ಚಳಿಗಾಲದಲ್ಲೂ ಬಿರು ಬಿಸಿಲು: ಕಲಬುರಗಿಯನ್ನು ಹಿಂದಿಕ್ಕಿದ ಮಂಗಳೂರು, ಕಾರವಾರ
ಬೆಂಗಳೂರು: ಕರ್ನಾಟಕದ ಹಲವು ಭಾಗಗಳಲ್ಲಿ ಚಳಿಗಾಲದ ಆರಂಭದಲ್ಲೇ ಬಿಸಿಲು ಹೆಚ್ಚಿದೆ. ಕಲಬುರಗಿ, ಬೀದರ್, ರಾಯಚೂರು ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಕಳೆದ ಕೆಲ ದಿನಗಳಿಂದ ಉಷ್ಣಾಂಶದ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ.ಈಗ ಕರಾವಳಿ ಭಾಗದಲ್ಲೂ ಬಿಸಿಲ ಪ್ರಮಾಣ ಏರಿಕೆಯಾಗಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲೂ ಬಿಸಿಲ ಧಗೆ ಹೆಚ್ಚಿದೆ. ಕಳೆದ 24 ಗಂಟೆ ಅ

ಬೆಂಗಳೂರು: ಕರ್ನಾಟಕದ ಹಲವು ಭಾಗಗಳಲ್ಲಿ ಚಳಿಗಾಲದ ಆರಂಭದಲ್ಲೇ ಬಿಸಿಲು ಹೆಚ್ಚಿದೆ. ಕಲಬುರಗಿ, ಬೀದರ್, ರಾಯಚೂರು ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಕಳೆದ ಕೆಲ ದಿನಗಳಿಂದ ಉಷ್ಣಾಂಶದ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ.ಈಗ ಕರಾವಳಿ ಭಾಗದಲ್ಲೂ ಬಿಸಿಲ ಪ್ರಮಾಣ ಏರಿಕೆಯಾಗಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲೂ ಬಿಸಿಲ ಧಗೆ ಹೆಚ್ಚಿದೆ. ಕಳೆದ 24 ಗಂಟೆ ಅವಧಿಯಲ್ಲಿ ಕಲಬುರಗಿಯಷ್ಟೇ ಉಷ್ಣಾಂಶ ಕಾರವಾರದಲ್ಲೂ ದಾಖಲಾಗಿದೆ. ಇದಲ್ಲದೇ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯಧಿಕ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಕಲಬುರಗಿ ಹಾಗೂ ಕಾರವಾರದಲ್ಲಿ ಗರಿಷ್ಠ ಉಷ್ಣಾಂಶದ ಪ್ರಮಾಣ 369 ಡಿಗ್ರಿ ಸೆಲ್ಸಿಯಸ್ನಷ್ಟು ದಾಖಲಾಗಿದೆ.ರಾಯಚೂರಿನಲ್ಲಿ 36.5 ಡಿಗ್ರಿ ಸೆಲ್ಸಿಯಸ್, ಯಾದಗಿರಿಯಲ್ಲಿ 36.2 ಡಿಗ್ರಿ ಸೆಲ್ಸಿಯಸ್, ಬೀದರ್ನಲ್ಲಿ 36.1 ಡಿಗ್ರಿ ಸೆಲ್ಸಿಯಸ್, ಹಾವೇರಿ ಹಾಗೂ ಉಡುಪಿಯಲ್ಲಿ 36 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿತ್ತು.ಬೆಳಗಾವಿಯಲ್ಲಿ 35.6 ಡಿಗ್ರಿ ಸೆಲ್ಸಿಯಸ್, ಬಾಗಲಕೋಟೆಯಲ್ಲಿ 35.5 ಡಿಗ್ರಿ ಸೆಲ್ಸಿಯಸ್, ವಿಜಯಪುರದಲ್ಲಿ 35.4 ಡಿಗ್ರಿ ಸೆಲ್ಸಿಯಸ್, ಬಳ್ಳಾರಿಯಲ್ಲಿ 35.1 ಡಿಗ್ರಿ ಸೆಲ್ಸಿಯಸ್, ಧಾರವಾಡದಲ್ಲಿ 35 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.ಕೊಪ್ಪಳದಲ್ಲಿ 34.7 ಡಿಗ್ರಿ ಸೆಲ್ಸಿಯಸ್, ದಾವಣಗೆರೆಯಲ್ಲಿ 34.6 ಡಿಗ್ರಿ ಸೆಲ್ಸಿಯಸ್, ಗದಗ ಹಾಗೂ ಶಿವಮೊಗ್ಗದಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.ವಿಜಯನಗರದಲ್ಲಿ 33.7 ಡಿಗ್ರಿ ಸೆಲ್ಸಿಯಸ್, ಚಿತ್ರದುರ್ಗದಲ್ಲಿ 33.3 ಡಿಗ್ರಿ ಸೆಲ್ಸಿಯಸ್, ಮೈಸೂರು ಹಾಗೂ ಚಾಮರಾಜನಗರದಲ್ಲಿ 33.2 ಡಿಗ್ರಿ ಸೆಲ್ಸಿಯಸ್, ತುಮಕೂರಿನಲ್ಲಿ 32.9 ಡಿಗ್ರಿ ಸೆಲ್ಸಿಯಸ್, ಮಂಡ್ಯದಲ್ಲಿ 32.7, ಹಾಸನದಲ್ಲಿ 32.2 ಡಿಗ್ರಿ ಸೆಲ್ಸಿಯಸ್, ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿತ್ತು.ಬೆಂಗಳೂರು ದಕ್ಷಿಣದಲ್ಲಿ 32.6 ಡಿಗ್ರಿ , ಬೆಂಗಳೂರು ನಗರದಲ್ಲಿ 32 ಡಿಗ್ರಿ ಸೆಲ್ಸಿಯಸ್, ಕೊಡಗಿನಲ್ಲಿ 31.9 ಡಿಗ್ರಿ ಸೆಲ್ಸಿಯಸ್, ಸೆಲ್ಸಿಯಸ್, ಚಿಕ್ಕಬಳ್ಳಾಪುರದಲ್ಲಿ 31.8 ಡಿಗ್ರಿ ಸೆಲ್ಸಿಯಸ್, ಬೆಂಗಳೂರು ಗ್ರಾಮಾಂತರದಲ್ಲಿ 31.6 ಡಿಗ್ರಿ ಸೆಲ್ಸಿಯಸ್, ಕೋಲಾರದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.ಉಷ್ಣಾಂಶದ ಮಾಹಿತಿ