ಮೋದಿ, ಶಾ, ಜ್ಞಾನೇಶ್ ಸುತ್ತಲೂ ಕಾನೂನಿನ ಉರುಳು ಬಿಗಿಯಾಗುತ್ತಿದೆ: ರಾಹುಲ್ ಗಾಂಧಿ
ನವದೆಹಲಿ: ದೇಶದ ಸಂವಿಧಾನವನ್ನು ನಾಶಪಡಿಸಿದವರನ್ನು ನ್ಯಾಯಾಂಗ ವಿಚಾರಣೆಗೆ ಒಳಪಡಿಸುವುದು ನಮ್ಮ ಕರ್ತವ್ಯ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಸುತ್ತಲೂ ಕಾನೂನಿನ ಉರುಳು ಬಿಗಿಯಾಗುತ್ತಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.ಆಯುಕ್ತ ಜ್ಞಾನೇಶ್ ಕುಮಾರ್

ನವದೆಹಲಿ: ದೇಶದ ಸಂವಿಧಾನವನ್ನು ನಾಶಪಡಿಸಿದವರನ್ನು ನ್ಯಾಯಾಂಗ ವಿಚಾರಣೆಗೆ ಒಳಪಡಿಸುವುದು ನಮ್ಮ ಕರ್ತವ್ಯ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಸುತ್ತಲೂ ಕಾನೂನಿನ ಉರುಳು ಬಿಗಿಯಾಗುತ್ತಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ಮುಂದುವರಿಸುವ ಕುರಿತು ಚರ್ಚೆ ನಡೆಸಲು ರಾಹುಲ್ ಗಾಂಧಿ ತಮ್ಮ ನಿವಾಸದಲ್ಲಿ ಮಂಗಳವಾರ ಚಹಾಕೂಟವನ್ನು ಆಯೋಜಿಸಿದ್ದರು.ಚಹಾಕೂಟದಲ್ಲಿ ಇಂಡಿಯಾ ಮೈತ್ರಿಕೂಟದ ನಾಯಕರು, ಸಂಸದರು, ವಿದ್ಯಾರ್ಥಿ ಹಾಗೂ ಯುವ ನಾಯಕರು ಮತ್ತು ವಿವಿಧ ಸಂಘಟನೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಈ ವೇಳೆ ಪ್ರತಿಭಟನೆ ಮುಂದುವರಿಸುವ ಕುರಿತು ಚರ್ಚೆ ನಡೆದಿದ್ದು, ವಿವಿಧ ರಾಜ್ಯಗಳಿಗೂ ಪ್ರತಿಭಟನೆ ವಿಸ್ತರಿಸುವ (ವಿಕೇಂದ್ರೀಕರಣ) ಕುರಿತು ಸಲಹೆಗಳು ವ್ಯಕ್ತವಾದವು. ಹಬ್ಬದ ಋತುವಿನ ಹಿನ್ನೆಲೆಯಲ್ಲಿ ದೆಹಲಿಯಲ್ಲಿನ ಪ್ರತಿಭಟನೆಗೆ ತಾತ್ಕಾಲಿಕ ವಿರಾಮ ನೀಡುವ ಬಗ್ಗೆ ಚರ್ಚೆ ನಡೆಯಿತು. ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಮೈತ್ರಿಕೂಟ ನಡೆಸಿದ ಪ್ರತಿಭಟನೆಯನ್ನು ಬೃಹತ್ ಯಶಸ್ಸು ಎಂದು ಬಣ್ಣಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮೋದಿ ಸರ್ಕಾರ ಮತ್ತು ಮತ ಕಳವಿನ ವಿರುದ್ಧದ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.ಎನ್ಸಿಪಿ (ಶರದ್ ಪವಾರ್ ಬಣ) ನಾಯಕಿ ಸುಪ್ರಿಯಾ ಸುಳೆ ಮಾತನಾಡಿ, ‘ದೇಶದ ಸಂವಿಧಾನ ಅಪಾಯದಲ್ಲಿದೆ. ಮತ ಕಳವು ವಿರುದ್ಧ ನಮ್ಮ ಒಗ್ಗಟ್ಟಿನ ಹೋರಾಟ ಮುಂದುವರಿಯುತ್ತದೆ’ ಎಂದರು.ಮೋದಿ ಸರ್ಕಾರದ ‘ಮತ ಕಳವು’ ಜನರ ಮುಂದೆ ಬಯಲಾಗಿದೆ ಎಂದು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಆಕ್ರೋಶ ವ್ಯಕ್ತಪಡಿಸಿದರು.ಸಿಪಿಐ(ಎಂ) ನಾಯಕ ಎಂ.ಎ. ಬೇಬಿ ಮಾತನಾಡಿ, ‘ನಾವು ಪ್ರತಿಭಟನೆಯನ್ನು ಮುಂದುವರಿಸುತ್ತೇವೆ. ಸರ್ಕಾರವು ಮೊದಲು ಮತ ಕಳವು ಮಾಡಿತು, ಈಗ ಪ್ರತಿಭಟನಾ ಸ್ಥಳವನ್ನೇ ಕಳವು ಮಾಡುತ್ತಿದೆ’ ಎಂದು ಗುಡುಗಿದರು.ಕರ್ನಾಟಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಚಹಾ ಕೂಟದಲ್ಲಿ ಭಾಗವಹಿಸಿದ್ದರು.ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ, ಪಕ್ಷದ ನಾಯಕರಾದ ಕೆ. ಸಿ. ವೇಣುಗೋಪಾಲ್, ಜೈರಾಮ್ ರಮೇಶ್, ಶಶಿ ತರೂರ್ ಮತ್ತು ಪವನ್ ಖೇರಾ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.#WATCH | Delhi | Lok Sabha LoP and Congress MP Rahul Gandhi says, "I used the word 'perseverance' at the press conference yesterday—that this team of ours is not going to stop. Sooner or later—whether tomorrow, the day after, in three months, six months, a year, or two years—it… pic.twitter.com/nOsbiaaUUJ— ANI (@ANI) October 13, 2026