ನವರಾತ್ರಿ ಸಂಭ್ರಮದ ನಡುವೆ ಅವಘಡ – ಭಕ್ತರ ಮೇಲೆ ಬಿದ್ದ ಬೃಹತ್ ಲೈಟ್ ಸೆಟ್
ಉಡುಪಿ: ನವರಾತ್ರಿ ಸಂಭ್ರಮದಲ್ಲಿದ್ದ ಭಕ್ತಾದಿಗಳ ಮೇಲೆ ಬೃಹತ್ ಗಾತ್ರದ ಲೈಟ್ ಸೆಟ್ ಉರುಳಿ ಬಿದ್ದ ಘಟನೆ ಬೈಂದೂರು (Byndoor) ತಾಲೂಕಿನ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಮುಂಭಾಗದಲ್ಲಿ ನಡೆದಿದೆ. ಘಟನೆಯಲ್ಲಿ ವಯೋವೃದ್ಧ ಭಕ್ತರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ದೇವಸ್ಥಾನದ ಮುಂಭಾಗದಲ್ಲಿರುವ ವಾಣಿಜ್ಯ ಸಂಕೀರ್ಣದ ಮೇಲ್ಭ

ಉಡುಪಿ: ನವರಾತ್ರಿ ಸಂಭ್ರಮದಲ್ಲಿದ್ದ ಭಕ್ತಾದಿಗಳ ಮೇಲೆ ಬೃಹತ್ ಗಾತ್ರದ ಲೈಟ್ ಸೆಟ್ ಉರುಳಿ ಬಿದ್ದ ಘಟನೆ ಬೈಂದೂರು (Byndoor) ತಾಲೂಕಿನ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಮುಂಭಾಗದಲ್ಲಿ ನಡೆದಿದೆ. ಘಟನೆಯಲ್ಲಿ ವಯೋವೃದ್ಧ ಭಕ್ತರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ದೇವಸ್ಥಾನದ ಮುಂಭಾಗದಲ್ಲಿರುವ ವಾಣಿಜ್ಯ ಸಂಕೀರ್ಣದ ಮೇಲ್ಭಾಗದಲ್ಲಿ ಬೃಹತ್ ಗಾತ್ರದ ಲೈಟ್ ಸೆಟ್ ಅಳವಡಿಸಲಾಗಿತ್ತು. ಇಂದು ಏಕಾಏಕಿ ಬಲವಾಗಿ ಗಾಳಿ ಬೀಸಿದ ಪರಿಣಾಮ ಲೈಟ್ ಸೆಟ್ ಕಟ್ಟಡದ ಮೇಲಿನಿಂದ ಉರುಳಿ ಬಿದ್ದಿದೆ. ಇದನ್ನೂ ಓದಿ: ನವರಾತ್ರಿ ಬಳಿಕ ಬೃಹತ್ ಪ್ರತಿಭಟನೆಗೆ ‘ಇಂಡಿ’ ಒಕ್ಕೂಟ ಸಜ್ಜು ಬಿಸಿಲಿನ ಹಿನ್ನೆಲೆಯಲ್ಲಿ ಕಟ್ಟಡದ ನೆರಳಿನಲ್ಲಿ ನಿಂತಿದ್ದ ಭಕ್ತರ ಮೇಲೆ ಲೈಟ್ ಸೆಟ್ ಬಿದ್ದಿದೆ. ಈ ವೇಳೆ ಮೂವರು ಭಕ್ತರಿಗೆ ಲೈಟ್ ತಗುಲಿದ್ದು, ಲೈಟ್ ಬೀಳುತ್ತಿದ್ದಂತೆ ಭಕ್ತರು ಅದರ ಅಡಿಯಿಂದ ಹೊರಬರಲು ಪ್ರಯತ್ನಿಸಿದ್ದಾರೆ. ಆದರೆ, ವಯೋವೃದ್ಧ ಭಕ್ತರೊಬ್ಬರ ತಲೆಯ ಮೇಲೆ ಲೈಟ್ ಬಿದ್ದ ಪರಿಣಾಮ ಅವರು ಮೇಲೇಳಲಾಗದೆ ಒದ್ದಾಡಿದ್ದಾರೆ. ತಕ್ಷಣ ಸ್ಥಳೀಯರು ಧಾವಿಸಿ ಗಾಯಾಳುಗಳ ಮೇಲಿದ್ದ ಲೈಟ್ ಸೆಟ್ ತೆರವುಗೊಳಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ವಯೋವೃದ್ಧರನ್ನು ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ನವರಾತ್ರಿ ಉತ್ಸವದ ಸಂಭ್ರಮದ ನಡುವೆಯೇ ನಡೆದ ಈ ಅವಘಡ ಭಕ್ತರಲ್ಲಿ ಆತಂಕ ಮೂಡಿಸಿದೆ.