ಹಾವೇರಿ | ಕಬ್ಬಿಗೆ 5500 ಬೆಲೆ ನಿಗದಿಗೆ ಆಗ್ರಹ; ಟೋಲ್ಗೇಟ್ ಬಂದ್ ಮಾಡಿ ರೈತರ ಪ್ರತಿಭಟನೆ
ಹಾವೇರಿ: ಕಬ್ಬಿಗೆ ಪ್ರತಿ ಟನ್ಗೆ 5,500 ರೂ. ಬೆಲೆ ನಿಗದಿಪಡಿಸಬೇಕು. ಇಲ್ಲದಿದ್ದರೆ ಹೋರಾಟ ನಿಲ್ಲಿಸುವುದಿಲ್ಲ ಎಂದು ಆಗ್ರಹಿಸಿ ಕಬ್ಬು ಬೆಳೆಗಾರರು ರಾಷ್ಟ್ರೀಯ ಹೆದ್ದಾರಿ 48ರ ಬಂಕಾಪುರ (Haveri)ಟೋಲ್ಗೇಟ್ ಬಂದ್ ಮಾಡಿ (Farmer Protest) ಪ್ರತಿಭಟನೆ ನಡೆಸಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಬಳಿ ನಡೆದ ಪ್ರತಿಭಟನೆಯಲ್ಲಿ ರೈತರು ಬಾರಕೋಲು

ಹಾವೇರಿ: ಕಬ್ಬಿಗೆ ಪ್ರತಿ ಟನ್ಗೆ 5,500 ರೂ. ಬೆಲೆ ನಿಗದಿಪಡಿಸಬೇಕು. ಇಲ್ಲದಿದ್ದರೆ ಹೋರಾಟ ನಿಲ್ಲಿಸುವುದಿಲ್ಲ ಎಂದು ಆಗ್ರಹಿಸಿ ಕಬ್ಬು ಬೆಳೆಗಾರರು ರಾಷ್ಟ್ರೀಯ ಹೆದ್ದಾರಿ 48ರ ಬಂಕಾಪುರ (Haveri)ಟೋಲ್ಗೇಟ್ ಬಂದ್ ಮಾಡಿ (Farmer Protest) ಪ್ರತಿಭಟನೆ ನಡೆಸಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಬಳಿ ನಡೆದ ಪ್ರತಿಭಟನೆಯಲ್ಲಿ ರೈತರು ಬಾರಕೋಲು ಚಳವಳಿ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಪ್ರತಿಕೃತಿ ದಹನಕ್ಕೂ ರೈತರು ಮುಂದಾಗಿದ್ದಾರೆ. ಕಬ್ಬು ಬೆಳೆಯಲು ಹೆಚ್ಚಿನ ವೆಚ್ಚವಾಗುತ್ತಿದೆ. ಆದರೆ, ಬೆಳೆದ ಬೆಳೆಗೆ ನ್ಯಾಯಯುತ ಬೆಲೆ ಸಿಗದಿದ್ದರೆ ರೈತರ ಬದುಕು ಸಂಕಷ್ಟಕ್ಕೆ ಸಿಲುಕಲಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಕಬ್ಬಿಗೆ ಪ್ರತಿ ಟನ್ಗೆ 5,500 ರೂ. ಬೆಲೆ ನಿಗದಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ. ಬೇಡಿಕೆ ಈಡೇರುವವರೆಗೂ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಹೋರಾಟ ಮುಂದುವರಿಯಲಿದೆ. ಕಬ್ಬಿಗೆ 5,500 ರೂ. ಬೆಲೆ ನಿಗದಿಪಡಿಸುವವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯರನ್ನು ಕೋರ್ಟ್ ಮೆಟ್ಟಿಲೇರುವಂತೆ ಮಾಡಿ, ಕಾಂಗ್ರೆಸ್ Use & Throw ಮಾಡಿದೆ – ಅಶೋಕ್ ಪ್ರತಿಭಟನೆಯ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಹಾವೇರಿ ಎಸ್ಪಿ ಯಶೋಧಾ ವಂಟಗೋಡಿ ಸೇರಿದಂತೆ ಸಾವಿರಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಹೈ ರಿಸ್ಕ್ ಖಾಯಿಲೆ ಔಷಧಿಗಳಿಗೆ ದುಪ್ಪಟ್ಟು ದರ ವಸೂಲಿ ವರದಿ – `ಪಬ್ಲಿಕ್ ಟಿವಿ’ಗೆ ಧನ್ಯವಾದ ಹೇಳಿದ ಸಚಿವ ಖಾದರ್