ಪ್ರಜ್ವಲ್ ರೇವಣ್ಣ ಬೆಳಗಾವಿ ಜೈಲಿಗೆ ಶಿಫ್ಟ್ ಹೈಡ್ರಾಮಾ: ತುಮಕೂರಿನವರೆಗೂ ಕರೆದೊಯ್ದು ಮತ್ತೆ ವಾಪಸ್
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಗಳ ಅಪರಾಧಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಅವರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ(Hindalga Jail) ಸ್ಥಳಾಂತರಿಸುವ ಪ್ರಕ್ರಿಯೆಯಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬೆಳಗಾವಿಗೆ(Belagavi) ಕರೆದೊಯ್ಯುತ್ತಿದ್ದ ಪೊಲೀಸರು, ಮಾರ್ಗಮಧ್ಯೆ ತುಮಕೂರಿನ ತನಕ ತಲ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಗಳ ಅಪರಾಧಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಅವರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ(Hindalga Jail) ಸ್ಥಳಾಂತರಿಸುವ ಪ್ರಕ್ರಿಯೆಯಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬೆಳಗಾವಿಗೆ(Belagavi) ಕರೆದೊಯ್ಯುತ್ತಿದ್ದ ಪೊಲೀಸರು, ಮಾರ್ಗಮಧ್ಯೆ ತುಮಕೂರಿನ ತನಕ ತಲುಪಿದ ಬಳಿಕ ದಿಢೀರ್ ವಾಪಸ್ ಬೆಂಗಳೂರಿಗೆ ಮರಳಿದ್ದಾರೆ. ಶನಿವಾರ ಸಂಜೆ ಸಿಎಆರ್ (CAR) ಎಸ್ಕಾರ್ಟ್ ಪೊಲೀಸರು ಬಿಗಿ ಭದ್ರತೆಯೊಂದಿಗೆ ಪ್ರಜ್ವಲ್ ರೇವಣ್ಣ ಅವರನ್ನು ಬೆಳಗಾವಿ ಹಿಂಡಲಗಾ ಜೈಲಿಗೆ ಕರೆದೊಯ್ಯುತ್ತಿದ್ದರು. ವಾಹನ ತುಮಕೂರು ತಲುಪುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರಿಂದ ಬೆಂಗಾವಲು ಪಡೆಗೆ ತುರ್ತು ಕರೆ ಬಂದಿದೆ. ಮೇಲಧಿಕಾರಿಗಳ ಸೂಚನೆಯ ಮೇರೆಗೆ ಸಿಎಆರ್ ಸಿಬ್ಬಂದಿ ವಾಹನವನ್ನು ತಕ್ಷಣವೇ ತಿರುಗಿಸಿ, ರಾತ್ರಿಯೇ ಮತ್ತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ(Parappana Agrahara) ಕರೆತಂದಿದ್ದಾರೆ. ಇದನ್ನೂ ಓದಿ: ದಸರಾ ರಜೆ ಹೊತ್ತಲ್ಲೇ ಪದವಿ ಪರೀಕ್ಷೆ- ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿನಿಯರ ಪ್ರತಿಭಟನೆ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಎರಡು ಪ್ರಮುಖ ಪ್ರಕರಣಗಳ ವಿಚಾರಣೆ (ಟ್ರಯಲ್) ಪ್ರಸ್ತುತ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿದೆ. ನ್ಯಾಯಾಲಯದ ವಿಚಾರಣೆಯ ಸಂದರ್ಭದಲ್ಲಿ ಕೆಲ ಪ್ರಮುಖ ಹಂತಗಳಲ್ಲಿ ಆರೋಪಿ/ಅಪರಾಧಿ ಖುದ್ದು ಕೋರ್ಟ್ಗೆ ಹಾಜರಿರಬೇಕಾಗುತ್ತದೆ. ಒಂದು ವೇಳೆ ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಿದರೆ ಪ್ರತಿ ಬಾರಿಯ ವಿಚಾರಣೆಗೂ ಅಲ್ಲಿಂದ ಬೆಂಗಳೂರಿಗೆ ಕರೆತರುವುದು ಭದ್ರತೆ ಮತ್ತು ತಾಂತ್ರಿಕ ದೃಷ್ಟಿಯಿಂದ ಕಷ್ಟವಾಗಲಿದೆ ಎಂಬ ಕಾರಣಕ್ಕೆ ಕೊನೆ ಕ್ಷಣದಲ್ಲಿ ಶಿಫ್ಟಿಂಗ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ, ವಾಪಸ್ ಬೆಂಗಳೂರಿನ ಜೈಲಿನಲ್ಲೇ ಉಳಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.