ಹಾವೇರಿ | ರೈತರ ಪ್ರತಿಭಟನೆ ಅಂತ್ಯ: ವಾಹನಗಳ ಸಂಚಾರ ಆರಂಭ
ಹಾವೇರಿ: ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಬಂಕಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ರೈತರು ನಡೆಸುತ್ತಿದ್ದ ಪ್ರತಿಭಟನೆ ಅಂತ್ಯವಾಗಿದೆ. ಬಂದ್ ಆಗಿದ್ದ ವಾಹನಗಳ ಸಂಚಾರ ಪುನಃ ಆರಂಭಗೊಂಡಿದ್ದು, ಹೆದ್ದಾರಿಗಳಲ್ಲಿ ವಾಹನಗಳು ನಿಧಾನವಾಗಿ ಸಂಚಾರ ಆರಂಭಿಸಿವೆ.‘ಕಬ್ಬಿಗೆ ಪ್ರತಿ ಟನ್ಗೆ ₹ 5,500 ದರ ನಿಗದಿಪಡಿಸಬೇಕು. ಸ್ವಾಮಿನಾಥನ್ ವರದಿ ಜಾರಿಗೆ ತರಬೇಕು’ ಎಂದು ಆ

ಹಾವೇರಿ: ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಬಂಕಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ರೈತರು ನಡೆಸುತ್ತಿದ್ದ ಪ್ರತಿಭಟನೆ ಅಂತ್ಯವಾಗಿದೆ. ಬಂದ್ ಆಗಿದ್ದ ವಾಹನಗಳ ಸಂಚಾರ ಪುನಃ ಆರಂಭಗೊಂಡಿದ್ದು, ಹೆದ್ದಾರಿಗಳಲ್ಲಿ ವಾಹನಗಳು ನಿಧಾನವಾಗಿ ಸಂಚಾರ ಆರಂಭಿಸಿವೆ.‘ಕಬ್ಬಿಗೆ ಪ್ರತಿ ಟನ್ಗೆ ₹ 5,500 ದರ ನಿಗದಿಪಡಿಸಬೇಕು. ಸ್ವಾಮಿನಾಥನ್ ವರದಿ ಜಾರಿಗೆ ತರಬೇಕು’ ಎಂದು ಆಗ್ರಹಿಸಿ ರೈತರು ಮಂಗಳವಾರದಿಂದ ಪ್ರತಿಭಟನೆ ಆರಂಭಿಸಿದ್ದರು. ಟೋಲ್ನಲ್ಲಿ ಕುಳಿತು ಆಕ್ರೋಶ ಹೊರಹಾಕಿದ್ದರು. ಎರಡನೇ ದಿನವಾದ ಬುಧವಾರವೂ ಹೋರಾಟ ಮುಂದುವರಿಯಿತು.ರಾತ್ರಿ 8 ಗಂಟೆಯವರೆಗೂ ಪ್ರತಿಭಟನೆ ನಡೆಸಿದ ರೈತರು, ರಾಜ್ಯ ಸಂಘದ ಆದೇಶದ ಮೇರೆಗೆ ಪ್ರತಿಭಟನೆ ಹಿಂಪಡೆದಿದ್ದಾಗಿ ಘೋಷಿಸಿದ್ದಾರೆ. ನಂತರ, ಟೋಲ್ ಕಾರ್ಯಾಚರಣೆ ಶುರುವಾಗಿದೆ. ಅಲ್ಲಲ್ಲಿ ನಿಲ್ಲಿಸಿದ್ದ ವಾಹನಗಳನ್ನು ಪೊಲೀಸರು, ಹೆದ್ದಾರಿ ಮೂಲಕ ಸಂಚರಿಸಲು ಅನುಕೂಲ ಮಾಡಿಕೊಡುತ್ತಿದ್ದಾರೆ.ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು, ಅಲ್ಲಿಂದಲೇ ಧಾರವಾಡವರೆಗೂ ಪಾದಯಾತ್ರೆ ನಡೆಯುವುದಾಗಿ ಘೋಷಿಸಿದ್ದಾರೆ. ಹಾವೇರಿ ರೈತರು ಸಹ ಧಾರವಾಡ ಜಿಲ್ಲೆಗೆ ತೆರಳಿದ್ದಾರೆ. ಅದೇ ಕಾರಣಕ್ಕೆ ಪ್ರತಿಭಟನೆ ಹಿಂಪಡೆದಿರುವುದಾಗಿ ರೈತ ಮುಖಂಡರು ತಿಳಿಸಿದ್ದಾರೆ.