ಮಾರುವೇಶದ ಕಾರ್ಯಾಚರಣೆ | JDS ಕಾರ್ಯಕರ್ತ ವಶಕ್ಕೆ: ಎಚ್.ಡಿ.ಕುಮಾರಸ್ವಾಮಿ ಆಕ್ರೋಶ
ಬೆಂಗಳೂರು: ಜೆಡಿಎಸ್ ಸಾಮಾಜಿಕ ಜಾಲತಾಣ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಯುವಕನನ್ನು ವಶಕ್ಕೆ ಪಡೆದಿರುವ ಪೊಲೀಸರ ಕ್ರಮಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರ ಅಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, 'ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಎಂಟು ವರ್ಷಗಳಿಗೂ ಹೆಚ್ಚುಕಾಲ ರಾಜ್ಯವನ್ನು ಆಳಿದ ಮಾಜಿ ಮುಖ್ಯಮಂ
ಬೆಂಗಳೂರು: ಜೆಡಿಎಸ್ ಸಾಮಾಜಿಕ ಜಾಲತಾಣ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಯುವಕನನ್ನು ವಶಕ್ಕೆ ಪಡೆದಿರುವ ಪೊಲೀಸರ ಕ್ರಮಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರ ಅಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, 'ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಎಂಟು ವರ್ಷಗಳಿಗೂ ಹೆಚ್ಚುಕಾಲ ರಾಜ್ಯವನ್ನು ಆಳಿದ ಮಾಜಿ ಮುಖ್ಯಮಂತ್ರಿ ವರ್ಚಸ್ಸಿಗೆ ಹನಿಟ್ರ್ಯಾಪ್ ಹೆಸರಿನಲ್ಲಿ ಮಸಿ ಬಳಿಯಲು ರೂಪಿಸಿದ ವ್ಯವಸ್ಥಿತ, ಸಂಘಟಿತ ಷಡ್ಯಂತ್ರವನ್ನು ಪ್ರಶ್ನಿಸಿದ್ದಕ್ಕೆ ನನ್ನನ್ನು ಹಾಗೂ ನನ್ನ ಜೊತೆಗಿರುವ ಹುಡುಗರನ್ನು ಟಾರ್ಗೆಟ್ ಮಾಡುತ್ತಿರುವುದು ಲಜ್ಜೆಗೆಡಿತನ' ಎಂದು ಕಿಡಿಕಾರಿದ್ದಾರೆ.ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಎಂಟು ವರ್ಷಗಳಿಗೂ ಹೆಚ್ಚುಕಾಲ ರಾಜ್ಯವನ್ನು ಆಳಿದ ಮಾಜಿ ಮುಖ್ಯಮಂತ್ರಿ ವರ್ಚಸ್ಸಿಗೆ ಹನಿಟ್ರ್ಯಾಪ್ ಹೆಸರಿನಲ್ಲಿ ಮಸಿ ಬಳಿಯಲು ರೂಪಿಸಿದ ವ್ಯವಸ್ಥಿತ, ಸಂಘಟಿತ ಷಡ್ಯಂತ್ರವನ್ನು ಪ್ರಶ್ನಿಸಿದ್ದಕ್ಕೆ ನನ್ನನ್ನು ಹಾಗೂ ನನ್ನ ಜೊತೆಗಿರುವ ಹುಡುಗರನ್ನು ಟಾರ್ಗೆಟ್ ಮಾಡುತ್ತಿರುವುದು ಲಜ್ಜೆಗೆಡಿತನ.ಯಾವುದೇ…— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) October 14, 2026 ಸಾಕು ಮಾಡಿ ನಿಮ್ಮ ಕಪಟ ನಾಟಕ:ಯಾವುದೇ ಪ್ರಕರಣ ದಾಖಲಿಸದೇ ಇಂದು ಬೆಳಗ್ಗೆ ಜೆಡಿಎಸ್ ಸಾಮಾಜಿಕ ಜಾಲತಾಣ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಶಂಕರ್ ಎಂಬ ಯುವಕನನ್ನು ಪೊಲೀಸರು ಕರೆದುಕೊಂಡು ಹೋಗಿದ್ದಾರೆ. ನಂತರ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪಕ್ಷದ ಕಾನೂನು ವಿಭಾಗ ದೂರು ದಾಖಲಿಸಿದ ಮೇಲೆ ಆ ಯುವಕನಿಂದ ಆತನ ಪತ್ನಿಗೆ ಕರೆ ಮಾಡಿಸಿ, 'ಸಿಸಿಬಿ ಪೊಲೀಸರು ನನ್ನನ್ನು ಕರೆದುಕೊಂಡು ಹೋಗಿದ್ದಾರೆ' ಎಂದಷ್ಟೇ ಹೇಳಿಸಿ ಕರೆ ಕಟ್ ಮಾಡಿದ್ದೀರಿ!. ಸಾಕು ಮಾಡಿ ನಿಮ್ಮ ಕಪಟ ನಾಟಕ. ಯಾವ ಆಧಾರದ ಮೇಲೆ ಆತನನ್ನು ಕರೆದುಕೊಂಡು ಹೋಗಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.ಸಿದ್ದರಾಮಯ್ಯ ಅವರ ವಿರುದ್ಧ ಮಾರುವೇಶದ ಕಾರ್ಯಾಚರಣೆ ಮಾಡಿ, ದೃಶ್ಯಗಳನ್ನು ಚಿತ್ರೀಕರಿಸಿ ಅವರ ಚಾರಿತ್ರ್ಯಹರಣಕ್ಕೆ ಕಾರಣನಾದ ನೀಚನನ್ನು ಬಿಟ್ಟು, ಆ ನೀಚತನವನ್ನು ಪ್ರಶ್ನಿಸಿದ ನನ್ನನ್ನು ನೇರವಾಗಿ ಎದುರಿಸಲಾಗದೆ ನನ್ನ ಹುಡುಗರ ಬೆನ್ಹತ್ತಿದ್ದೀರಿ! ಎಲ್ಲವನ್ನೂ ರೆಕಾರ್ಡ್ ಮಾಡಿದ 'ಮಾಧ್ಯಮದ ಮುಸುಕು' ಹಾಕಿಕೊಂಡಿರುವ ಆ 'ಸಂಚುಕೋರ' ರಾಜಾರೋಷವಾಗಿ ತಿರುಗಾಡುತ್ತಿದ್ದರೆ, ಆ ನೈಜ ಅಪರಾಧಿಯನ್ನು ಬಿಟ್ಟು ನಮ್ಮ ಸೋಶಿಯಲ್ ಮೀಡಿಯಾ ಹುಡುಗರ ಮೇಲೆ ಬಿದ್ದಿದ್ದೀರಿ ಎಂದು ಕಿಡಿಕಾರಿದ್ದಾರೆ.ಮಾರುವೇಷ ಕಾರ್ಯಾಚರಣೆ ವಿಡಿಯೊ|ನಾನು ನಿರಪರಾಧಿ; ಸತ್ಯವೇ ಗೆಲ್ಲಲಿದೆ: ಸಿದ್ದರಾಮಯ್ಯಸಿದ್ದರಾಮಯ್ಯ ವಿರುದ್ಧ ಮಾನಹಾನಿಕಾರ ಸುದ್ದಿ ಪ್ರಸಾರಕ್ಕೆ ಮಧ್ಯಂತರ ತಡೆಪ್ರಶ್ನೆ ಮಾಡಿದ್ದು ನಾನು. ಸಿಬಿಐ ತನಿಖೆಗೆ ಒತ್ತಾಯಿಸಿದ್ದು ನಾನು. ಧೈರ್ಯವಿದ್ದರೆ ನನ್ನ ಬಳಿಗೇ ನಿಮ್ಮ ಪೊಲೀಸರನ್ನು ಕಳಿಸಬೇಕಿತ್ತು, ಅಮಾಯಕರ ಮೇಲೇನು ನಿಮ್ಮ ಪ್ರತಾಪ ಎಂದು ಕೇಳಿದ್ದಾರೆ.ಅಷ್ಟೇ ಅಲ್ಲ, ಈಗ ನಮ್ಮ ಸೋಶಿಯಲ್ ಮೀಡಿಯಾ ತಂಡದ ಮೋಹನ್ ಎಂಬ ಇನ್ನೊಬ್ಬ ಹುಡುಗನ ಮನೆ ಮುಂದೆ ಹೋಗಿ ಪೊಲೀಸರು ಗಲಾಟೆ ಮಾಡುತ್ತಿದ್ದಾರೆ, ಅವರ ಕುಟುಂಬದವರಿಗೆ ಕಿರುಕುಳ ಕೊಡುತ್ತಿದ್ದಾರೆ ಎಂಬ ಮಾಹಿತಿ ನನಗೆ ಬಂದಿದೆ. ಇದೆಲ್ಲವನ್ನೂ ಸಹಿಸುವ ಪ್ರಶ್ನೆಯೇ ಇಲ್ಲ. ನಮ್ಮವರಿಗೆ ಹೀಗೆ ಸುಖಾಸುಮ್ಮನೆ ಕಿರುಕುಳ ಕೊಟ್ಟರೆ ಕೈಕಟ್ಟಿ ಕೂರುವುದಿಲ್ಲ ನಾವು. ರಾಜಕೀಯವಾಗಿ ಮತ್ತು ಕಾನೂನಾತ್ಮಕವಾಗಿ ಎದುರಿಸಲು ಸಿದ್ಧರಿದ್ದೇವೆ ಎಂದೂ ಎಚ್ಚರಿಸಿದ್ದಾರೆ.ಮಾರುವೇಷದ ಕಾರ್ಯಾಚರಣೆ | ಹಾಯ್, ಹಲೋ ಹೇಳಿಸುವವರು ಯಾರು ಎಂದ ನಿಖಿಲ್ ಕುಮಾರಸ್ವಾಮಿಸಚಿವರ ವಿರುದ್ಧ ಮಾರುವೇಷ ಕಾರ್ಯಾಚರಣೆ: ರಾಜ್ಯ ರಾಜಕಾರಣದಲ್ಲಿ ಸಂಚಲನ