ಮುಖ್ಯಮಂತ್ರಿಯನ್ನು ಬದಿಗೆ ತಳ್ಳುವುದೇ ಕಾಂಗ್ರೆಸ್ ಸಂಸ್ಕೃತಿ: ಅಶೋಕ ವಾಗ್ದಾಳಿ
ಬೆಂಗಳೂರು: ಏಳೂವರೆ ಕೋಟಿ ಕನ್ನಡಿಗರ ಪ್ರತಿನಿಧಿಯಾದ ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ನಡೆಸಿಕೊಂಡ ರೀತಿ ಅತ್ಯಂತ ಖಂಡನೀಯ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ದೆಹಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಹೆಚ್ಚು ಕಾರ್ಯಕರ

ಬೆಂಗಳೂರು: ಏಳೂವರೆ ಕೋಟಿ ಕನ್ನಡಿಗರ ಪ್ರತಿನಿಧಿಯಾದ ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ನಡೆಸಿಕೊಂಡ ರೀತಿ ಅತ್ಯಂತ ಖಂಡನೀಯ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ದೆಹಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಹೆಚ್ಚು ಕಾರ್ಯಕರ್ತರು ಬರುತ್ತಾರೆ ಎಂದು ಗೊತ್ತಿದ್ದರೂ ರಾಜ್ಯ ಸರ್ಕಾರ ಮುಖ್ಯಮಂತ್ರಿಗೆ ಸೂಕ್ತವಾದ ಭದ್ರತೆಯನ್ನು ನೀಡಿಲ್ಲ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾತ್ರ ತಮಗೆ ಭದ್ರತೆ ಒದಗಿಸಿಕೊಂಡು ಮುಖ್ಯಮಂತ್ರಿಯನ್ನು ಕಡೆಗಣಿಸಿದ್ದಾರೆ. ಮುಖ್ಯಮಂತ್ರಿ ಎಂಬ ಎಚ್ಚರಿಕೆಯೇ ಇಲ್ಲದ ಅವರೊಂದಿಗೆ ನಿಕೃಷ್ಟವಾಗಿ ನಡೆದುಕೊಂಡು ತಳ್ಳಾಡಿದ್ದಾರೆ ಎಂದು ಆಪಾದಿಸಿದ್ದಾರೆ.ಮುಖ್ಯಮಂತ್ರಿಗಳನ್ನು ಬದಿಗೆ ತಳ್ಳುವುದೇ ಕಾಂಗ್ರೆಸ್ ಸಂಸ್ಕೃತಿ!ಏಳೂವರೆ ಕೋಟಿ ಕನ್ನಡಿಗರ ಪ್ರತಿನಿಧಿಯಾದ ಮುಖ್ಯಮಂತ್ರಿ ಶ್ರೀ @DKShivakumar ಅವರನ್ನು ಕಾಂಗ್ರೆಸ್ ಹೈಕಮಾಂಡ್ ನಡೆಸಿಕೊಂಡ ರೀತಿ ಅತ್ಯಂತ ಖಂಡನೀಯ!ದೆಹಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಹೆಚ್ಚು ಕಾರ್ಯಕರ್ತರು ಬರುತ್ತಾರೆ ಎಂದು ಗೊತ್ತಿದ್ದರೂ ಮುಖ್ಯಮಂತ್ರಿಗಳಿಗೆ… pic.twitter.com/ZaTfkv3qLl— R. Ashoka (@RAshokaBJP) October 13, 2026 ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರೇ, ಇಷ್ಟೆಲ್ಲ ಆಗುವಾಗ ನಿಮ್ಮ ಇಲಾಖೆ ನಿದ್ರೆ ಮಾಡುತ್ತಿತ್ತೇ? ಮುಖ್ಯಮಂತ್ರಿ ಎಲ್ಲೇ ಹೋದರೂ ಅವರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕಾಗಿರುವುದು ಭದ್ರತಾ ಸಿಬ್ಬಂದಿಯ ಕರ್ತವ್ಯವಲ್ಲವೇ? ಕಾಂಗ್ರೆಸ್ ಹೈಕಮಾಂಡ್, ನಮ್ಮ ರಾಜ್ಯದ ನಾಯಕರನ್ನು ಇಷ್ಟು ಕೀಳಾಗಿ ಕಂಡರೂ ಪ್ರಶ್ನೆ ಮಾಡುವ ತಾಕತ್ತಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.ಮುಂದುವರಿದು, ರಾಜಕೀಯ ಏನೇ ಇರಲಿ, ಮುಖ್ಯಮಂತ್ರಿಯನ್ನು ಈ ರೀತಿ ನಡೆಸಿಕೊಳ್ಳುವುದನ್ನು ಯಾರೂ ಒಪ್ಪುವುದಿಲ್ಲ. ಪ್ರತಿ ಬಾರಿಯೂ ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದ ಮುಖ್ಯಮಂತ್ರಿಗಳನ್ನು ಹೀನಾಯವಾಗಿ ನಡೆಸಿಕೊಳ್ಳುವುದು ಇತಿಹಾಸದಲ್ಲೇ ಸಾಬೀತಾಗಿದೆ. ರಾಜ್ಯದ ಸಾಂವಿಧಾನಿಕ ಹುದ್ದೆಯಲ್ಲಿರುವ ಮುಖ್ಯಮಂತ್ರಿಯನ್ನು ಈ ರೀತಿ ನಡೆಸಿಕೊಳ್ಳುವುದೇ ಕಾಂಗ್ರೆಸ್ ನ ಸಂಸ್ಕೃತಿ ಎಂಬುದು ದಿಟವಾಗಿದೆ. ಈ ಕುರಿತು ತನಿಖೆ ನಡೆಸಿ, ಭದ್ರತೆ ಒದಗಿಸದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಿ. ರಾಜ್ಯದ ಗೃಹ ಸಚಿವರು ಹೊಣೆಗಾರಿಕೆ ಹೊತ್ತು ಜನರ ಕ್ಷಮೆ ಯಾಚಿಸಲಿ ಎಂದೂ ಆಗ್ರಹಿಸಿದ್ದಾರೆ.ಸಿ.ಎಂಗೆ ಅವಮಾನ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ: ರವಿಕುಮಾರ್ಏನಿದು ಘಟನೆ:ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ 'ಸುಪ್ರೀಂ ಕೋರ್ಟ್ ಚಲೋ' ಪ್ರತಿಭಟನಾ ಮೆರವಣಿಗೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಹಿಡಿದೆಳೆದ ವಿಡಿಯೊ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ರಾಜಕೀಯ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಡಿಕೆಶಿ ಹಿಡಿದೆಳೆದ ರಾಹುಲ್: ನಿಜಕ್ಕೂ ನಡೆದಿದ್ದೇನು?