ದೇವನಹಳ್ಳಿ| ಕೆಐಎನಲ್ಲಿ ಲೈಂಗಿಕ ಕಿರುಕುಳ: ವ್ಯವಸ್ಥಾಪಕನ ವಿರುದ್ಧ ಪ್ರಕರಣ
ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಟರ್ಮಿನಲ್–2ರಲ್ಲಿ ಆಹಾರ ಮತ್ತು ಪಾನೀಯ ಸೇವಾ ಸಂಸ್ಥೆಯ ಮಹಿಳಾ ಸಿಬ್ಬಂದಿಗೆ ಮಾನವ ಸಂಪನ್ಮೂಲ (ಎಚ್ಆರ್) ವಿಭಾಗದ ವ್ಯವಸ್ಥಾಪಕ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಸಂತ್ರಸ್ತ ಮಹಿಳಾ ಸಿಬ್ಬಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಮೇ ತಿಂಗಳಿನಲ್ಲಿ ಗ್ರಾಹ ಸ

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಟರ್ಮಿನಲ್–2ರಲ್ಲಿ ಆಹಾರ ಮತ್ತು ಪಾನೀಯ ಸೇವಾ ಸಂಸ್ಥೆಯ ಮಹಿಳಾ ಸಿಬ್ಬಂದಿಗೆ ಮಾನವ ಸಂಪನ್ಮೂಲ (ಎಚ್ಆರ್) ವಿಭಾಗದ ವ್ಯವಸ್ಥಾಪಕ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಸಂತ್ರಸ್ತ ಮಹಿಳಾ ಸಿಬ್ಬಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಮೇ ತಿಂಗಳಿನಲ್ಲಿ ಗ್ರಾಹ ಸೇವಾ ವಿಭಾಗದ ಅತಿಥಿ ಸಹಾಯಕಿಯಾಗಿ (ಜಿಎಸ್ಎ) ಕೆಲಸಕ್ಕೆ ಸೇರಿದ್ದ 26 ವರ್ಷದ ಯುವತಿ ಮೇಲೆ ಸೆಪ್ಟೆಂಬರ್ 24ರಿಂದ ಎಚ್ಆರ್ ವಿಭಾಗದ ವ್ಯವಸ್ಥಾಪಕ ನೆಲ್ಸನ್ ಎಂಬುವರು ನಿರಂತರವಾಗಿ ಕಿರುಕುಳ ನೀಡುತ್ತಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ.‘ಆರೋಪಿ ನೆಲ್ಸನ್ ನನ್ನ ಮೊಬೈಲ್ ಪಡೆದು, ಪರಿಶೀಲಿಸುತ್ತಿದ್ದ. ಇತರರೊಂದಿಗೆ ಮಾತನಾಡದಂತೆ ನಿರ್ಬಂಧ ವಿಧಿಸುತ್ತಿದ್ದ. ಜೊತೆಗೆ ಎದೆಯ ಭಾಗದಲ್ಲಿರುವ ಹಚ್ಚೆ ತೋರಿಸುವಂತೆ ಪೀಡಿಸುತ್ತಿದ್ದ’ ಎಂದು ಸಂತ್ರಸ್ತ ಯುವತಿ ದೂರಿನಲ್ಲಿ ತಿಳಿಸಿದ್ದಾರೆ.ಸೆ. 30ರಂದು ಕೆಲಸದ ಸ್ಥಳದಲ್ಲಿನ ಕೊಠಡಿಗೆ ಕರೆಸಿಕೊಂಡ ಆರೋಪಿಯು, ತನ್ನ ಬಟ್ಟೆಗಳನ್ನು ಬಿಚ್ಚಿಸಿ ಅಸಭ್ಯವಾಗಿ ವರ್ತಿಸಿದ್ದ. ನಾನೂ, ನನ್ನ ಬಟ್ಟೆ ಬಿಚ್ಚಬೇಕು ಎಂದು ಒತ್ತಾಯಿಸಿದ್ದ ಎಂದು ಯುವತಿ ಆರೋಪಿಸಿದ್ದಾರೆ.ಈ ವೇಳೆ ಯುವತಿ ಕೊಠಡಿಯಿಂದ ತಪ್ಪಿಸಿಕೊಂಡು ಹೊರಬಂದಿದ್ದು, ನಡೆದ ಘಟನೆಯನ್ನು ಸ್ನೇಹಿತರು ಮತ್ತು ಕುಟುಂಬದ ಸದಸ್ಯರಿಗೆ ತಿಳಿಸಿದ್ದಾರೆ. ಬಳಿಕ ಪೊಲೀಸರಿಗೆ ದೂರು ನೀಡಿದ್ದು, ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.ದೊಡ್ಡಬಳ್ಳಾಪುರ: ತಾಲ್ಲೂಕಿನ ಹೆಗ್ಗಡಿಹಳ್ಳಿ ಗ್ರಾಮದ ರಸ್ತೆ ಬದಿ ನಡೆದು ಹೋಗುತ್ತಿದ್ದ ವೃದ್ಧನ ಮೇಲೆ ಕ್ರೇನ್ ಹರಿದು, ವೃದ್ಧ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ.ಚಿಕ್ಕಮಗಳೂರು ಜಿಲ್ಲೆಯ ಕಡೂರು ನಿವಾಸಿ ವೆಂಕಟೇಶ್ (65) ಮೃತರು. ಗ್ರಾಮದ ಸಮೀಪದ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ವೆಂಕಟೇಶ್, ಶನಿವಾರ ರಾತ್ರಿ ರಸ್ತೆ ಬದಿಯಲ್ಲಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.261012-15-706619514