ಧಾರವಾಡ | ಶಾರ್ಟ್ ಸರ್ಕ್ಯೂಟ್ನಿಂದ ಸ್ಟೀಲ್ ಅಂಗಡಿಗೆ ಬೆಂಕಿ; ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ
ಧಾರವಾಡ: ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಸ್ಟೀಲ್ ಅಂಗಡಿಗೆ ಬೆಂಕಿ ( Fire Accident) ತಗುಲಿದ ಪರಿಣಾಮ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮವಾಗಿರುವ ಘಟನೆ ಧಾರವಾಡದ (Dharwad) ಸವದತ್ತಿ ರಸ್ತೆಯಲ್ಲಿ ಸಂಭವಿಸಿದೆ. ಸವದತ್ತಿ ರಸ್ತೆಯಲ್ಲಿರುವ ಲಕ್ಷ್ಮೀ ಸ್ಟೀಲ್ ಟ್ರೇಡರ್ಸ್ ಎಂಬ ಅಂಗಡಿಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಅಂಗಡಿಯ ಮಾಲೀಕರು ಭಾನುವಾರ ರಾತ್ರಿ ಕೆಲಸ ಮುಗಿ

ಧಾರವಾಡ: ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಸ್ಟೀಲ್ ಅಂಗಡಿಗೆ ಬೆಂಕಿ ( Fire Accident) ತಗುಲಿದ ಪರಿಣಾಮ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮವಾಗಿರುವ ಘಟನೆ ಧಾರವಾಡದ (Dharwad) ಸವದತ್ತಿ ರಸ್ತೆಯಲ್ಲಿ ಸಂಭವಿಸಿದೆ. ಸವದತ್ತಿ ರಸ್ತೆಯಲ್ಲಿರುವ ಲಕ್ಷ್ಮೀ ಸ್ಟೀಲ್ ಟ್ರೇಡರ್ಸ್ ಎಂಬ ಅಂಗಡಿಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಅಂಗಡಿಯ ಮಾಲೀಕರು ಭಾನುವಾರ ರಾತ್ರಿ ಕೆಲಸ ಮುಗಿಸಿ, ಅಂದು ವ್ಯಾಪಾರವಾಗಿದ್ದ ಹಣವನ್ನೂ ಅಂಗಡಿಯಲ್ಲೇ ಇಟ್ಟು ಬೀಗ ಹಾಕಿಕೊಂಡು ಹೋಗಿದ್ದರು. ಇದ್ದಕ್ಕಿದ್ದಂತೆ ಅಂಗಡಿಯೊಳಗೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ. ಕ್ಷಣಾರ್ಧದಲ್ಲೇ ಬೆಂಕಿ ಇಡೀ ಅಂಗಡಿಯನ್ನ ಆವರಿಸಿದೆ. ಶಾಪ್ನಲ್ಲಿದ್ದ ಲಕ್ಷಾಂತರ ರೂಪಾಯಿ ಬೆಲೆಬಾಳುವ ವಸ್ತುಗಳು ಸುಟ್ಟು ಭಸ್ಮವಾಗಿವೆ.ಇದನ್ನೂ ಓದಿ: ಪ್ರತಿಭಟನಾ ತಾಣವನ್ನಲ್ಲ, ಜನರ ಧ್ವನಿಯನ್ನೇ ಹತ್ತಿಕ್ಕುವ ಯತ್ನ: ಕೇಂದ್ರದ ವಿರುದ್ಧ ದೀಪ್ಕೆ ಕಿಡಿ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಧಾರವಾಡ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಐದಾರು ವರ್ಷಗಳಿಂದ ದಸರಾ ಮಿಸ್ ಮಾಡಿಕೊಳ್ತಿದ್ದೆ, ಈ ಬಾರಿ ಆಹ್ವಾನ ಬಂದ ತಕ್ಷಣವೇ ಒಪ್ಪಿಕೊಂಡೆ: ಪ್ರಭುದೇವ