ರಾಹುಲ್ ಗಾಂಧಿ ನಿವಾಸದ ಮೇಲೆ ಗುಂಡಿನ ದಾಳಿ ವಿಡಿಯೊ ನಕಲಿ ಎಂದ ದೆಹಲಿ ಪೊಲೀಸರು
ನವದೆಹಲಿ: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ನಿವಾಸದ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊ ನಕಲಿ ಎಂದು ದೆಹಲಿ ಪೊಲೀಸರು ಬುಧವಾರ ಸ್ಪಷ್ಟಪಡಿಸಿದ್ದಾರೆ.ಈ ಕುರಿತು ‘ಎಕ್ಸ್‘ನಲ್ಲಿ ಮಾಹಿತಿ ನೀಡಿರುವ ಅವರು, ‘ಸಾರ್ವಜನಿಕರ ದಾರಿ ತಪ್ಪಿಸುವ ಇಂತಹ ಸುಳ್ಳು ಮಾಹಿತಿಗಳನ್ನು ಹರಡುವವರ ವಿರುದ್ಧ ಕಾನೂನು ಕ್ರಮ ಜರ

ನವದೆಹಲಿ: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ನಿವಾಸದ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊ ನಕಲಿ ಎಂದು ದೆಹಲಿ ಪೊಲೀಸರು ಬುಧವಾರ ಸ್ಪಷ್ಟಪಡಿಸಿದ್ದಾರೆ.ಈ ಕುರಿತು ‘ಎಕ್ಸ್‘ನಲ್ಲಿ ಮಾಹಿತಿ ನೀಡಿರುವ ಅವರು, ‘ಸಾರ್ವಜನಿಕರ ದಾರಿ ತಪ್ಪಿಸುವ ಇಂತಹ ಸುಳ್ಳು ಮಾಹಿತಿಗಳನ್ನು ಹರಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.Stop spreading fake news. The video shared in this post is out of context and has nothing to do with current events. Sharing malicious misinformation is a punishable criminal offense under cyber laws and penal codes. Suitable legal action will be initiated against defaulters.— Delhi Police (@DelhiPolice) October 14, 2026 ಅಲ್ಲದೇ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳುವ ಮೊದಲು ಅಧಿಕೃತ ಮೂಲಗಳಿಂದ ಪರಿಶೀಲಿಸಿಕೊಳ್ಳುವಂತೆಯೂ ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವಿಡಿಯೊ 2019ರ ಡಿಸೆಂಬರ್ನ ಘಟನೆಗೆ ಸಂಬಂಧಿಸಿದ್ದಾಗಿದೆ. ಪ್ರಸ್ತುತ ಸನ್ನಿವೇಶಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಸಾಮಾಜಿಕ ಮಾಧ್ಯಮ ಬಳಕೆದಾರರು ಇಂತಹ ವದಂತಿಗಳನ್ನು ನಂಬಬಾರದು ಎಂದು ಪೊಲೀಸರು ಮನವಿ ಮಾಡಿದ್ದಾರೆ.