ಲೈಂಗಿಕ ಕಿರುಕುಳ ಆರೋಪ: JNU ಮಾಜಿ ಪ್ರಾಧ್ಯಾಪಕ ಬಿಮೋಲ್ ಅಕೋಯಿಜಮ್ ವಿರುದ್ಧ FIR
ನವದೆಹಲಿ: ಲೈಂಗಿಕ ಕಿರುಕುಳ ಮತ್ತು ಮಹಿಳೆಯರ ಘನತೆಗೆ ಧಕ್ಕೆ ತರುವ ಆರೋಪದಡಿ ಜವಾಹರ್ಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್ಯು) ಮಾಜಿ ಪ್ರಾಧ್ಯಾಪಕ ಬಿಮೋಲ್ ಅಕೋಯಿಜಮ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.ವಿಶ್ವವಿದ್ಯಾಲಯದ ಮುಖ್ಯ ಭದ್ರತಾ ಅಧಿಕಾರಿ ನೀಡಿದ ದೂರಿನ ಮೇರೆಗೆ ಅಕ್ಟೋಬರ್ 11ರಂದು ಎಫ್ಐಆರ್ ದಾಖಲಿಸಲಾಗಿದೆ ಎಂದ

ನವದೆಹಲಿ: ಲೈಂಗಿಕ ಕಿರುಕುಳ ಮತ್ತು ಮಹಿಳೆಯರ ಘನತೆಗೆ ಧಕ್ಕೆ ತರುವ ಆರೋಪದಡಿ ಜವಾಹರ್ಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್ಯು) ಮಾಜಿ ಪ್ರಾಧ್ಯಾಪಕ ಬಿಮೋಲ್ ಅಕೋಯಿಜಮ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.ವಿಶ್ವವಿದ್ಯಾಲಯದ ಮುಖ್ಯ ಭದ್ರತಾ ಅಧಿಕಾರಿ ನೀಡಿದ ದೂರಿನ ಮೇರೆಗೆ ಅಕ್ಟೋಬರ್ 11ರಂದು ಎಫ್ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ವಿವಿಧ ಸೆಕ್ಷನ್ಗಳ ಅಡಿಯಲ್ಲಿ ವಸಂತ್ ಕುಂಜ್ ನಾರ್ತ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಈ ಸೆಕ್ಷನ್ಗಳು ಲೈಂಗಿಕ ಕಿರುಕುಳ ಮತ್ತು ಮಹಿಳೆಯ ಘನತೆಗೆ ಧಕ್ಕೆ ತರುವ ಕೃತ್ಯಗಳಿಗೆ ಸಂಬಂಧಿಸಿವೆ. ‘ಕ್ಯಾಂಪಸ್ನ ಆವರಣದಲ್ಲಿರುವ ತನ್ನ ನಿವಾಸಕ್ಕೆ ವಿದ್ಯಾರ್ಥಿನಿಯರನ್ನು ಸಭೆಯ ಹೆಸರಿನಲ್ಲಿ ಕರೆಸಿಕೊಳ್ಳುತ್ತಿದ್ದ ಬಿಮೋಲ್ ಅವರು ಲೈಂಗಿಕ ಕಿರುಕುಳ ನೀಡಿದ್ದರು. ಅಲ್ಲದೇ ತರಗತಿಯಲ್ಲೂ ಅಶ್ಲೀಲ ಹಾಗೂ ಅನುಚಿತವಾದ ಭಾಷೆ ಮೂಲಕ ಕಿರುಕುಳ ನೀಡುತ್ತಿದ್ದರು’ ಎಂದು ವಿದ್ಯಾರ್ಥಿನಿಯರು ಆಂತರಿಕ ಸಮಿತಿಗೆ ದೂರು ನೀಡಿದ್ದರು. ಲೈಂಗಿಕ ಕಿರುಕುಳ ಆರೋಪ ಕುರಿತು ಅಕ್ಟೋಬರ್ 9ರಂದು ತಕ್ಷಣದಿಂದಲೇ ಜಾರಿಗೆ ಬರುವಂತೆ ಬಿಮೋಲ್ ಅವರನ್ನು ವಜಾಗೊಳಿಸಲಾಗಿತ್ತು. ಆದರೆ, ಈ ಆರೋಪಗಳನ್ನು ಅವರು ನಿರಾಕರಿಸಿದ್ದಾರೆ.ಬಿಮೋಲ್ ವಿರುದ್ಧ ಕೇಳಿಬಂದ ಆರೋಪಕ್ಕೆ ಸಂಬಂಧಿಸಿ ಆಂತರಿಕ ಸಮಿತಿಯ ವರದಿ ಆಧರಿಸಿ ಕಠಿಣ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಜೆಎನ್ಯು ಆದೇಶದಲ್ಲಿ ತಿಳಿಸಿದೆ.