ನರಸಾಪುರ ಕೈಗಾರಿಕಾ ಪ್ರದೇಶ: ಮಹಿಳಾ ಉದ್ಯೋಗಿ ಸಾವು; ಟಾಟಾ ಕಂಪನಿಯಲ್ಲಿ ಪ್ರತಿಭಟನೆ
ಕೋಲಾರ: ತಾಲ್ಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿನ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಉದ್ಯೋಗಿಯೊಬ್ಬರು ಅನಾರೋಗ್ಯದಿಂದ ಮೃತಪಟ್ಟಿದ್ದು, ಕಂಪನಿಯ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿ ಕಾರ್ಮಿಕ ಸಂಘಟನೆಗಳ ಮುಖಂಡರು ಬುಧವಾರ ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.ಮಹಿಳೆಗೆ ಹಾಗೂ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಪ್ರತಿಭಟನಕಾರರ

ಕೋಲಾರ: ತಾಲ್ಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿನ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಉದ್ಯೋಗಿಯೊಬ್ಬರು ಅನಾರೋಗ್ಯದಿಂದ ಮೃತಪಟ್ಟಿದ್ದು, ಕಂಪನಿಯ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿ ಕಾರ್ಮಿಕ ಸಂಘಟನೆಗಳ ಮುಖಂಡರು ಬುಧವಾರ ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.ಮಹಿಳೆಗೆ ಹಾಗೂ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಪ್ರತಿಭಟನಕಾರರು ಘೋಷಣೆ ಕೂಗಿದರು. ನೂರಾರು ನೌಕರರು ಕೆಲಸ ಬಿಟ್ಟು ಒಂದೆಡೆ ಸೇರಿದ್ದರಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿತ್ತು.‘ಮಹಿಳಾ ಉದ್ಯೋಗಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಮಾಹಿತಿ ಗೊತ್ತಾಗಿದೆ. ಕಂಪನಿಯವರು ಆ ಮಹಿಳೆಯನ್ನು ತಡವಾಗಿ ಆಸ್ಪತ್ರೆಗೆ ಸೇರಿಸಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿ ಕಾರ್ಮಿಕ ಸಂಘಟನೆಗಳ ಮುಖಂಡರು ಹಾಗೂ ಇತರ ಉದ್ಯೋಗಿಗಳು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಕಾರರನ್ನು ಭೇಟಿಯಾಗಿ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್ ‘ಪ್ರಜಾವಾಣಿಗೆ ತಿಳಿಸಿದರು.
Read the complete story at Prajavani