ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು: ಮೈಸೂರಿನಲ್ಲಿ ಪ್ರಾಯೋಗಿಕ ಜಾರಿಗೆ ನಿರ್ಧಾರ
ಮೈಸೂರು: ಪ್ರತಿ ಮನೆಗೂ ನಲ್ಲಿ ಮೂಲಕ ನೇರವಾಗಿ ಶುದ್ಧ ಕುಡಿಯುವ ನೀರು ಪೂರೈಸುವ ಉದ್ದೇಶದ ‘ಮನೆ ಮನೆಗೆ ಶುದ್ಧ ಜಲ’ ಅಭಿಯಾನವನ್ನು ನಗರದಲ್ಲಿ ಪ್ರಾಯೋಗಿಕವಾಗಿ ಒಂದು ವರ್ಷದೊಳಗೆ ಜಾರಿಗೊಳಿಸಲು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.ಪಾಶ್ಚಿಮಾತ್ಯ ರಾಷ್ಟ್ರಗಳ ಹಲವು ನಗರಗಳಲ್ಲಿ ಮನೆಗಳಿಗೆ ನೇರವ

ಮೈಸೂರು: ಪ್ರತಿ ಮನೆಗೂ ನಲ್ಲಿ ಮೂಲಕ ನೇರವಾಗಿ ಶುದ್ಧ ಕುಡಿಯುವ ನೀರು ಪೂರೈಸುವ ಉದ್ದೇಶದ ‘ಮನೆ ಮನೆಗೆ ಶುದ್ಧ ಜಲ’ ಅಭಿಯಾನವನ್ನು ನಗರದಲ್ಲಿ ಪ್ರಾಯೋಗಿಕವಾಗಿ ಒಂದು ವರ್ಷದೊಳಗೆ ಜಾರಿಗೊಳಿಸಲು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.ಪಾಶ್ಚಿಮಾತ್ಯ ರಾಷ್ಟ್ರಗಳ ಹಲವು ನಗರಗಳಲ್ಲಿ ಮನೆಗಳಿಗೆ ನೇರವಾಗಿ ನಲ್ಲಿಯ ಮೂಲಕ ಶುದ್ಧ ಕುಡಿಯುವ ನೀರನ್ನು ಪೂರೈಸುವ ವ್ಯವಸ್ಥೆ ಜಾರಿಯಲ್ಲಿದೆ. ಇದೇ ಮಾದರಿಯ ವ್ಯವಸ್ಥೆಯನ್ನು ಕರ್ನಾಟಕದಲ್ಲೂ ಪರಿಚಯಿಸುವ ಮೂಲಕ ನಗರ ಪ್ರದೇಶಗಳ ಜನರಿಗೆ ಸುಲಭವಾಗಿ ಶುದ್ಧ ಕುಡಿಯುವ ನೀರು ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಅಭಿಯಾನ ರೂಪಿಸುವ ಕುರಿತು ಸಮಾಲೋಚನೆ ನಡೆಸಲಾಯಿತು.ಒಡಿಶಾದ ಪುರಿ ನಗರದಲ್ಲಿ ಈ ಮಾದರಿಯ ಯೋಜನೆ ಜಾರಿಗೊಳಿಸಲಾಗಿದ್ದು, ಮೈಸೂರು ನಗರವನ್ನು ಪ್ರಾಯೋಗಿಕ ಅನುಷ್ಠಾನಕ್ಕಾಗಿ ಆಯ್ಕೆ ಮಾಡಲಾಯಿತು. ಅಗತ್ಯ ತಾಂತ್ರಿಕ ಅಂಶಗಳು, ಕಾರ್ಯಸಾಧ್ಯತೆ ಹಾಗೂ ಅನುಷ್ಠಾನದ ಸಂದರ್ಭದಲ್ಲಿ ಎದುರಾಗಬಹುದಾದ ಸವಾಲುಗಳ ಕುರಿತು ಚರ್ಚಿಸಲಾಯಿತು.ಸ್ಲಂಗಳ ಸಮಗ್ರ ಪರಿವರ್ತನೆ, ತಂತ್ರಜ್ಞಾನ ಆಧಾರಿತ ಅನುಷ್ಠಾನ, ಸಾಮಾಜಿಕ ಮೂಲಸೌಕರ್ಯಗಳ ಬಲವರ್ಧನೆ ಮತ್ತು ಸುಸ್ಥಿರ ಜೀವನೋಪಾಯ ಮಾದರಿಗಳ ಕುರಿತು ಸಮಾಲೋಚನೆ ನಡೆಸಲಾಯಿತು.ಮೈಸೂರಿನಲ್ಲಿ ಜಾರಿಗೊಳಿಸಿದ ಬಳಿಕ ಸಾಧಕ-ಬಾಧಕಗಳನ್ನು ಸಮಗ್ರವಾಗಿ ಪರಿಶೀಲಿಸಿ, ಇತರ ನಗರಗಳಲ್ಲೂ ವಿಸ್ತರಿಸುವ ಕುರಿತು ನಿರ್ಧರಿಸಲಾಯಿತು.ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಬಿ. ಬಿ. ಕಾವೇರಿ, ಪೌರಾಡಳಿತ ನಿರ್ದೇಶನಾಲಯ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.