ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತ, ಅರಾಜಕತೆ ಸೃಷ್ಟಿ : ಬಸವರಾಜ ಬೊಮ್ಮಾಯಿ
ರಾಣೆಬೆನ್ನೂರು: ರಾಜ್ಯ ಸರ್ಕಾರದಲ್ಲಿ ಯಾವುದೇ ಸ್ಥಿರತೆ ಇಲ್ಲದೆ, ಎಲ್ಲಾ ಕಡೆ ಅಭಿವೃದ್ಧಿ ಕುಂಠಿತಗೊಂಡು ಭ್ರಷ್ಟಾಚಾರ ಮತ್ತು ಆಡಳಿತ ಪಕ್ಷದ ಆಂತರಿಕ ಕಚ್ಚಾಟದಿಂದ ಅರಾಜಕತೆ ಸೃಷ್ಟಿಯಾಗಿದೆ’ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.ನಗರದ ಬಿಜೆಪಿ ಕಾರ್ಯಾಲಯದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ ನಂತಹ ಹೊ

ರಾಣೆಬೆನ್ನೂರು: ರಾಜ್ಯ ಸರ್ಕಾರದಲ್ಲಿ ಯಾವುದೇ ಸ್ಥಿರತೆ ಇಲ್ಲದೆ, ಎಲ್ಲಾ ಕಡೆ ಅಭಿವೃದ್ಧಿ ಕುಂಠಿತಗೊಂಡು ಭ್ರಷ್ಟಾಚಾರ ಮತ್ತು ಆಡಳಿತ ಪಕ್ಷದ ಆಂತರಿಕ ಕಚ್ಚಾಟದಿಂದ ಅರಾಜಕತೆ ಸೃಷ್ಟಿಯಾಗಿದೆ’ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.ನಗರದ ಬಿಜೆಪಿ ಕಾರ್ಯಾಲಯದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ ನಂತಹ ಹೊಸ ವಿವಾದಗಳು ಹುಟ್ಟಿಕೊಂಡಿವೆ’ ಎಂದರು.‘ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರು ಈಗಾಗಲೇ ಎರಡು ಬಾರಿ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದು, ಸಾರ್ವಜನಿಕ ಮತ್ತು ವಿಧಾನ ಪರಿಷತ್ತಿನಲ್ಲಿ ಅತ್ಯಂತ ಸಕ್ರಿಯವಾಗಿ ಭಾಗವಹಿಸಿದ್ದಾರೆ. ನಾಲ್ಕು ಜಿಲ್ಲೆಗಳ ಎಲ್ಲಾ ತಾಲ್ಲೂಕುಗಳಲ್ಲಿ ಪದವೀಧರ ಮತದಾರರಿಂದ ಸಂಕನೂರ ಅವರಿಗೆ ಅತ್ಯುತ್ತಮ ಬೆಂಬಲ ಇದೆ. ಅವರಿಗೆ ಮತ ನೀಡಬೇಕು’ ಎಂದು ಹೇಳಿದರು.ರಾಜ್ಯದಲ್ಲಿ ಹಿಂದೆಂದೂ ಕಾಣದ ಆರ್ಥಿಕ ಸಂಕಷ್ಟ ಎದುರಾಗಿದೆ. ಲೋಕೋಪಯೋಗಿ, ಪಂಚಾಯತ್ ರಾಜ್ ಗುತ್ತಿಗೆದಾರರಿಗೆ ಬಾಕಿ ಬಿಲ್ ಪಾವತಿಸದೇ, ಅಭಿವೃದ್ಧಿ ಕೆಲಸಗಳು ಸಂಪೂರ್ಣವಾಗಿ ಸ್ಥಗಿತಗೊಂಡಿವೆ. ಕಳೆದ 3 ವರ್ಷಗಳಲ್ಲಿ ನೀರಾವರಿ ಕ್ಷೇತ್ರಕ್ಕೆ ಅನುದಾನ ನೀಡದೇ ಅಭಿವೃದ್ಧಿ ಶೂನ್ಯವಾಗಿದೆ’ ಎಂದು ದೂರಿದರು.ಈ ಸಂದರ್ಭದಲ್ಲಿ ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಮಾತನಾಡಿದರು. ಮಾಜಿ ಶಾಸಕರಾದ ವಿರೂಪಾಕ್ಷಪ್ಪ ಬಳ್ಳಾರಿ, ಅರುಣ್ ಕುಮಾರ್ ಪೂಜಾರ, ಎಸ್.ಎಸ್. ರಾಮಲಿಂಗಣ್ಣನವರ, ಮಂಜುನಾಥ ಕಾಟೆ ಇದ್ದರು.‘ಬರ ನಿರ್ವಹಣೆಯಲ್ಲಿ ವಿಫಲ’‘ಬರಗಾಲ ನಿರ್ವಹಣೆ ಮತ್ತು ಕುಡಿಯುವ ನೀರಿನ ಸಮಸ್ಯೆ ನೀಗಿಸುವಲ್ಲಿ ಹಾಗೂ ಅಗತ್ಯ ಮೂಲ ಸೌಕರ್ಯಗಳಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಬೋರ್ವೆಲ್ ತೆಗೆಯುವುದು, ಪೈಪ್ ಮತ್ತು ಪಂಪ್ಗಳನ್ನು ಒದಗಿಸುವುದರ ಜೊತೆಗೆ ಪ್ರತಿ ಕ್ಷೇತ್ರಕ್ಕೆ ನೀರಿಗಾಗಿ ₹ 5 ಕೋಟಿ ಹಣವನ್ನು ಬಿಡುಗಡೆ ಮಾಡಬೇಕು. ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಹಾಗೂ ಮೇವಿನ ಕಿಟ್ ವಿತರಣೆಗಾಗಿ ಮತ್ತೊಂದು ₹ 5 ಕೋಟಿ ಹಣ ನೀಡಬೇಕು ಎಂದು ಬಸವರಾಜ ಬೊಮ್ಮಾಯಿ ಅವರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.261014-22-476686431