ಅಕ್ಟೋಬರ್ 16ರ ಸಿಜೆಪಿ ಪ್ರತಿಭಟನೆಗೆ ತಡೆ ನೀಡಲು ದೆಹಲಿ ಹೈಕೋರ್ಟ್ ನಕಾರ
ನವದೆಹಲಿ: ಅಕ್ಟೋಬರ್ 16ರಂದು ದೆಹಲಿಯ ಕನ್ನಾಟ್ ಪ್ಲೇಸ್ನ ಸೆಂಟ್ರಲ್ ಪಾರ್ಕ್ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸಲು ಉದ್ದೇಶಿಸಿರುವ ಪ್ರತಿಭಟನೆಗೆ ತಡೆ ನೀಡಲು ದೆಹಲಿ ಹೈಕೋರ್ಟ್ ಗುರುವಾರ ನಿರಾಕರಿಸಿದೆ. ಆದರೆ, ಪ್ರತಿಭಟನೆಯ ಚಟುವಟಿಕೆಗಳನ್ನು ನಿಯಂತ್ರಿಸಲು ಮತ್ತು ಮೇಲ್ವಿಚಾರಣೆ ಮಾಡಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವುದಾಗಿ ಪೊಲೀಸರು ನೀಡ
ನವದೆಹಲಿ: ಅಕ್ಟೋಬರ್ 16ರಂದು ದೆಹಲಿಯ ಕನ್ನಾಟ್ ಪ್ಲೇಸ್ನ ಸೆಂಟ್ರಲ್ ಪಾರ್ಕ್ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸಲು ಉದ್ದೇಶಿಸಿರುವ ಪ್ರತಿಭಟನೆಗೆ ತಡೆ ನೀಡಲು ದೆಹಲಿ ಹೈಕೋರ್ಟ್ ಗುರುವಾರ ನಿರಾಕರಿಸಿದೆ. ಆದರೆ, ಪ್ರತಿಭಟನೆಯ ಚಟುವಟಿಕೆಗಳನ್ನು ನಿಯಂತ್ರಿಸಲು ಮತ್ತು ಮೇಲ್ವಿಚಾರಣೆ ಮಾಡಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವುದಾಗಿ ಪೊಲೀಸರು ನೀಡಿದ ಭರವಸೆಯನ್ನು ನ್ಯಾಯಾಲಯ ದಾಖಲಿಸಿಕೊಂಡಿದೆ.ಫ್ಯಾಕ್ಟ್ಚೆಕ್: ಸಿಜೆಪಿ ಬೆಂಬಲಿಗರು ಜಂತರ್ ಮಂತರ್ನತ್ತ ಬರುತ್ತಿರುವುದು ಸುಳ್ಳುಸುಪ್ರೀಂ ಕೋರ್ಟ್ ರೂಪಿಸಿರುವ ಕಾನೂನು ಮತ್ತು ಮಾರ್ಗಸೂಚಿಗಳ ಪ್ರಕಾರ ಪ್ರತಿಭಟನೆಯನ್ನು ನಿಯಂತ್ರಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಬೇಕೆಂದು ಕನ್ನಾಟ್ ಪ್ಲೇಸ್ನ ವ್ಯಾಪಾರಿಯೊಬ್ಬರು ಅರ್ಜಿ ಸಲ್ಲಿಸಿದ್ದರು.ಮುಖ್ಯ ನ್ಯಾಯಮೂರ್ತಿ ನಿತಿನ್ ವಾಸುದೇವ್ ಸಾಂಬ್ರೆ ಮತ್ತು ನ್ಯಾಯಮೂರ್ತಿ ಸಂಜಯ್ ಶರ್ಮಾ ಅವರನ್ನೊಳಗೊಂಡ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿತು. ಹಬ್ಬದ ಸಂದರ್ಭದಲ್ಲಿ ದೆಹಲಿಯ ಕೇಂದ್ರ ಭಾಗದಲ್ಲಿ ನಡೆಯುವ ಪ್ರತಿಭಟನೆಗಳಿಂದಾಗಿ ಮತ್ತೊಂದು ವಾರಾಂತ್ಯದ ವ್ಯಾಪಾರಕ್ಕೆ ಅಡ್ಡಿಯಾದರೆ ವ್ಯಾಪಾರಿಗಳು ಮತ್ತು ಬೀದಿ ಬದಿ ಮಾರಾಟಗಾರರು ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಅರ್ಜಿದಾರರ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.ಹೆಚ್ಚುವರಿ ಸಾಲಿಸಿಟರ್ ಜನರಲ್ ಚೇತನ್ ಶರ್ಮಾ ಅವರು ಸಿಜೆಪಿಯ ಚಟುವಟಿಕೆಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಅರ್ಜಿದಾರರು ವ್ಯಕ್ತಪಡಿಸಿರುವ ಆತಂಕವನ್ನು ಪರಿಹರಿಸಲಾಗುವುದು ಎಂದೂ ಭರವಸೆ ನೀಡಿದರು.ಅತ್ತ ಸೌರವ್-ರಾಂಕಾಗೆ ಜೈಲು: ಇತ್ತ ಒಗ್ಗಟ್ಟಿನ ಮಂತ್ರ ಜಪಿಸಿದ ಕಾಂಗ್ರೆಸ್–ಸಿಜೆಪಿ!ಸಿಜೆಪಿಯ ಪ್ರತಿಭಟನೆಗೆ ನಿರ್ದಿಷ್ಟವಾಗಿ ತಡೆ ನೀಡುವಂತೆ ಅರ್ಜಿದಾರರ ಹಿರಿಯ ವಕೀಲರು ಒತ್ತಾಯಿಸಿದಾಗ, ‘ಒತ್ತಾಯಿಸಬೇಡಿ. ನಾವು ಆದೇಶ ನೀಡಿದ್ದೇವೆ’ ಎಂದು ಹೇಳಿತು. ‘ಕನ್ನಾಟ್ ಪ್ಲೇಸ್ ಸೆಂಟ್ರಲ್ ಪಾರ್ಕ್ನ ಹೃದಯಭಾಗದಲ್ಲಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ನಮ್ಮನ್ನೇ ಗುರಿಯಾಗಿಸಿಕೊಂಡಂತೆ ಕಾಣುತ್ತಿದೆ. ಇದು ಪ್ರತಿಭಟನೆಗೆ ಸೂಕ್ತ ಸ್ಥಳವಲ್ಲ. ಈಗಾಗಲೇ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲು ಆರಂಭಿಸಿದ್ದಾರೆ. ಇದು ದಸರಾ ವಾರಾಂತ್ಯ. ಈ ಪ್ರತಿಭಟನೆಯನ್ನು ತಡೆಯಲೇಬೇಕು’ ಎಂದು ಅರ್ಜಿದಾರರು ಕೋರಿದ್ದರು. ತ್ರಿವರ್ಣ ಧ್ವಜ ಹಾರಿಸಿದ್ದಕ್ಕಾಗಿ ಸಿಜೆಪಿ ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರನ್ನು ಜೈಲಿಗೆ ಕಳುಹಿಸಲಾಗಿದೆ ಎಂದು ಅಭಿಜಿತ್ ದೀಪ್ಕೆ ಆರೋಪಿಸಿದ್ದು, ಹೀಗಾಗಿ ಶುಕ್ರವಾರ ದೆಹಲಿಯ ವಾಣಿಜ್ಯ ಕೇಂದ್ರ ಕನ್ನಾಟ್ ಪ್ಲೇಸ್ನ ಸೆಂಟ್ರಲ್ ಪಾರ್ಕ್ನಲ್ಲಿ ರಾಷ್ಟ್ರಧ್ವಜದೊಂದಿಗೆ ಜಮಾಯಿಸುವಂತೆ ಅವರು ಕರೆ ನೀಡಿದ್ದಾರೆ. ಸಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ಸಾಮೂಹಿಕ ಬಂಧನ: ವಿಶ್ವಸಂಸ್ಥೆ ಕಳವಳ