ಗುಂಡ್ಲುಪೇಟೆ: ಸೋಮಹಳ್ಳಿ ಗ್ರಾಮದ ಬಳಿ ಚಿರತೆ ಪ್ರತ್ಯಕ್ಷ; ನಾಗರಿಕರಲ್ಲಿ ಆತಂಕ
ಗುಂಡ್ಲುಪೇಟೆ: ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಹೊರ ವಲಯದ ಜಮೀನಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ರೈತರು ಹಾಗೂ ಗ್ರಾಮಸ್ಥರು ಆತಂಕಗೊಂಡಿದ್ದಾರೆ.ಸೋಮಹಳ್ಳಿ ಗ್ರಾಮದ ಕಾಡುಬಸವೇಶ್ವರ ದೇವಸ್ಥಾನದ ಸಮೀಪದಲ್ಲಿರುವ ಕೃಷ್ಣ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಚಿರತೆ ಓಡಾಡಿದೆ. ಟ್ರ್ಯಾಕ್ಟರ್ ಮೂಲಕ ಹೊಲ ಉಳುಮೆ ಮಾಡುತ್ತಿದ್ದವರೊಬ್ಬರು ಇದನ್ನು ಗಮನಿಸಿದ್ದಾರೆ.ತಾಲ್ಲೂಕಿನ ವಿ

ಗುಂಡ್ಲುಪೇಟೆ: ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಹೊರ ವಲಯದ ಜಮೀನಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ರೈತರು ಹಾಗೂ ಗ್ರಾಮಸ್ಥರು ಆತಂಕಗೊಂಡಿದ್ದಾರೆ.ಸೋಮಹಳ್ಳಿ ಗ್ರಾಮದ ಕಾಡುಬಸವೇಶ್ವರ ದೇವಸ್ಥಾನದ ಸಮೀಪದಲ್ಲಿರುವ ಕೃಷ್ಣ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಚಿರತೆ ಓಡಾಡಿದೆ. ಟ್ರ್ಯಾಕ್ಟರ್ ಮೂಲಕ ಹೊಲ ಉಳುಮೆ ಮಾಡುತ್ತಿದ್ದವರೊಬ್ಬರು ಇದನ್ನು ಗಮನಿಸಿದ್ದಾರೆ.ತಾಲ್ಲೂಕಿನ ವಿವಿಧೆಡೆ ಚಿರತೆ ಓಡಾಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರೈತರು ಆತಂಕ ವ್ಯಕ್ತಪಡಿಸಿದ್ದು, ಜಮೀನುಗಳಲ್ಲಿ ಕೃಷಿ ಚಟುವಟಿಕೆ ನಡೆಸಲು ಭಯಪಡುವಂತಾಗಿದೆ. ಆದ್ದರಿಂದ ಅರಣ್ಯ ಇಲಾಖೆ ಅಧಿಕಾರಿಗಳು ಸೋಮಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಬೋನ್ ಇರಿಸಿ ಚಿರತೆ ಸೆರೆಹಿಡಿಯಬೇಕು ಎಂದು ರೈತರು ಒತ್ತಾಯಿಸಿದ್ದಾರೆ.261013-37-873965891
Read the complete story at Prajavani