ರಾಜ್ಯ ರಾಜಕಾರಣದಲ್ಲಿ `ಸ್ಟಿಂಗ್’ ಸುಂಟರಗಾಳಿ – ಜೆಡಿಎಸ್ ಸೋಶಿಯಲ್ ಮೀಡಿಯಾ ಟಾರ್ಗೆಟ್?
– ಇಬ್ಬರು ವಶಕ್ಕೆ, ಸರ್ಕಾರದ ವಿರುದ್ಧ ಹೆಚ್ಡಿಕೆ ಕಿಡಿ ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ನಡೆದಿದೆ ಎನ್ನಲಾದ ಸ್ಟಿಂಗ್ ವಿಚಾರದಲ್ಲಿ (Sting Operation) ಇಬ್ಬರು ಆರೋಪಿಗಳನ್ನು ಸೈಬರ್ ಕ್ರೈಂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿದ್ದರಾಮಯ್ಯ ದೂರು ಆಧರಿಸಿ ಸಿಸಿಬಿ ಪೊಲೀಸರು (CCB Police) ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡ

– ಇಬ್ಬರು ವಶಕ್ಕೆ, ಸರ್ಕಾರದ ವಿರುದ್ಧ ಹೆಚ್ಡಿಕೆ ಕಿಡಿ ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ನಡೆದಿದೆ ಎನ್ನಲಾದ ಸ್ಟಿಂಗ್ ವಿಚಾರದಲ್ಲಿ (Sting Operation) ಇಬ್ಬರು ಆರೋಪಿಗಳನ್ನು ಸೈಬರ್ ಕ್ರೈಂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿದ್ದರಾಮಯ್ಯ ದೂರು ಆಧರಿಸಿ ಸಿಸಿಬಿ ಪೊಲೀಸರು (CCB Police) ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸ್ತಿದ್ದಾರೆ. ಸೋಶಿಯಲ್ ಮೀಡಿಯಾದ ಕೆಲ ಐಪಿ ಅಡ್ರೆಸ್ ಟ್ರ್ಯಾಕ್ ಮಾಡಿ ಕಮಿಷನರ್ ಸೀಮಂತ್ ಕುಮಾರ್ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಸಿದ್ದರಾಮಯ್ಯ ದೂರಿನ ಮೇಲೆ ಜೆಡಿಎಸ್ ಸೋಶಿಯಲ್ ಮೀಡಿಯಾ ನೋಡಿಕೊಳ್ಳುವ ಶಂಕರ್, ಮೋಹನ್ರನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರ ಈ ವರ್ತನೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ. ಸರ್ಕಾರದ ನಡೆಯನ್ನು ಖಂಡಿಸಿದ್ದಾರೆ. ಸದ್ಯ ಶಂಕರ್ ಹೇಳಿಕೆ ದಾಖಲಿಸಿರುವ ಪೊಲೀಸರು ಬಿಟ್ಟು ಕಳಿಸಿದ್ದಾರೆ. ಮೋಹನ್, ಜೊತೆಗೆ ಮತ್ತೋರ್ವನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಇದನ್ನೂ ಓದಿ: ಗ್ರಾಮೀಣ ಸೊಗಡಿನಿಂದ ಜಾಗತಿಕ ಮಾರುಕಟ್ಟೆವರೆಗೆ – ಗರ್ಬಾ ಸಂಸ್ಕೃತಿ ಬೆಳೆದು ಬಂದ ಸುವರ್ಣ ಪಯಣ! ಕಾನೂನು ಹೋರಾಟದ ಎಚ್ಚರಿಕೆ ಕೊಟ್ಟ ಹೆಚ್ಡಿಕೆ: ಇನ್ನು ಕೇಂದ್ರ ಸಚಿವ ಕುಮಾರಸ್ವಾಮಿ ಎಕ್ಸ್ನಲ್ಲಿ ಪೋಸ್ಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಆರೋಪ ಮಾಡಿದ್ದು ನಾನು, ತನಿಖೆ ಮಾಡಿ ಅಂದಿದ್ದು ನಾನು. ನಮ್ಮ ಹುಡುಗರ ಮೇಲೆ ಯಾಕೆ ಪ್ರತಾಪ ಎಂದು ವಾಗ್ದಾಳಿ ನಡೆಸಿದ್ದು, ಧೈರ್ಯವಿದ್ದರೆ ನನ್ನ ಮನೆಗೆ ಪೊಲೀಸರನ್ನ ಕಳುಹಿಸಿ ಎಂದು ಸರ್ಕಾರಕ್ಕೆ ಸವಾಲ್ ಎಸೆದಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ವ್ಯಕ್ತಿ ಮೇಲೆ ಫೈರಿಂಗ್; ರಿಯಲ್ ಎಸ್ಟೇಟ್ ಉದ್ಯಮಿ ಪೊಲೀಸ್ ವಶಕ್ಕೆ ಎಕ್ಸ್ ಪೋಸ್ಟ್ನಲ್ಲಿ ಏನಿದೆ? ಮಾಜಿ ಸಿಎಂ ವರ್ಚಸ್ಸಿಗೆ ಹನಿಟ್ರ್ಯಾಪ್ ಹೆಸರಿನಲ್ಲಿ ಮಸಿ ಬಳಿಯಲು ರೂಪಿಸಿದ ವ್ಯವಸ್ಥಿತ, ಸಂಘಟಿತ ಷಡ್ಯಂತ್ರವನ್ನು ಪ್ರಶ್ನಿಸಿದ್ದಕ್ಕೆ ನನ್ನನ್ನು ಹಾಗೂ ನನ್ನ ಜೊತೆಗಿರುವ ಹುಡುಗರನ್ನು ಟಾರ್ಗೆಟ್ ಮಾಡುತ್ತಿರುವುದು ಲಜ್ಜೆಗೇಡಿತನ. ಜೆಡಿಎಸ್ ಸೋಶಿಯಲ್ ಮೀಡಿಯಾ ಹುಡುಗರಾದ ಶಂಕರ್, ಮೋಹನ್ ಎಂಬವರನ್ನು ಸಿಸಿಬಿ ಪೊಲೀಸರು ಕರೆದೊಯ್ದಿದ್ದಾರೆ. ಯಾವ ಆಧಾರದ ಮೇಲೆ ಆತನನ್ನು ಕರೆದುಕೊಂಡು ಹೋಗಿದ್ದೀರಿ? ನೀಚತನವನ್ನು ಪ್ರಶ್ನಿಸಿದ ನನ್ನನ್ನು ನೇರವಾಗಿ ಎದುರಿಸಲಾಗದೆ ನನ್ನ ಹುಡುಗರ ಬೆನ್ನತ್ತಿದ್ದೀರಿ. ಪ್ರಶ್ನೆ ಮಾಡಿದ್ದು ನಾನು, ಸಿಬಿಐ ತನಿಖೆಗೆ ಒತ್ತಾಯಿಸಿದ್ದು ನಾನು ಧೈರ್ಯವಿದ್ದರೆ ನನ್ನ ಬಳಿಗೇ ನಿಮ್ಮ ಪೊಲೀಸರನ್ನು ಕಳಿಸಬೇಕಿತ್ತು. ಅಮಾಯಕರ ಮೇಲೇನು ನಿಮ್ಮ ಪ್ರತಾಪ. ಇದೆಲ್ಲವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ನಮ್ಮವರಿಗೆ ಹೀಗೆ ಸುಖಾಸುಮ್ಮನೆ ಕಿರುಕುಳ ಕೊಟ್ಟರೆ ಕೈಕಟ್ಟಿ ಕೂರುವುದಿಲ್ಲ. ರಾಜಕೀಯವಾಗಿ ಮತ್ತು ಕಾನೂನಾತ್ಮಕವಾಗಿ ಎದುರಿಸಲು ಸಿದ್ಧರಿದ್ದೇವೆ ಎಂದು ಎಕ್ಸ್ನಲ್ಲಿ ಹೆಚ್ಡಿಕೆ ಕಿಡಿಕಾರಿದ್ದಾರೆ. ಇದನ್ನೂ ಓದಿ: ನಾನಾ ಪಾಟೇಕರ್ ವಿದೇಶದಲ್ಲಿ ಜೀವಂತವಾಗಿ ಇರಬಹುದು: ಬಾಲಿವುಡ್ ನಟಿ ಹೊಸ ಬಾಂಬ್ ಈ ನಡುವೆ ಜೆಡಿಎಸ್ ಕಾರ್ಯಕರ್ತರನ್ನು ಟಾರ್ಗೆಟ್ ಆರೋಪ ಹಿನ್ನೆಲೆ ಡಿಜಿ-ಐಜಿಗೆ ಜೆಡಿಎಸ್ ಕಾನೂನು ಘಟಕದಿಂದ ದೂರು ನೀಡಲಾಗಿದೆ. ಐಟಿ ಸೆಲ್ನ ಶಂಕರ್, ಕ್ಲರ್ಕ್ ಮೋಹನ್ ಸಿಸಿಬಿ ವಶಕ್ಕೆ ಪಡೆದಿದ್ದಾರೆ. ಯಾವ ಕಾರಣಕ್ಕೆ ವಶಕ್ಕೆ ಪಡೆಯಲಾಗಿದೆ ಎಂದು ಹೇಳುತ್ತಿಲ್ಲ, ಕಮೀಷನರ್ ಭೇಟಿಗೆ ಹೋದರೂ ಅವಕಾಶ ಕೊಡುತ್ತಿಲ್ಲ ಅಂತ ಜೆಡಿಎಸ್ ಕಾನೂನು ಘಟಕದ ಪ್ರದೀಪ್ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ತಿಲಕ್-ನಿತೀಶ್ ಅಬ್ಬರದಾಟ ವ್ಯರ್ಥ – ಹೋರಾಡಿ ಸೋತ ಭಾರತ; ವಿಂಡೀಸ್ಗೆ 25 ರನ್ಗಳ ಜಯ, ಸರಣಿ 2-2ರಲ್ಲಿ ಸಮ