ಸಿಜೆಪಿ ತಿರಂಗಾ ಮೆರವಣಿಗೆ: ಭಾಗವಹಿಸದಂತೆ ಸಾರ್ವಜನಿಕರಿಗೆ ಪೊಲೀಸರ ಮನವಿ
ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಶುಕ್ರವಾರ ಕನ್ನಾಟ್ ಪ್ಲೇಸ್ನಲ್ಲಿ ಆಯೋಜಿಸಲು ಉದ್ದೇಶಿಸಿರುವ ‘ಲಹರಾ ದೋ ತಿರಂಗಾ’ ಕಾರ್ಯಕ್ರಮದಿಂದ ದೂರವಿರುವಂತೆ ದೆಹಲಿ ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಆದರೆ, ಕೆಲವರಿಗೆ ಸೂಕ್ತ ಸ್ಥಳದಲ್ಲಿ ರಾಷ್ಟ್ರಧ್ವಜ ಹಾರಿಸಲು ಮತ್ತು ರಾಷ್ಟ್ರಗೀತೆ ಹಾಡಲು ಅವಕಾಶ ಕಲ್ಪಿಸುವುದಾಗಿ ತಿಳಿಸಿದ್ದಾರೆ.ಅಕ್ಟೋಬರ್ 16ರ

ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಶುಕ್ರವಾರ ಕನ್ನಾಟ್ ಪ್ಲೇಸ್ನಲ್ಲಿ ಆಯೋಜಿಸಲು ಉದ್ದೇಶಿಸಿರುವ ‘ಲಹರಾ ದೋ ತಿರಂಗಾ’ ಕಾರ್ಯಕ್ರಮದಿಂದ ದೂರವಿರುವಂತೆ ದೆಹಲಿ ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಆದರೆ, ಕೆಲವರಿಗೆ ಸೂಕ್ತ ಸ್ಥಳದಲ್ಲಿ ರಾಷ್ಟ್ರಧ್ವಜ ಹಾರಿಸಲು ಮತ್ತು ರಾಷ್ಟ್ರಗೀತೆ ಹಾಡಲು ಅವಕಾಶ ಕಲ್ಪಿಸುವುದಾಗಿ ತಿಳಿಸಿದ್ದಾರೆ.ಅಕ್ಟೋಬರ್ 16ರ ಸಿಜೆಪಿ ಪ್ರತಿಭಟನೆಗೆ ತಡೆ ನೀಡಲು ದೆಹಲಿ ಹೈಕೋರ್ಟ್ ನಕಾರಕನ್ನಾಟ್ ಪ್ಲೇಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್ಎಸ್ಎಸ್) ಸೆಕ್ಷನ್ 163ನಡಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ ಎಂದು ಹೇಳಿದ್ದಾರೆ.ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಪೊಲೀಸರೊಂದಿಗೆ ಸಂಘರ್ಷದ ಪರಿಸ್ಥಿತಿ ನಿರ್ಮಾಣವಾಗಿರುವ ನಡುವೆಯೇ, ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರು ಶುಕ್ರವಾರದ ಮೆರವಣಿಗೆಯಲ್ಲಿ ರಾಷ್ಟ್ರಧ್ವಜ ಹಿಡಿದು ಪಾಲ್ಗೊಳ್ಳುವಂತೆ ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.ಸ್ಟಿಂಗ್ ಕಾರ್ಯಾಚರಣೆ ನಡೆಸಿದವರ ವಿರುದ್ಧ FIR ದಾಖಲಿಸದಿದ್ದರೆ ಪ್ರತಿಭಟನೆ: HDKಅಕ್ಟೋಬರ್ 16ರಂದು ಸಂಜೆ 5 ಗಂಟೆಗೆ ಕನ್ನಾಟ್ ಪ್ಲೇಸ್ನ ಸೆಂಟ್ರಲ್ ಪಾರ್ಕ್ನಲ್ಲಿ ತ್ರಿವರ್ಣ ಧ್ವಜಗಳೊಂದಿಗೆ ಆಗಮಿಸಲು ಸಿಜೆಪಿ ಮನವಿ ಮಾಡಿದೆ.ಆದರೆ, ಆಡಳಿತಾತ್ಮಕ ಕಾರಣಗಳಿಂದ ಅಕ್ಟೋಬರ್ 16 ಮತ್ತು 17ರಂದು ಸೆಂಟ್ರಲ್ ಪಾರ್ಕ್ ಮುಚ್ಚಿರಲಿದೆ ಎಂದು ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್ಡಿಎಂಸಿ) ಪೊಲೀಸರಿಗೆ ತಿಳಿಸಿದೆ. ಉದ್ಯಾನಕ್ಕೆ ಅನಧಿಕೃತ ಪ್ರವೇಶ ತಡೆಯಲು ಭದ್ರತಾ ವ್ಯವಸ್ಥೆ ಮಾಡುವಂತೆಯೂ ಕೋರಿದೆ.ನಿಷೇಧಾಜ್ಞೆ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿರುವ ಪೊಲೀಸರು, ರಾಷ್ಟ್ರಧ್ವಜವನ್ನು ನಿಯಮಾನುಸಾರ ಪ್ರದರ್ಶಿಸಬೇಕು ಮತ್ತು ರಾಷ್ಟ್ರಗೀತೆಯನ್ನು ಗೌರವ, ಘನತೆ ಹಾಗೂ ಶಿಸ್ತಿನಿಂದ ಹಾಡಬೇಕು ಎಂದು ಸೂಚಿಸಿದ್ದಾರೆ. ಸಾರ್ವಜನಿಕರು ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಸಹಕರಿಸುವಂತೆ ಮನವಿ ಮಾಡಿದ್ದಾರೆ.ರಾಹುಲ್ ಗಾಂಧಿ ನಿವಾಸದ ಮೇಲೆ ಗುಂಡಿನ ದಾಳಿ ವಿಡಿಯೊ ನಕಲಿ ಎಂದ ದೆಹಲಿ ಪೊಲೀಸರು