ನಾನಾ ಪಾಟೇಕರ್ ನಿಧನ – ರಕ್ತನಾಳದಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಹೃದಯಾಘಾತ: ಮರಣೋತ್ತರ ವರದಿಯಲ್ಲಿ ದೃಢ
ಮುಂಬೈ: ಬಾಲಿವುಡ್ನ ಹಿರಿಯ ನಟ ನಾನಾ ಪಾಟೇಕರ್ (Nana Patekar) ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಮರಣೋತ್ತರ ಪರೀಕ್ಷೆಯ ವರದಿ ದೃಢಪಡಿಸಿದೆ. ಹೃದಯಕ್ಕೆ ರಕ್ತ ಪೂರೈಸುವ ಪ್ರಮುಖ ರಕ್ತನಾಳದಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ತೀವ್ರ ಹೃದಯಾಘಾತ ಸಂಭವಿಸಿದೆ ಎಂದು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ರಾಮರ

ಮುಂಬೈ: ಬಾಲಿವುಡ್ನ ಹಿರಿಯ ನಟ ನಾನಾ ಪಾಟೇಕರ್ (Nana Patekar) ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಮರಣೋತ್ತರ ಪರೀಕ್ಷೆಯ ವರದಿ ದೃಢಪಡಿಸಿದೆ. ಹೃದಯಕ್ಕೆ ರಕ್ತ ಪೂರೈಸುವ ಪ್ರಮುಖ ರಕ್ತನಾಳದಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ತೀವ್ರ ಹೃದಯಾಘಾತ ಸಂಭವಿಸಿದೆ ಎಂದು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ರಾಮರಸ ಸಿನಿಮಾದಲ್ಲಿ ರೋರಿಂಗ್ ಸ್ಟಾರ್ ಶ್ರೀಮುರಳಿ ಅಕ್ಟೋಬರ್ 8ರಂದು ಗೋವಾದ ತಮ್ಮ ನಿವಾಸದಲ್ಲಿ ಮುಂಜಾನೆ 5:10ರ ಸುಮಾರಿಗೆ ನಾನಾ ಪಾಟೇಕರ್ ಸಾವನ್ನಪ್ಪಿದ್ದರು. ಪಣಜಿ ಪೊಲೀಸರು ಅಸಹಜ ಸಾವು ಅಂತ ಕೇಸ್ ದಾಖಲಿಸಿಕೊಂಡಿದ್ದರು. ಇದೀಗ, ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಹೃದಯದ ಎಡ ಮುಖ್ಯ ಕೊರೊನರಿ ಧಮನಿಯಲ್ಲಿ ರಕ್ತ ಹೆಪ್ಪುಗಟ್ಟುವಿಕೆಯಿಂದ ತೀವ್ರ ಹೃದಯ ಸ್ನಾಯುವಿನ ಸಾವು ಸಂಭವಿಸಿದೆ ಎಂದು ಉಲ್ಲೇಖಿಸಿದೆ. ಅಪಧಮನಿಗಳಲ್ಲಿ ಕೊಬ್ಬಿನ ಪದಾರ್ಥಗಳು ಶೇಖರಣೆಯಾಗಿ ರಕ್ತನಾಳ ಕಿರಿದಾಗುವ ಅಥವಾ ಮುಚ್ಚಿಹೋಗುವ ಕಾಯಿಲೆಯ ಹಿನ್ನೆಲೆಯಲ್ಲಿ ಈ ಸ್ಥಿತಿ ಉಂಟಾಗಿದೆ. ಇದನ್ನು ಸಹಜ ಸಾವಿನ ಕಾರಣವೆಂದು ವರದಿಯಲ್ಲಿ ದಾಖಲಿಸಲಾಗಿದೆ.ಇದನ್ನೂ ಓದಿ: ದಸರಾ ಸಂಭ್ರಮ – ಬಿಗ್ಬಾಸ್ ಮನೆಗೆ ಎಂಟ್ರಿ ಕೊಟ್ಟ ಅಗ್ನಿಪರೀಕ್ಷೆಯ ಲಕ್ಷ್ಮಿ, ಕುಮಾರಿ