ವರದಕ್ಷಿಣೆ ಕಿರುಕುಳ ಆರೋಪ; ಇಬ್ಬರು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆ
– ಪತಿ ಸೇರಿ 6 ಜನರ ವಿರುದ್ಧ ಕೇಸ್ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಒಂದೇ ವೇಲ್ನಲ್ಲಿ ಕಟ್ಟಿ ತುಂಗಭದ್ರಾ ಕಾಲುವೆಗೆ ಎಸೆದು, ಬಳಿಕ ತಾನೂ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬಳ್ಳಾರಿ ನಗರದ ಅಲ್ಲಿಪುರ ಬಳಿಯ ತುಂಗಭದ್ರಾ ಕಾಲುವೆ (Tungabhadra Canal) ಬಳಿ ನಡೆದಿದೆ. ಬಳ್ಳಾರಿ ನಗರದ ಮಿಲ್ಲರ್ ಪ

– ಪತಿ ಸೇರಿ 6 ಜನರ ವಿರುದ್ಧ ಕೇಸ್ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಒಂದೇ ವೇಲ್ನಲ್ಲಿ ಕಟ್ಟಿ ತುಂಗಭದ್ರಾ ಕಾಲುವೆಗೆ ಎಸೆದು, ಬಳಿಕ ತಾನೂ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬಳ್ಳಾರಿ ನಗರದ ಅಲ್ಲಿಪುರ ಬಳಿಯ ತುಂಗಭದ್ರಾ ಕಾಲುವೆ (Tungabhadra Canal) ಬಳಿ ನಡೆದಿದೆ. ಬಳ್ಳಾರಿ ನಗರದ ಮಿಲ್ಲರ್ ಪೇಟೆ ನಿವಾಸಿ ಲತೀಪಾ ಸಿಮ್ರಾನ್ (29) ಹಾಗೂ ಅವರ ಮಕ್ಕಳಾದ ಮಹಮ್ಮದ್ ಅಯಾನ್ (3) ಮತ್ತು ಆಯಿಷಾ ಫಾತಿಮಾ (2) ಮೃತ ದುರ್ದೈವಿಗಳು. ನಿನ್ನೆ ಸಂಜೆ ಲತೀಪಾ ಸಿಮ್ರಾನ್ ಮಕ್ಕಳನ್ನು ಒಂದೇ ವೇಲ್ಗೆ ಕಟ್ಟಿ ಕಾಲುವೆಗೆ ಎಸೆದು, ಬಳಿಕ ತಾನೂ ಕಾಲುವೆಗೆ ಹಾರಿದ್ದಾರೆ. ಇಂದು ಬೆಳಗ್ಗೆ ಲತೀಪಾ ಸಿಮ್ರಾನ್ ಅವರ ಮೃತದೇಹ ಪತ್ತೆಯಾಗಿತ್ತು. ಬಳಿಕ ಕರ್ನಾಟಕದ ಗಡಿಭಾಗದ ನಾಗಲಾಪುರ ಬಳಿ ಇಬ್ಬರು ಮಕ್ಕಳ ಮೃತದೇಹಗಳು ಪತ್ತೆಯಾಗಿವೆ. ವರದಕ್ಷಿಣೆ ಕಿರುಕುಳದ ಆರೋಪ ಲತೀಪಾ ಸಿಮ್ರಾನ್ ಅವರ ಸಾವಿಗೆ ಪತಿಯ ಕಿರುಕುಳವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಪತಿ ಸದ್ದಾಂ ಹುಸೇನ್ ವರದಕ್ಷಿಣೆ ತರುವಂತೆ ಒತ್ತಾಯಿಸಿ, ನಿತ್ಯ ಹಲ್ಲೆ ನಡೆಸುವುದರ ಜೊತೆಗೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದ ಎಂದು ಕುಟುಂಬಸ್ಥರು ದೂರಿದ್ದಾರೆ. ಮಕ್ಕಳು ಬದುಕಿದ್ದರೆ ಅವರಿಗೂ ಕಿರುಕುಳ ನೀಡಬಹುದು ಎಂಬ ಆತಂಕದಿಂದ ಲತೀಪಾ ಸಿಮ್ರಾನ್ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿಗೆ ಸೀಮಿತವಾಗದೆ ರಾಜ್ಯದ ಇತರೆ ಜಿಲ್ಲೆಗಳಲ್ಲೂ ಹೂಡಿಕೆ ಮಾಡಿ: ಝೆಕ್ ಉದ್ಯಮಿಗಳಿಗೆ ಸಿಎಂ ಮನವಿ ಘಟನೆಗೆ ಸಂಬಂಧಿಸಿದಂತೆ ಮೃತ ಮಹಿಳೆಯ ಪತಿ ಸದ್ದಾಂ ಹುಸೇನ್ ಸೇರಿದಂತೆ ಆರು ಜನರ ವಿರುದ್ಧ ಬಳ್ಳಾರಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಸ್ಟಿಂಗ್ ಆಪರೇಷನ್ ಬಗ್ಗೆ ಸಿಎಂ ತನಿಖೆ ನಡೆಸುತ್ತಾರೆ: ಬೇಳೂರು ಗೋಪಾಲಕೃಷ್ಣ