ಸ್ಟಿಂಗ್ ಸಾಮ್ರಾಟನ ಸಿಂಡಿಕೇಟ್ನಲ್ಲಿ ನೀವು ಒಂದು ಭಾಗ: ಪ್ರಿಯಾಂಕ್ಗೆ ಹೆಚ್ಡಿಕೆ ತಿರುಗೇಟು
ಬೆಂಗಳೂರು: ರಾಜ್ಯದಲ್ಲಿ ತಲ್ಲಣ ಸೃಷ್ಟಿಸಿರುವ ಸ್ಟಿಂಗ್ ಆಪರೇಷನ್ (Sting Operation) ವಿವಾದವು ಇದೀಗ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ(HD Kumaraswamy) ಹಾಗೂ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ನಡುವಿನ ನೇರ ಜಿದ್ದಾಜಿದ್ದಿಗೆ ತಿರುಗಿದೆ. ಇಬ್ಬ ತಮ್ಮ ಆಪ್ತರ ವಿಚಾರಣೆ ಮತ್ತು ಸರ್ಕಾರದ ನಡೆಗೆ ತೀವ್ರ ಆಕ್ರೋಶ ಹೊರಹಾಕಿದ ಕುಮಾರಸ್ವಾಮಿ, “ನಾನೇನು

ಬೆಂಗಳೂರು: ರಾಜ್ಯದಲ್ಲಿ ತಲ್ಲಣ ಸೃಷ್ಟಿಸಿರುವ ಸ್ಟಿಂಗ್ ಆಪರೇಷನ್ (Sting Operation) ವಿವಾದವು ಇದೀಗ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ(HD Kumaraswamy) ಹಾಗೂ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ನಡುವಿನ ನೇರ ಜಿದ್ದಾಜಿದ್ದಿಗೆ ತಿರುಗಿದೆ. ಇಬ್ಬ ತಮ್ಮ ಆಪ್ತರ ವಿಚಾರಣೆ ಮತ್ತು ಸರ್ಕಾರದ ನಡೆಗೆ ತೀವ್ರ ಆಕ್ರೋಶ ಹೊರಹಾಕಿದ ಕುಮಾರಸ್ವಾಮಿ, “ನಾನೇನು ನಿಮ್ಮಪ್ಪನ ಗಂಟು ತಿಂದಿಲ್ಲ. ನನ್ನನ್ನು ಮುಟ್ಟೋಕೆ ಹೇಳಿ, ಆಗ ರಾಜ್ಯದಲ್ಲಿ ಏನಾಗುತ್ತೆ ಅಂತ ತೋರಿಸ್ತೀನಿ. ಬಾ ನೋಡೋಣ, ನಾನು ಯಾವುದೇ ಯುದ್ಧಕ್ಕೂ ಸಿದ್ಧ” ಎಂದು ನೇರ ಸವಾಲು ಹಾಕಿದ್ದಾರೆ. ಸೋಷಿಯಲ್ ಮೀಡಿಯಾ ಪೋಸ್ಟ್ ಮೂಲಕ ಪ್ರಿಯಾಂಕ್ ಖರ್ಗೆ ವಿರುದ್ಧ ಮುಗಿಬಿದ್ದ ಕುಮಾರಸ್ವಾಮಿ, “ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೇ ಸ್ಟಿಂಗ್ ಸಂಚು ನಡೆಸಿ, ಅವರ ಪದಚ್ಯುತಿಗೆ ಹವಣಿಸುತ್ತಿರುವ ‘ನೀಲಿಗಣ್ಣಿನ ಮಂತ್ರಿ’ ಇವರೇ” ಎಂದು ಗಂಭೀರ ಆರೋಪ ಮಾಡಿದ್ದಾರೆ. “ನನ್ನ ಹುಡುಗರನ್ನು ಹೇಗೆ ರಕ್ಷಿಸಿಕೊಳ್ಳಬೇಕು ಎಂಬುದು ನನಗೆ ಚೆನ್ನಾಗಿ ತಿಳಿದಿದೆ. ಕಣದಿಂದ ಓಡಿಹೋಗುವುದು ನನ್ನ ಜಾಯಮಾನವೇ ಅಲ್ಲ,” ಎಂದು ಪ್ರಿಯಾಂಕ್ ಖರ್ಗೆ ವಿರುದ್ಧ ಗುಡುಗಿದ್ದಾರೆ. RSS’ new blue eyed boy, goes ballistic before the media, demanding an investigation. The moment investigation begins, he runs to the Commissioner pleading, “Don’t investigate my boys!” Accountability for others. Immunity for his own. — Priyank Kharge / ಪ್ರಿಯಾಂಕ್ ಖರ್ಗೆ (@PriyankKharge) October 15, 2026 ಪ್ರಿಯಾಂಕ್ ತಿರುಗೇಟು: “ಇಷ್ಟಬಂದಂತೆ ನೋಟಿಸ್ ನೀಡಿ ವಿಚಾರಣೆಗೆ ಕರೆಯಲು ಇಲಾಖೆಯೇನು ನಿಮ್ಮಪ್ಪನ ಆಸ್ತಿಯೇ?” ಎಂಬ ಕುಮಾರಸ್ವಾಮಿ ಹೇಳಿಕೆಗೆ ಕಿಡಿಕಾರಿದ ಪ್ರಿಯಾಂಕ್ ಖರ್ಗೆ, “ನಮ್ಮ ತಂದೆಯ ವಿಚಾರವನ್ನು ಎಳೆದು ತಂದರೆ ನಾವೂ ಅದೇ ಭಾಷೆಯಲ್ಲೇ ಉತ್ತರ ಕೊಡಬೇಕಾಗುತ್ತದೆ. ಹುಷಾರ್, ಮತ್ತೊಮ್ಮೆ ಓಪನ್ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾದೀತು” ಎಂದು ಖಾರವಾಗಿ ಎಚ್ಚರಿಸಿದ್ದಾರೆ. ನಿಮಗೆ ಯಾವ ಭಾಷೆ ಅರ್ಥವಾಗುತ್ತದೋ ಅದೇ ಭಾಷೆಯಲ್ಲಿ ಉತ್ತರಿಸಲು ನಾವೂ ಸಿದ್ಧರಿದ್ದೇವೆ. ಸುಖಾಸುಮ್ಮನೆ ಗಾಳಿಯಲ್ಲಿ ಗುಂಡು ಹಾರಿಸುವ ಬದಲು ನಿಖರ ದಾಖಲೆಗಳಿದ್ದರೆ ಕೊಡಿ. ನೀವು ತಪ್ಪು ಮಾಡಿದ್ದರೆ ನಿಮ್ಮನ್ನೂ ಅರೆಸ್ಟ್ ಮಾಡಿಯೇ ತೀರುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ನಾವು ಆರ್ಎಸ್ಎಸ್ ಸಿದ್ಧಾಂತಕ್ಕೇ ಎದೆಗೊಟ್ಟು ನಿಂತವರು, ಇನ್ನು ನಿಮ್ಮ ಬೆದರಿಕೆಗಳಿಗೆ ಹೆದರುತ್ತೇವಾ?” ಎಂದು ತಿರುಗೇಟು ನೀಡುವ ಮೂಲಕ ಕದನಕ್ಕೆ ಮತ್ತಷ್ಟು ತುಪ್ಪ ಸುರಿದಿದ್ದಾರೆ. ಸಿದ್ದರಾಮಯ್ಯ ವಿರುದ್ಧ ನಡೆದ ಸ್ಟಿಂಗ್ ಸಂಚಿನಲ್ಲಿ ಶಾಮೀಲಾಗಿ ಅವರ ಪದಚ್ಯುತಿಗೆ ಕಾರಣನಾದ ನೀಲಿಕಣ್ಣಿನ ಮಂತ್ರಿ @PriyankKharge, ಸ್ಟಿಂಗ್ ಮಾಡಿದ ಅಸಲಿ ಕಿರಾತಕನನ್ನು ಬಿಟ್ಟು ಅಮಾಯಕರ ಬೆನ್ನತ್ತಿದ ನೀವು ಗೃಹಮಂತ್ರಿ ಹುದ್ದೆಗೆ ನಾಲಾಯಕ್. ಸಿದ್ದಾರ್ಥ, ಡಾ.ಅಂಬೇಡ್ಕರ್ ಹೆಸರಿನಲ್ಲಿ ಲೂಟಿ ಮೇಲೆ ಲೂಟಿ ಮಾಡಿದ ‘ಬಲಿತ ದಲಿತ’ನೇ, ನಿಮ್ಮ ಮೀಸಲು ಕ್ಷೇತ್ರವನ್ನು ದುರ್ಬಲ ದಲಿತನಿಗೆ ಬಿಟ್ಟುಕೊಟ್ಟು ಸಾಮಾನ್ಯ ಕ್ಷೇತ್ರದಿಂದ ಗೆದ್ದು ಬನ್ನಿ. ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು? ಇನ್ನೆಷ್ಟು ವರ್ಷ ದಲಿತರ ಹೆಸರಿನಲ್ಲಿ ಅಧಿಕಾರ? ಅಸಲಿ ದಲಿತರಿಗೆ ಅಧಿಕಾರ ಕೊಡಿ. ನನ್ನ ಹುಡುಗರನ್ನು ರಕ್ಷಿಸಿಕೊಳ್ಳುವುದು ನನಗೆ ಗೊತ್ತು. ಓಡುವುದು ನನ್ನ ಜಾಯಮಾನವಲ್ಲ. ನಾನು ಕೆಪಿಎಸ್ಸಿ, ಸ್ಟಿಂಗ್ ವಿಷಯ ಪ್ರಸ್ತಾಪಿಸಿದ ಕೂಡಲೇ ಎಷ್ಟು ಕಡೆ ರನ್ನಿಂಗ್ ರೇಸ್ ಮಾಡಿದ್ದೀರಿ ಎಂದು ನನಗೆ ಗೊತ್ತಿದೆ. ಅಂಗಲಾಚುವವನಲ್ಲ ಈ ಕುಮಾರಸ್ವಾಮಿ. ನಿಮ್ಮ ಪೊಲೀಸ್ ಕಮಿಷನರ್ ಬಳಿ ಏನು ಹೇಳಿದ್ದೇನೆ ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಪಕ್ಷದ ಹಿರಿಯ ನಾಯಕನನ್ನು ಸ್ಟಿಂಗ್ ಮಾಡಿದ ನಟೋರಿಯಸ್ ಸ್ಟಿಂಗ್’ಪಿನ್ ನನ್ನೇ ಬಂಧಿಸಲು ಯೋಗ್ಯತೆ ಇಲ್ಲ ನಿಮಗೆ. ಅವನು ಬಂದು ನಿಮ್ಮ ಡಿಸಿಪಿ ಮುಂದೆ ಕಾಲು ಮೇಲೆ ಕಾಲು ಹಾಕಿ ಕೂರುತ್ತಾನೆ, ನಿಮ್ಮ ಇಲಾಖೆಯ ನಿವೃತ್ತ IPS ಅಧಿಕಾರಿಗೆ ಕೊಲೆ ಬೆದರಿಕೆ ಹಾಕ್ತಾನೆ, ನಿಮ್ಮ ಪೊಲೀಸ್ ಅಧಿಕಾರಿಗಳ ಸ್ಟಿಂಗ್ ಮಾಡಿ ಹಫ್ತಾ ವಸೂಲಿ ಮಾಡ್ತಾನೆ. ಅವನನ್ನು ಹಿಡಿದು ಸೆದೆಬಡಿಯುವುದು ಬಿಟ್ಟು ಪುಂಗಿ ಬಿಡ್ತಾ ಇದ್ದೀರಿ. ಸ್ಟಿಂಗ್ ಸಾಮ್ರಾಟನ ಸಿಂಡಿಕೇಟ್ ನಲ್ಲಿ ನೀವು ಒಂದು ಭಾಗ ಎಂಬುದು ನನಗೆ ಗ್ಯಾರಂಟಿ ಆಗಿದೆ. #KarnatakaStingSamrat #KarnatakaStingpin @JanataDal_S — ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) October 15, 2026 ಹೆಚ್ಡಿಕೆ ಪೋಸ್ಟ್ನಲ್ಲಿ ಏನಿದೆ? ಸಿದ್ದರಾಮಯ್ಯ ವಿರುದ್ಧ ನಡೆದ ಸ್ಟಿಂಗ್ ಸಂಚಿನಲ್ಲಿ ಶಾಮೀಲಾಗಿ ಅವರ ಪದಚ್ಯುತಿಗೆ ಕಾರಣನಾದ ನೀಲಿಕಣ್ಣಿನ ಮಂತ್ರಿ ಪ್ರಿಯಾಂಕ್ ಖರ್ಗೆ ಸ್ಟಿಂಗ್ ಮಾಡಿದ ಅಸಲಿ ಕಿರಾತಕನನ್ನು ಬಿಟ್ಟು ಅಮಾಯಕರ ಬೆನ್ನತ್ತಿದ ನೀವು ಗೃಹಮಂತ್ರಿ ಹುದ್ದೆಗೆ ನಾಲಾಯಕ್. ಸಿದ್ದಾರ್ಥ, ಡಾ.ಅಂಬೇಡ್ಕರ್ ಹೆಸರಿನಲ್ಲಿ ಲೂಟಿ ಮೇಲೆ ಲೂಟಿ ಮಾಡಿದ ‘ಬಲಿತ ದಲಿತ’ನೇ, ನಿಮ್ಮ ಮೀಸಲು ಕ್ಷೇತ್ರವನ್ನು ದುರ್ಬಲ ದಲಿತನಿಗೆ ಬಿಟ್ಟುಕೊಟ್ಟು ಸಾಮಾನ್ಯ ಕ್ಷೇತ್ರದಿಂದ ಗೆದ್ದು ಬನ್ನಿ. ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು? ಇನ್ನೆಷ್ಟು ವರ್ಷ ದಲಿತರ ಹೆಸರಿನಲ್ಲಿ ಅಧಿಕಾರ? ಅಸಲಿ ದಲಿತರಿಗೆ ಅಧಿಕಾರ ಕೊಡಿ. ನನ್ನ ಹುಡುಗರನ್ನು ರಕ್ಷಿಸಿಕೊಳ್ಳುವುದು ನನಗೆ ಗೊತ್ತು. ಓಡುವುದು ನನ್ನ ಜಾಯಮಾನವಲ್ಲ. ನಾನು ಕೆಪಿಎಸ್ಸಿ, ಸ್ಟಿಂಗ್ ವಿಷಯ ಪ್ರಸ್ತಾಪಿಸಿದ ಕೂಡಲೇ ಎಷ್ಟು ಕಡೆ ರನ್ನಿಂಗ್ ರೇಸ್ ಮಾಡಿದ್ದೀರಿ ಎಂದು ನನಗೆ ಗೊತ್ತಿದೆ. ಅಂಗಲಾಚುವವನಲ್ಲ ಈ ಕುಮಾರಸ್ವಾಮಿ. ನಿಮ್ಮ ಪೊಲೀಸ್ ಕಮಿಷನರ್ ಬಳಿ ಏನು ಹೇಳಿದ್ದೇನೆ ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಪಕ್ಷದ ಹಿರಿಯ ನಾಯಕನನ್ನು ಸ್ಟಿಂಗ್ ಮಾಡಿದ ನಟೋರಿಯಸ್ ಸ್ಟಿಂಗ್ ‘ಪಿನ್ ನನ್ನೇ ಬಂಧಿಸಲು ಯೋಗ್ಯತೆ ಇಲ್ಲ ನಿಮಗೆ. ಅವನು ಬಂದು ನಿಮ್ಮ ಡಿಸಿಪಿ ಮುಂದೆ ಕಾಲು ಮೇಲೆ ಕಾಲು ಹಾಕಿ ಕೂರುತ್ತಾನೆ, ನಿಮ್ಮ ಇಲಾಖೆಯ ನಿವೃತ್ತ ಐಪಿಎಸ್ ಅಧಿಕಾರಿಗೆ ಕೊಲೆ ಬೆದರಿಕೆ ಹಾಕ್ತಾನೆ, ನಿಮ್ಮ ಪೊಲೀಸ್ ಅಧಿಕಾರಿಗಳ ಸ್ಟಿಂಗ್ ಮಾಡಿ ಹಫ್ತಾ ವಸೂಲಿ ಮಾಡ್ತಾನೆ. ಅವನನ್ನು ಹಿಡಿದು ಸೆದೆಬಡಿಯುವುದು ಬಿಟ್ಟು ಪುಂಗಿ ಬಿಡ್ತಾ ಇದ್ದೀರಿ. ಸ್ಟಿಂಗ್ ಸಾಮ್ರಾಟನ ಸಿಂಡಿಕೇಟ್ ನಲ್ಲಿ ನೀವು ಒಂದು ಭಾಗ ಎಂಬುದು ನನಗೆ ಗ್ಯಾರಂಟಿ ಆಗಿದೆ.