“ಕಾಲೇಜಿನಲ್ಲಿ ಗಣೇಶ ಕೂರಿಸಿದ್ದೀವಿ ಅಮ್ಮ” ಎಂದು ಹೋದವನು ಕೆರೆಯಲ್ಲಿ ಮುಳುಗಿ ಸಾವು
ಬೆಂಗಳೂರು: ಕಾಲೇಜಿನಲ್ಲಿ ಗಣೇಶ ಕೂರಿಸಿದ್ದೇವೆ ಎಂದು ಮನೆಯಲ್ಲಿ ಹೇಳಿ ಹೊರಟಿದ್ದ ಕಾಲೇಜು ವಿದ್ಯಾರ್ಥಿಯೊಬ್ಬ (College Student) ಸ್ನೇಹಿತರೊಂದಿಗೆ ಕೆರೆಗೆ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಧಾರುಣ ಘಟನೆ ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟದಲ್ಲಿ(Hesaraghatta Lake) ನಡೆದಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ನಿವಾಸಿಗಳಾದ ವಿಶ್ವನಾಥ್ ಮತ್ತು ಭ

ಬೆಂಗಳೂರು: ಕಾಲೇಜಿನಲ್ಲಿ ಗಣೇಶ ಕೂರಿಸಿದ್ದೇವೆ ಎಂದು ಮನೆಯಲ್ಲಿ ಹೇಳಿ ಹೊರಟಿದ್ದ ಕಾಲೇಜು ವಿದ್ಯಾರ್ಥಿಯೊಬ್ಬ (College Student) ಸ್ನೇಹಿತರೊಂದಿಗೆ ಕೆರೆಗೆ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಧಾರುಣ ಘಟನೆ ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟದಲ್ಲಿ(Hesaraghatta Lake) ನಡೆದಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ನಿವಾಸಿಗಳಾದ ವಿಶ್ವನಾಥ್ ಮತ್ತು ಭವ್ಯ ದಂಪತಿಯ ಪುತ್ರ ಹರ್ಷ (20) ಮೃತಪಟ್ಟ ದುರ್ದೈವಿ. ಸೋಮವಾರ ಮನೆಯಲ್ಲಿ ದೇವರ ಪೂಜೆ ಮುಗಿಸಿದ ಹರ್ಷ, “ನಮ್ಮ ಕಾಲೇಜಿನಲ್ಲಿ ಗಣೇಶನನ್ನು ಪ್ರತಿಷ್ಠಾಪಿಸಿದ್ದೇವೆ” ಎಂದು ತಾಯಿಗೆ ತಿಳಿಸಿ ಮನೆಯಿಂದ ಹೊರಟಿದ್ದನು. ಆದರೆ ಆತ ಕಾಲೇಜಿಗೆ ತೆರಳುವ ಬದಲು, ಸ್ನೇಹಿತರೊಂದಿಗೆ ಹೆಸರಘಟ್ಟ ಕೆರೆಗೆ ಬಂದಿದ್ದಾನೆ. ಈ ವೇಳೆ ಕೆರೆಯಲ್ಲಿ ಈಜಲು ನೀರಿಗೆ ಇಳಿದಿದ್ದು, ಈಜು ಸರಿಯಾಗಿ ಬಾರದ ಕಾರಣ ಆಯತಪ್ಪಿ ಆಳವಾದ ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾನೆ. ಇದನ್ನೂ ಓದಿ: ದೇವಸ್ಥಾನಗಳೇ ಟಾರ್ಗೆಟ್ – ವಿಗ್ರಹ ಕದಿಯುತ್ತಿದ್ದ ಖದೀಮರು ಅರೆಸ್ಟ್ ವಿಷಯ ತಿಳಿಯುತ್ತಿದ್ದಂತೆಯೇ ಸೋಲದೇವನಹಳ್ಳಿ ಠಾಣಾ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಶೋಧ ಕಾರ್ಯ ಆರಂಭಿಸಿದರು. ನಂತರ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರ ನೆರವಿನಿಂದ ಕೆರೆಯಲ್ಲಿ ಶೋಧ ನಡೆಸಿ, ಅಂತಿಮವಾಗಿ ಹರ್ಷನ ಮೃತದೇಹವನ್ನು ನೀರಿನಿಂದ ಹೊರತೆಗೆಯಲಾಗಿದೆ. ಪ್ರಸ್ತುತ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಮಗನ ಅಕಾಲಿಕ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.