ಭಾರತೀಯ ಸೇನೆಗೆ 1.25 ಲಕ್ಷ ಮೆಟ್ರಿಕ್ ಟನ್ ಭಾರತ್ ರೈಸ್ ಮೀಸಲು
ನವದೆಹಲಿ: ಭಾರತೀಯ ಯೋಧರಿಗೆ ಗುಣಮಟ್ಟದ ಅಕ್ಕಿ ಪೂರೈಸುವ ಉದ್ದೇಶದಿಂದ ಕೇಂದ್ರ ಆಹಾರ ಇಲಾಖೆ 1.25 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಪ್ರತ್ಯೇಕವಾಗಿ ಮೀಸಲಿಟ್ಟಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ (Pralhad Joshi) ತಿಳಿಸಿದ್ದಾರೆ. ದೆಹಲಿಯಲ್ಲಿ ಸೋಮವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಸಮ್ಮುಖದಲ್ಲಿ ಭಾರತೀಯ ಸೇನೆಗೆ ಗು

ನವದೆಹಲಿ: ಭಾರತೀಯ ಯೋಧರಿಗೆ ಗುಣಮಟ್ಟದ ಅಕ್ಕಿ ಪೂರೈಸುವ ಉದ್ದೇಶದಿಂದ ಕೇಂದ್ರ ಆಹಾರ ಇಲಾಖೆ 1.25 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಪ್ರತ್ಯೇಕವಾಗಿ ಮೀಸಲಿಟ್ಟಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ (Pralhad Joshi) ತಿಳಿಸಿದ್ದಾರೆ. ದೆಹಲಿಯಲ್ಲಿ ಸೋಮವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಸಮ್ಮುಖದಲ್ಲಿ ಭಾರತೀಯ ಸೇನೆಗೆ ಗುಣಮಟ್ಟದ ‘ಭಾರತ್ ರೈಸ್’ (Bharat Rice) ಪೂರೈಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಜೋಶಿ, ಯೋಧರಿಗೆ ಉತ್ತಮ ಗುಣಮಟ್ಟದ ಆಹಾರ ಪೂರೈಸಲು ಆಹಾರ ಇಲಾಖೆ ಬದ್ಧವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಲಡಾಖ್ ಭಾರತದ ಅವಿಭಾಜ್ಯ ಭಾಗ, ಇದನ್ನು ಯಾರೂ ಅಲ್ಲಗಳೆಯಲಾಗದು: ಚೀನಾಗೆ ಟಕ್ಕರ್ ನಾಫೆಡ್ (NAFED) ಜೊತೆಗಿನ ಸಾಂಸ್ಥಿಕ ವ್ಯವಸ್ಥೆಯ ಮೂಲಕ ಭಾರತೀಯ ಸೇನೆಗೆ ಗುಣಮಟ್ಟದ ಅಕ್ಕಿ ಪೂರೈಸಲು ಕ್ರಮ ಕೈಗೊಳ್ಳಲಾಗಿದೆ. ಯೋಧರಿಗಾಗಿ ಮೀಸಲಿಟ್ಟಿರುವ ಅಕ್ಕಿಯ ಪೂರೈಕೆಯಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು. ‘ಭಾರತ್ ರೈಸ್’ ಮಾನದಂಡಗಳ ಪ್ರಕಾರ ಅಕ್ಕಿಯಲ್ಲಿ ಒಡೆದ ಕಾಳುಗಳ ಪ್ರಮಾಣ ಗರಿಷ್ಠ ಶೇ.5 ರಷ್ಟು ಇರಲಿದ್ದು, ನಿಗದಿತ ಗುಣಮಟ್ಟದ ಅಕ್ಕಿ ಲಭ್ಯವಾಗುವುದನ್ನು ಖಚಿತಪಡಿಸಲಾಗುತ್ತದೆ ಎಂದು ಸಚಿವರು ವಿವರಿಸಿದರು. ಇದನ್ನೂ ಓದಿ: ಗಾಂಧಿನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಜಯ – ಕಾಂಗ್ರೆಸ್ಗೆ 5, ಸೊನ್ನೆ ಸುತ್ತಿದ ಆಪ್ ಸೇನೆ–ಎಫ್ಸಿಐ ನಡುವೆ ತಿಳಿವಳಿಕೆ ಒಪ್ಪಂದ ಕಾರ್ಯಾಚರಣೆಗಳ ತುರ್ತು ಸಂದರ್ಭಗಳಲ್ಲಿಯೂ ಸೈನಿಕರಿಗೆ ಆಹಾರ ಪೂರೈಕೆಯನ್ನು ಖಚಿತಪಡಿಸುವ ಉದ್ದೇಶದಿಂದ ಭಾರತೀಯ ಸೇನೆ ಮತ್ತು ಭಾರತೀಯ ಆಹಾರ ನಿಗಮ (FCI) ನಡುವೆ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಲಾಯಿತು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸಮ್ಮುಖದಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು.