ಮಂಡ್ಯ: ಕೊಪ್ಪ, ಬೆಸಗರಹಳ್ಳಿ ಭಾಗದ ಬೆಳೆಗಳಿಗೆ ನೀರು ಹರಿಸಲು ಆಗ್ರಹಿಸಿ ಪ್ರತಿಭಟನೆ
ಮದ್ದೂರು: ತಾಲ್ಲೂಕಿನ ಕೊಪ್ಪ ಹಾಗೂ ಬೆಸಗರಹಳ್ಳಿ ಭಾಗದದಲ್ಲಿ ಒಣಗಿರುವ ಬೆಳೆಗಳಿಗೆ ಕೂಡಲೇ ನೀರು ಹರಿಸುವಂತೆ ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ತಾಲ್ಲೂಕಿನ ಬೆಸಗರಹಳ್ಳಿ ಅಡ್ಡ ರಸ್ತೆಯಲ್ಲಿ ಹತ್ತಾರು ಎತ್ತಿನ ಗಾಡಿ, ಟ್ರ್ಯಾಕ್ಟರ್ ಗಳನ್ನು ರಸ್ತೆ ಮಧ್ಯೆ ನಿಲ್ಲಿಸಿ ಬುಧವಾರ ಪ್ರತಿಭಟನೆ ನಡೆಸಿದರು.ಬೆಳೆಗಳಿಗೆ ನೀರು ಹರಿಸಲು ಕ್ರಮ ಕೈಗೊಳ್ಳದ ಅಧಿಕಾರಿಗಳು, ಜನಪ್ರತಿ

ಮದ್ದೂರು: ತಾಲ್ಲೂಕಿನ ಕೊಪ್ಪ ಹಾಗೂ ಬೆಸಗರಹಳ್ಳಿ ಭಾಗದದಲ್ಲಿ ಒಣಗಿರುವ ಬೆಳೆಗಳಿಗೆ ಕೂಡಲೇ ನೀರು ಹರಿಸುವಂತೆ ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ತಾಲ್ಲೂಕಿನ ಬೆಸಗರಹಳ್ಳಿ ಅಡ್ಡ ರಸ್ತೆಯಲ್ಲಿ ಹತ್ತಾರು ಎತ್ತಿನ ಗಾಡಿ, ಟ್ರ್ಯಾಕ್ಟರ್ ಗಳನ್ನು ರಸ್ತೆ ಮಧ್ಯೆ ನಿಲ್ಲಿಸಿ ಬುಧವಾರ ಪ್ರತಿಭಟನೆ ನಡೆಸಿದರು.ಬೆಳೆಗಳಿಗೆ ನೀರು ಹರಿಸಲು ಕ್ರಮ ಕೈಗೊಳ್ಳದ ಅಧಿಕಾರಿಗಳು, ಜನಪ್ರತಿನಿಧಿಗಳು ವಿರುದ್ಧ ರೈತರು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸುಮಾರು 3 ತಾಸಿಗೂ ಹೆಚ್ಚು ಕಾಲ ಮದ್ದೂರು–ಕೊಪ್ಪ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.ರೈತ ಸಂಘದ ತಾಲ್ಲೂಕು ಅಧ್ಯಕ್ಷ ಎಚ್.ಜಿ.ಪ್ರಭುಲಿಂಗು ಮಾತನಾಡಿ, ‘ಕೊಪ್ಪ ಹಾಗೂ ಬೆಸಗರಹಳ್ಳಿ ಭಾಗದಲ್ಲಿ ರೈತರು ಕಷ್ಟಪಟ್ಟು ಬೆಳೆದ ಬೆಳೆಗಳು ನೀರಿಲ್ಲದೆ ಒಣಗುತ್ತಿದೆ. ಈ ಸಂಬಂಧ ಹಲವಾರು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜವಾಗಿಲ್ಲ’ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಈ ಕೂಡಲೇ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಕೊಪ್ಪ ಹಾಗೂ ಬೆಸಗರಹಳ್ಳಿ ಭಾಗಕ್ಕೆ ನೀರು ಹರಿಸುವ ಮೂಲಕ ರೈತರ ಪರ ನಿಲ್ಲಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.ರೇಷ್ಮೆ ಬೆಳೆಗಾರರ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಗುಡಿದೊಡ್ಡಿ ಶಿವಲಿಂಗಯ್ಯ ಮಾತನಾಡಿ, ಒಣಗುತ್ತಿರುವ ಬೆಳೆಗಳಿಗೆ ಇಂದೇ ನೀರು ಹರಿಸದೆ ಹೋದರೆ ರೈತರು ಸಾಕಷ್ಟು ಆರ್ಥಿಕ ಸಂಕಷ್ಟಕ್ಕೆ ಒಳಗಾಗಬೇಕಾಗುತ್ತದೆ. ಆದ್ದರಿಂದ ಶೀಘ್ರವಾಗಿ ನೀರು ಹರಿಸಬೇಕೆಂದು ಒತ್ತಾಯಿಸಿದರು.ಈ ವೇಳೆ ಕಾವೇರಿ ನೀರಾವರಿ ನಿಗಮದ ಎ.ಇ.ನಾಗರಾಜು, ಸಿ.ಪಿ.ಐ ನವೀನ್ ಕುಮಾರ್ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಶನಿವಾರ ನೀರು ಹರಿಸುವ ಬಗ್ಗೆ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆಯಲಾಯಿತು.ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಶಿವಲಿಂಗಯ್ಯ ಸೊ.ಶಿ.ಪ್ರಕಾಶ್, ಕೀಳಘಟ್ಟ ನಂಜುಂಡಯ್ಯ, ಮುತ್ತುರಾಜು, ಮರಿಲಿಂಗು, ಶಂಕರ್, ದಿನೇಶ್, ರಾಜೇಶ್ ಹಾಜರಿದ್ದರು.261015-40-1491725090