ಬಿಹಾರ: ದೋಣಿ ಮಗುಚಿ 13 ಮಂದಿ ಸಾವು
ಹಾಜಿಪುರ: ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಗಂಗಾ ನದಿಯಲ್ಲಿ ದೋಣಿ ಮಗುಚಿ ಬಿದ್ದು ಕನಿಷ್ಠ 13 ಮಂದಿ ಮೃತಪಟ್ಟಿದ್ದಾರೆ.‘ದುರಂತಕ್ಕೀಡಾದ ದೋಣಿಯಲ್ಲಿ ಸುಮಾರು 20 ಮಂದಿ ಪ್ರಯಾಣಿಸುತ್ತಿದ್ದರು. ಮೃತರಲ್ಲಿ ಹೆಚ್ಚಿನವರು ಮಕ್ಕಳು’ ಎಂದು ಮೂಲಗಳು ತಿಳಿಸಿವೆ. ನದಿಯ ಇನ್ನೊಂದು ಬದಿಯ ಗ್ರಾಮದಲ್ಲಿ ಆಯೋಜಿಸಿದ್ದ ಔತಣಕೂಟದಲ್ಲಿ ಪಾಲ್ಗೊಳ್ಳಲು ಜನರು ತೆರಳುತ

ಹಾಜಿಪುರ: ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಗಂಗಾ ನದಿಯಲ್ಲಿ ದೋಣಿ ಮಗುಚಿ ಬಿದ್ದು ಕನಿಷ್ಠ 13 ಮಂದಿ ಮೃತಪಟ್ಟಿದ್ದಾರೆ.‘ದುರಂತಕ್ಕೀಡಾದ ದೋಣಿಯಲ್ಲಿ ಸುಮಾರು 20 ಮಂದಿ ಪ್ರಯಾಣಿಸುತ್ತಿದ್ದರು. ಮೃತರಲ್ಲಿ ಹೆಚ್ಚಿನವರು ಮಕ್ಕಳು’ ಎಂದು ಮೂಲಗಳು ತಿಳಿಸಿವೆ. ನದಿಯ ಇನ್ನೊಂದು ಬದಿಯ ಗ್ರಾಮದಲ್ಲಿ ಆಯೋಜಿಸಿದ್ದ ಔತಣಕೂಟದಲ್ಲಿ ಪಾಲ್ಗೊಳ್ಳಲು ಜನರು ತೆರಳುತ್ತಿದ್ದಾಗ ವೈಶಾಲಿ ಜಿಲ್ಲೆಯ ರಾಘೋಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರು ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಹಾಗೂ ಬಿಹಾರ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರು ತಲಾ ₹4 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ.ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗೆ ಎನ್ಡಿಆರ್ಎಫ್ ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ಮೃತದೇಹಗಳ ಪತ್ತೆಗಾಗಿ ನಡೆಯುತ್ತಿರುವ ಶೋಧದಲ್ಲಿ ಸ್ಥಳೀಯ ಗ್ರಾಮಸ್ಥರು ಕೂಡ ಕೈಜೋಡಿಸಿದ್ದಾರೆ.
Read the complete story at Prajavani