ರಾಜಾನುಕುಂಟೆ ರೈಲ್ವೆ ಯಾರ್ಡ್ನಲ್ಲಿ ಅಗ್ನಿ ಅವಘಡ; ಮೂರು ಬೋಗಿಗಳಿಗೆ ಬೆಂಕಿ
ಬೆಂಗಳೂರು: ರಾಜಧಾನಿ ಬೆಂಗಳೂರು ಹೊರವಲಯದ ರಾಜಾನುಕುಂಟೆಯಲ್ಲಿ (Fire Accident) ನಿಲ್ಲಿಸಿದ್ದ ರೈಲಿನ ಮೂರು ಬೋಗಿಗಳಿಗೆ ಬೆಂಕಿ ತಗುಲಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಬೆಳಗ್ಗೆ ಸುಮಾರು 10:30ರ ವೇಳೆಗೆ ಯಾರ್ಡ್ನಲ್ಲಿ ನಿಲ್ಲಿಸಿದ್ದ ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಮಾಕ್ ಡ್ರಿಲ್ಗಾಗಿ ಬಳಸಲಾಗುತ್ತಿದ್ದ

ಬೆಂಗಳೂರು: ರಾಜಧಾನಿ ಬೆಂಗಳೂರು ಹೊರವಲಯದ ರಾಜಾನುಕುಂಟೆಯಲ್ಲಿ (Fire Accident) ನಿಲ್ಲಿಸಿದ್ದ ರೈಲಿನ ಮೂರು ಬೋಗಿಗಳಿಗೆ ಬೆಂಕಿ ತಗುಲಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಬೆಳಗ್ಗೆ ಸುಮಾರು 10:30ರ ವೇಳೆಗೆ ಯಾರ್ಡ್ನಲ್ಲಿ ನಿಲ್ಲಿಸಿದ್ದ ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಮಾಕ್ ಡ್ರಿಲ್ಗಾಗಿ ಬಳಸಲಾಗುತ್ತಿದ್ದ ಈ ಮೂರು ಬೋಗಿಗಳನ್ನು ಹಲವು ದಿನಗಳಿಂದ ಯಾರ್ಡ್ನಲ್ಲಿ ನಿಲ್ಲಿಸಲಾಗಿತ್ತು. ಬೋಗಿಗಳು ರೈಲ್ವೆ ಹಳಿಯ ಮೇಲೆ ಇರಲಿಲ್ಲ. ಅಲ್ಲದೆ, ಬೋಗಿಗಳಲ್ಲಿ ಯಾರೂ ಇರಲಿಲ್ಲ ಎಂದು ತಿಳಿದುಬಂದಿದೆ. ಆರಂಭದಲ್ಲಿ ಸಣ್ಣ ಪ್ರಮಾಣದಲ್ಲಿ ಕಾಣಿಸಿಕೊಂಡಿದ್ದ ಬೆಂಕಿ, ಬಳಿಕ ವೇಗವಾಗಿ ವ್ಯಾಪಿಸಿದೆ. ಬೆಂಕಿಯ ಪರಿಣಾಮ ಎರಡು ಕೋಚ್ಗಳಿಗೆ ತೀವ್ರ ಹಾನಿಯಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಘಟನೆಯ ಮಾಹಿತಿ ಪಡೆಯಲು ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಯಲಹಂಕ ಎಸ್ಎಂಆರ್ ಕೂಡ ಸ್ಥಳಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.ಇದನ್ನೂ ಓದಿ: 100 ಅಡಿಗೆ ಕುಸಿದ ಕೆಆರ್ಎಸ್ ನೀರಿನ ಮಟ್ಟ ಬೋಗಿಗಳಿಗೆ ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ರೈಲ್ವೆ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.ಇದನ್ನೂ ಓದಿ: ಹಾಸನ ಬಳಿಕ ಕೋಲಾರದಲ್ಲಿಯೂ ಅಧಿಕಾರಿಗಳ ಗುದ್ದಾಟ – ಅರಣ್ಯ ಒತ್ತುವರಿ ತೆರವು ವಿಚಾರದಲ್ಲಿ ವೈಮನಸ್ಸು