ಕೊಳ್ಳೇಗಾಲ: ಕಾವೇರಿ ನದಿಯಲ್ಲಿ ಯುವಕನ ಕೊಳೆತ ಶವ ಪತ್ತೆ
ಕೊಳ್ಳೇಗಾಲ: ತಾಲ್ಲೂಕಿನ ದಾಸನಪುರ ಗ್ರಾಮದ ಕಾವೇರಿ ನದಿಯಲ್ಲಿ ಮೈಸೂರು ಜಿಲ್ಲೆಯ ತಿ. ನರಸೀಪುರ ತಾಲ್ಲೂಕಿನ ಕಾವೇರಿಪುರ ಗ್ರಾಮದ ವೀರಣ್ಣ ಎಂಬುವರ ಮಗ ದರ್ಶನ್ (24) ಅವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.ದರ್ಶನ್ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ನಾಲ್ಕೈದು ದಿನದ ಹಿಂದೆ ತಮ್ಮ ಗ್ರಾಮಕ್ಕೆ ಬಂದಿದ್ದ ಅವರು ಕಾವೇರಿ ನದಿಯ ಬಳಿ ತೆರಳಿದಾಗ

ಕೊಳ್ಳೇಗಾಲ: ತಾಲ್ಲೂಕಿನ ದಾಸನಪುರ ಗ್ರಾಮದ ಕಾವೇರಿ ನದಿಯಲ್ಲಿ ಮೈಸೂರು ಜಿಲ್ಲೆಯ ತಿ. ನರಸೀಪುರ ತಾಲ್ಲೂಕಿನ ಕಾವೇರಿಪುರ ಗ್ರಾಮದ ವೀರಣ್ಣ ಎಂಬುವರ ಮಗ ದರ್ಶನ್ (24) ಅವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.ದರ್ಶನ್ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ನಾಲ್ಕೈದು ದಿನದ ಹಿಂದೆ ತಮ್ಮ ಗ್ರಾಮಕ್ಕೆ ಬಂದಿದ್ದ ಅವರು ಕಾವೇರಿ ನದಿಯ ಬಳಿ ತೆರಳಿದಾಗ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ವಾರಸುದಾರರಿಗೆ ಒಪ್ಪಿಸಿದ್ದಾರೆ.261013-37-12920824
Read the complete story at Prajavani