ಶುದ್ಧ ನೀರು, ಸ್ವಚ್ಛತೆಗೆ ಆದ್ಯತೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ
ಮೈಸೂರು: ನಗರ ಸ್ಥಳೀಯ ಸಂಸ್ಥೆಗಳು, ನಗರಪಾಲಿಕೆಗಳ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರಿನ ಪೂರೈಕೆ ಹಾಗೂ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ನಗರಗಳ ಸರ್ವಾಂಗೀಣ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.ಇಲ್ಲಿನ ಜಿಪಂ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕುಡಿಯುವ ನೀರು

ಮೈಸೂರು: ನಗರ ಸ್ಥಳೀಯ ಸಂಸ್ಥೆಗಳು, ನಗರಪಾಲಿಕೆಗಳ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರಿನ ಪೂರೈಕೆ ಹಾಗೂ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ನಗರಗಳ ಸರ್ವಾಂಗೀಣ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.ಇಲ್ಲಿನ ಜಿಪಂ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕುಡಿಯುವ ನೀರು ಮತ್ತು ಘನ ತ್ಯಾಜ್ಯ ನಿರ್ವಹಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಘನ ತಾಜ್ಯ ನಿರ್ವಹಣೆಯನ್ನು ವ್ಯವಸ್ಥಿತವಾಗಿ ಮಾಡಬೇಕು. ಮೈಸೂರು ಸುಂದರವಾದ ನಗರ. ಕಸವನ್ನು ಹಸಿ ಮತ್ತು ಒಣ ಕಸವಾಗಿ ಮನೆಯಿಂದಲೇ ಬೇರ್ಪಡಿಸಿ ಪಡೆದುಕೊಳ್ಳಬೇಕು. ಹಸಿ ಕಸವನ್ನು ಗೊಬ್ಬರ ತಯಾರಿಕೆಯಲ್ಲಿ ಬಳಕೆ ಹಾಗೂ ಒಣ ಕಸವನ್ನು ಮರುಬಳಕೆ ವಸ್ತುಗಳ ತಯಾರಿಕೆಯಲ್ಲಿ ಬಳಸಬೇಕು ಎಂದರು.ಒಡಿಶಾದ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಂ.ಜಿ. ಮತಿವತಾನನ್ ಅಲ್ಲಿ ಕೈಗೊಂಡಿರುವ ಅಭಿವೃದ್ಧಿ ಯೋಜನೆಗಳಳ ಮಾಹಿತಿ ನೀಡಿದರು.ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಬಿ.ಬಿ. ಕಾವೇರಿ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಮಹೇಶ್, ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕ ರವೀಂದ್ರ, ಮಹಾನಗರ ಪಾಲಿಕೆ ಆಯುಕ್ತೆ ಎಂ.ಕೆ. ಸವಿತಾ ಉಪಸ್ಥಿತರಿದ್ದರು.