು ಹಾಗೂ ಶಾಸಕರು ರೈತರ ಬರದ ಸಂಕಷ್ಟದ ಪರಿಸ್ಥಿತಿಯಲ್ಲಿ ತಮ್ಮ ಒಂದು ವರ್ಷದ ಸಂಬಳ ಸಾರಿಗೆಯನ್ನು ತೆಗೆದುಕೊಳ್ಳಬಾರದು. ಇದರಿಂದ ಉಳಿತಾಯವಾಗುವ ಹಣವನ್ನು ರೈತರ ಸಂಕಷ್ಟಕ್ಕೆ ನೆರವು ನೀಡಬೇಕು. ಸಂಕಷ್ಟದಲ್ಲಿರುವ ಬರಗಾಲ ಪೀಡಿತ ರೈತರಿಗೆ ಎಕರೆಗೆ ಕನಿಷ್ಠ ₹ 25 ಸಾವಿರ ಪರಿಹಾರಧನ ತಕ್ಷಣವೇ ಬಿಡುಗಡೆ ಮಾಡಬೇಕು. ದಸರಾ ಹೆಸರಿನಲ್ಲಿ ಮೂರು ಕೋಟಿ ಯೂನಿಟ್ ವಿದ್ಯುತ್ ಬಳಸಿ ದೀಪ ಅಲಂಕಾರ ಮಾಡುವುದನ್ನು ನಿಲ್ಲಿಸಬೇಕು. ದೇಶದ ಜನರಿಗೆ ಆಹಾರ ಉತ್ಪಾದಿಸುವ ರೈತರ ಕೃಷಿ ಪಂಪ್ಸೆಟ್ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಯಿಂದ ಒಣಗುತ್ತಿರುವ ಬೆಳೆಗಳನ್ನು ರಕ್ಷಿಸಿ ಕೂಡಲೇ ಸಮರ್ಪಕ ವಿದ್ಯುತ್ ಪೂರೈಸಬೇಕು. ಕಬ್ಬಿನಿಂದ ಉತ್ಪಾದಿಸುವ ಸಕ್ಕರೆ ಬೆಲೆಯನ್ನು ವಾಣಿಜ್ಯ ಬಳಕೆ ಪ್ರತ್ಯೇಕವಾದ ದರ ಗ್ರಾಹಕ ಬಳಕೆದಾರರಿಗೆ ಸಾಮಾನ್ಯ ದರ ನಿಗದಿ ಮಾಡಬೇಕು. ಕಬ್ಬಿನ ಉತ್ಪಾದನಾ ವೆಚ್ಚವು ಗಣನೀಯವಾಗಿ ಏರಿಕೆಯಾಗಿರುವುದರಿಂದ, ಕೇಂದ್ರ ಸರ್ಕಾರವು ಕಬ್ಬಿನ ಎಫ್ಆರ್ಪಿ (FRP) ದರವನ್ನು. ಕನಿಷ್ಠ 10.25 ಇಳುವರಿಗೆ ₹4500 ಗೆ ಹೆಚ್ಚಿಸಬೇಕು. ಸಕ್ಕರೆ ನಿಯಂತ್ರಣ ಕಾಯ್ದೆ1966 ಪ್ರಕಾರ ಕಬ್ಬಿನ ಉಪ ಉತ್ಪನಗಳ ಲಾಭ ಹಂಚಿಕೆ ಹಾಗೂ ರಾಜ್ಯ ಸರ್ಕಾರಕ್ಕೆ ಸಿಗುವ ತೆರಿಗೆ ಹಣದಿಂದ ರಾಜ್ಯ ಸರ್ಕಾರವು ತಮಿಳುನಾಡು ಮಾದರಿಯಲ್ಲಿ ಕಬ್ಬಿನ ಎಸ್ಎಪಿ (SAP)ದರವನ್ನು ಎಫ್ ಆರ್ ಪಿ ದರಕ್ಕೆ ಹೆಚ್ಚುವರಿ ಆಗಿ ಪ್ರತಿ ಟನ್ಗೆ ₹ 800 ಗೆ ಏರಿಕೆ ಮಾಡಬೇಕು.ಅಡಿಕೆ ಬೆಳೆಗಾರರು ಗುಟ್ಕಾ ನಿಷೇಧ ಪ್ರಕರಣದಿಂದ ಬೆಲೆ ಕುಸಿತಗೊಂಡು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಇಂತಹ ರೈತರಿಗೆ ಪ್ರೋತ್ಸಾಹದಾಯಕ ಯೋಜನೆ ಜಾರಿಗೆ ತರಬೇಕು. ಮುಖಂಡರಾದ ಸುರೇಶ್ ಮ ಪಾಟೀಲ್, ನರಸಾರೆಡ್ಡಿ, ಪೊಲೀಸ್ ಪಟೇಲ್, ಕರಿಬಸಪ್ಪಗೌಡ, ಗುರುಸಿದ್ದಪ್ಪ, ದೇವಕುಮಾರ್, ಎಲ್ಲಪ್ಪನಾಯಕ, ಧರ್ಮರಾಜ್,ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್, ಕಿರಗಸೂರು ಶಂಕರ್, ಮೂಕಳ್ಳಿ ಮಹದೇವಸ್ವಾಮಿ,ಮಾರ್ಬಳ್ಳಿ ನೀಲಕಂಠಪ್ಪ, ಉಡಿಗಾಲ ರೇವಣ್ಣ, ಶ್ರೀನಿವಾಸಲು ಉಪಸ್ಥಿತರಿದ್ದರು. ಕುರುಬೂರು ಶಾಂತಕುಮಾರ್, ರಾಜ್ಯಾಧ್ಯಕ್ಷ ಕಬ್ಬು ಬೆಳೆಗಾರರ ಸಂಘರಾಜ್ಯದಲ್ಲಿ ತೀವ್ರ ಬರಗಾಲದಿಂದ ಕೃಷಿ ಕ್ಷೇತ್ರ ಸಂಕಷ್ಟಕ್ಕೆ ಸಿಲುಕಿದ್ದು, ಲಕ್ಷಾಂತರ ರೈತ ಕುಟುಂಬಗಳು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿವೆ. ಮಳೆಯ ಕೊರತೆ, ಬೆಳೆ ನಾಶ, ಕೃಷಿ ಉತ್ಪಾದನಾ ವೆಚ್ಚದ ಏರಿಕೆ, ವಿದ್ಯುತ್ ಸಮಸ್ಯೆ ಹಾಗೂ ಸಾಲದ ಹೊರೆಗಳಿಂದ ರೈತರು ಕಂಗಾಲಾಗಿದ್ದಾರೆ. ಕೇವಲ ತಾತ್ಕಾಲಿಕ ಪರಿಹಾರಕ್ಕೆ ಸೀಮಿತವಾಗದೆ, ಶಾಶ್ವತ ಪರಿಹಾರ ಕಲ್ಪಿಸಬೇಕು.ಬೆಂಗಳೂರಿನಲ್ಲಿ ರೈತರು ಪ್ರತಿಭಟನೆ ನಡೆಸಿದರು.