ಎಸ್ಐಆರ್: ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್
ನವದೆಹಲಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಶೀಲನೆ (ಎಸ್ಐಆರ್) ಪ್ರಕ್ರಿಯೆ ಪ್ರಶ್ನಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಭಾರತೀಯ ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.ಎಸ್ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದ್ದು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕೆಂದು ಒತ್ತಾಯಿ

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಶೀಲನೆ (ಎಸ್ಐಆರ್) ಪ್ರಕ್ರಿಯೆ ಪ್ರಶ್ನಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಭಾರತೀಯ ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.ಎಸ್ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದ್ದು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟ ಪ್ರತಿಭಟನೆ ನಡೆಸುತ್ತಿರುವುದರ ನಡುವೆಯೇ ಈ ಅರ್ಜಿ ಸಲ್ಲಿಕೆಯಾಗಿದೆ.ಅರ್ಜಿ ಸಲ್ಲಿಕೆಗೂ ಮುನ್ನ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಸೇರಿದಂತೆ ಇತರ ವಿರೋಧ ಪಕ್ಷಗಳ ನಾಯಕರೊಂದಿಗೆ ಸೋಮವಾರ ಸುಪ್ರೀಂ ಕೋರ್ಟ್ಗೆ ಪಾದಯಾತ್ರೆ ನಡೆಸಿದರು.ಎಸ್ಐಆರ್ ಪ್ರಕ್ರಿಯೆ ಮತ್ತು ಚುನಾವಣಾ ಆಯೋಗದ ಕಾರ್ಯನಿರ್ವಹಣೆಗೆ ಸಂಬಂಧಿಸಿದ ವಿಷಯಗಳನ್ನು ಚರ್ಚಿಸಲು ಭೇಟಿಗೆ ಸಮಯ ಕೋರಿ ರಾಹುಲ್ ಗಾಂಧಿ ಸೇರಿ ವಿರೋಧ ಪಕ್ಷಗಳ ನಾಯಕರು ಪತ್ರ ಬರೆದಿದ್ದರೂ, ಅವರನ್ನು ಭೇಟಿಯಾಗಲು ಸಿಜೆಐ ಸೂರ್ಯಕಾಂತ್ ಅವರು ನಿರಾಕರಿಸಿದ ಮರುದಿನವೇ ಈ ಬೆಳವಣಿಗೆ ನಡೆದಿದೆ.ಎಸ್ಐಆರ್ ಪ್ರಕ್ರಿಯೆಯ ಕುರಿತು ಕಳವಳ ವ್ಯಕ್ತಪಡಿಸಲು ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಮನವಿ ಪತ್ರ ಸಲ್ಲಿಸಲು ರಾಹುಲ್ ಗಾಂಧಿ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರೂ ಆಗಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿಜೆಐ ಭೇಟಿಗೆ ಸಮಯ ಕೋರಿದ್ದರು.ಆದರೆ, ಚರ್ಚಿಸಲು ಬಯಸುವ ವಿಷಯಗಳು ಈಗಾಗಲೇ ಸುಪ್ರೀಂ ಕೋರ್ಟ್ನಲ್ಲಿ ಬಾಕಿಯಿರುವುದರಿಂದ ಸಿಜೆಐ ಅವರು ಈ ಭೇಟಿಯ ವಿನಂತಿಯನ್ನು ನಿರಾಕರಿಸಿದರು. ಅಲ್ಲದೆ, ನ್ಯಾಯಾಲಯವು ಸರ್ಕಾರದ ಆಡಳಿತಾತ್ಮಕ ಕಾರ್ಯನಿರ್ವಹಣೆಯಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಜೊತೆಗೆ, ಸೂಕ್ತ ಪರಿಹಾರಕ್ಕಾಗಿ ನ್ಯಾಯಾಂಗದ ಮೊರೆ ಹೋಗಲು ಎಲ್ಲರೂ ಮುಕ್ತರಾಗಿದ್ದಾರೆ ಎಂದು ಸ್ಪಷ್ಟಪಡಿಸಿದ್ದರು.ಎಸ್ಐಆರ್ ಪ್ರಕ್ರಿಯೆಗೆ ಸಂಬಂಧಿಸಿದ ವಿಷಯಗಳ ಕುರಿತು ಮಂಗಳವಾರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ವಿರೋಧ ಪಕ್ಷದ ನಾಯಕರು ಸಲ್ಲಿಸುವ ಯಾವುದೇ ಅರ್ಜಿಯನ್ನೂ ಬಾಕಿಯಿರುವ ವಿಷಯಗಳೊಂದಿಗೆ ಪರಿಗಣಿಸಬಹುದು ಎಂದು ಸಿಜೆಐ ಸೂಚಿಸಿದ್ದರು.