ಕೋಲಾರ: ಬಂಗಾರಪೇಟೆಯಲ್ಲಿ ಶಿಥಿಲಗೊಂಡ ಶಾಲಾ ಕಟ್ಟಡ; ವಿದ್ಯಾರ್ಥಿಗಳಲ್ಲಿ ಭಯ
ಬಂಗಾರಪೇಟೆ: ತಾಲ್ಲೂಕಿನ ಸಾಕರಸನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಶಿಥಿಲಗೊಂಡಿದ್ದು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪ್ರತಿದಿನ ಭಯದಲ್ಲೇ ದಿನ ಕಳೆಯುವಂತಾಗಿದೆ.ಶಾಲಾ ಕೊಠಡಿಯ ಚಾವಣಿಯ ಸಿಮೆಂಟ್ ಉದುರುತ್ತಿದ್ದು, ಒಳಗಿನ ಕಬ್ಬಿಣದ ಸರಳುಗಳು ಹೊರಗೆ ಕಾಣಿಸುತ್ತಿವೆ. ಗೋಡೆಗಳು ಬಿರುಕು ಬಿಟ್ಟಿದ್ದು, ಮಳೆಗಾಲದಲ್ಲಿ ಚಾವಣಿಯಿಂದ ನೀರು ಸೋರುತ್ತಿ

ಬಂಗಾರಪೇಟೆ: ತಾಲ್ಲೂಕಿನ ಸಾಕರಸನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಶಿಥಿಲಗೊಂಡಿದ್ದು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪ್ರತಿದಿನ ಭಯದಲ್ಲೇ ದಿನ ಕಳೆಯುವಂತಾಗಿದೆ.ಶಾಲಾ ಕೊಠಡಿಯ ಚಾವಣಿಯ ಸಿಮೆಂಟ್ ಉದುರುತ್ತಿದ್ದು, ಒಳಗಿನ ಕಬ್ಬಿಣದ ಸರಳುಗಳು ಹೊರಗೆ ಕಾಣಿಸುತ್ತಿವೆ. ಗೋಡೆಗಳು ಬಿರುಕು ಬಿಟ್ಟಿದ್ದು, ಮಳೆಗಾಲದಲ್ಲಿ ಚಾವಣಿಯಿಂದ ನೀರು ಸೋರುತ್ತಿದೆ. ಯಾವುದೇ ಕ್ಷಣದಲ್ಲಾದರೂ ಸಿಮೆಂಟ್ ಚೂರುಗಳು ಮಕ್ಕಳ ಮೇಲೆ ಬೀಳುವ ಸಂಭವವಿದೆ.ಶಾಲೆಯಲ್ಲಿ ಮಕ್ಕಳಿಗೆ ಸುರಕ್ಷಿತ ಕೊಠಡಿಯ ಸೌಲಭ್ಯವಿಲ್ಲದೆ ಕಲಿಕಾ ಪ್ರಕ್ರಿಯೆಗೆ ಅಡಚಣೆಯುಂಟಾಗುತ್ತಿದೆ. ಈ ಬಗ್ಗೆ ಗ್ರಾಮಸ್ಥರು ಹಾಗೂ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ ಪದಾಧಿಕಾರಿಗಳು ಶಿಕ್ಷಣಾಧಿಕಾರಿ ಹಾಗೂ ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಪ್ರಯೋಜವಾಗಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.ಸ್ಥಳಕ್ಕೆ ಶೀಘ್ರ ಭೇಟಿ, ಪರಿಶೀಲನೆಸಾಕರಸನಹಳ್ಳಿ ಸರ್ಕಾರಿ ಶಾಲೆಯ ಕೊಠಡಿ ಶಿಥಿಲಗೊಂಡಿರುವ ವಿಷಯ ಗಮನಕ್ಕೆ ಬಂದಿದೆ. ಶೀಘ್ರದಲ್ಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು. ವಿದ್ಯಾರ್ಥಿಗಳ ಸುರಕ್ಷತೆಗಾಗಿ ಹಳೆಯ ಕೊಠಡಿ ತೆರವುಗೊಳಿಸಿ ನೂತನ ಕೊಠಡಿ ನಿರ್ಮಾಣಕ್ಕೆ ಸರ್ಕಾರದ ಹಂತದಲ್ಲಿ ಅನುದಾನ ಕಾಯ್ದಿರಿಸಲು ವರದಿ ಸಲ್ಲಿಸಲಾಗುವುದು.ಎಸ್.ಚಂದ್ರಶೇಖರ್, ಕ್ಷೇತ್ರ ಶಿಕ್ಷಣಾಧಿಕಾರಿ, ಬಂಗಾರಪೇಟೆ261015-18-1553166907