ದಕ್ಷಿಣ ಕೊಡಗಿನಲ್ಲಿ ನಾಲ್ವರು ಶಂಕಿತ ಅಕ್ರಮ ವಲಸಿಗರ ಪತ್ತೆ!
– ಗಡಿಯಲ್ಲಿ ನುಸುಳಿದ್ದ ಗಂಡ-ಹೆಂಡತಿ, ಇಬ್ಬರು ಮಕ್ಕಳು ಪತ್ತೆ – ಪೊಲೀಸರಿಗೆ ಒಪ್ಪಿಸಿದ ಸಂಘಟನೆಗಳು ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಕ್ರಮ ವಲಸಿಗರ ಕುರಿತ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲೂಕಿನ ಬಾಳೆಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಟ್ಟಿಗೇರಿಯಲ್ಲಿ ತೋಟದ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ನಾಲ್ವರನ್ನು ಹಿಂದೂ ಜಾಗರಣ

– ಗಡಿಯಲ್ಲಿ ನುಸುಳಿದ್ದ ಗಂಡ-ಹೆಂಡತಿ, ಇಬ್ಬರು ಮಕ್ಕಳು ಪತ್ತೆ – ಪೊಲೀಸರಿಗೆ ಒಪ್ಪಿಸಿದ ಸಂಘಟನೆಗಳು ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಕ್ರಮ ವಲಸಿಗರ ಕುರಿತ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲೂಕಿನ ಬಾಳೆಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಟ್ಟಿಗೇರಿಯಲ್ಲಿ ತೋಟದ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ನಾಲ್ವರನ್ನು ಹಿಂದೂ ಜಾಗರಣ ವೇದಿಕೆ ಹಾಗೂ ಆಟೋ ಚಾಲಕರ ಸಂಘದ ಸದಸ್ಯರು ಪತ್ತೆಹಚ್ಚಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಪತ್ತೆಯಾದ ನಾಲ್ವರಲ್ಲಿ ಗಂಡ-ಹೆಂಡತಿ ಹಾಗೂ ಇಬ್ಬರು ಮಕ್ಕಳು ಸೇರಿದ್ದಾರೆ ಎನ್ನಲಾಗಿದೆ. ಪಶ್ಚಿಮ ಬಂಗಾಳದ ಬ್ರೋಕರ್ ಮೂಲಕ ಭಾರತಕ್ಕೆ ಬಂದಿರುವುದಾಗಿ ಅವರು ಹೇಳಿಕೊಂಡಿದ್ದಾರೆ ಎಂದು ಸಂಘಟನೆಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ನಾಲ್ವರ ಹಿನ್ನೆಲೆ, ಗುರುತಿನ ಚೀಟಿಗಳು ಹಾಗೂ ಇತರ ದಾಖಲೆಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂಬ ಆಗ್ರಹ ಕೇಳಿಬಂದಿದೆ. ಕೊಡಗು ಜಿಲ್ಲೆಯಲ್ಲಿ ಅಕ್ರಮ ವಲಸಿಗರ ಪತ್ತೆಯ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲೂಕಿನ ಬಾಳೆಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಟ್ಟಿಗೇರಿಯಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ತೋಟವೊಂದರಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ನಾಲ್ವರನ್ನು ಹಿಂದೂ ಜಾಗರಣ ವೇದಿಕೆ ಹಾಗೂ ಆಟೋ ಚಾಲಕರ ಸಂಘದ ಸದಸ್ಯರು ಪತ್ತೆಹಚ್ಚಿ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ. ಪತ್ತೆಯಾದ ನಾಲ್ವರಲ್ಲಿ ಗಂಡ-ಹೆಂಡತಿ ಹಾಗೂ ಇಬ್ಬರು ಮಕ್ಕಳು ಸೇರಿದ್ದಾರೆ ಎನ್ನಲಾಗಿದೆ. ಪಶ್ಚಿಮ ಬಂಗಾಳದ ಬ್ರೋಕರ್ ಮೂಲಕ ಭಾರತಕ್ಕೆ ಬಂದಿರುವುದಾಗಿ ಅವರು ಹೇಳಿಕೊಂಡಿದ್ದಾರೆ ಎಂದು ಸಂಘಟನೆಗಳು ತಿಳಿಸಿವೆ. ಇನ್ನು, ನಾಲ್ವರ ಬಳಿ ಬೆಂಗಳೂರು ನೋಂದಣಿಯ ದ್ವಿಚಕ್ರ ವಾಹನ ಪತ್ತೆಯಾಗಿದೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಆದರೆ, ಅವರು ಯಾವ ಉದ್ದೇಶಕ್ಕಾಗಿ ಕೊಡಗಿಗೆ ಬಂದಿದ್ದರು? ಅವರ ಗುರುತು ಮತ್ತು ದಾಖಲೆಗಳು ನೈಜವೇ? ಅವರ ಹಿನ್ನೆಲೆ ಏನು? ಎಂಬ ಹಲವು ಪ್ರಶ್ನೆಗಳು ಇದೀಗ ಎದುರಾಗಿವೆ. ಈ ಪ್ರಕರಣದ ಕುರಿತು ಪೊಲೀಸರು ಸಮಗ್ರ ತನಿಖೆ ನಡೆಸಬೇಕು. ನಾಲ್ವರ ಹಿನ್ನೆಲೆ, ಗುರುತಿನ ದಾಖಲೆಗಳು ಹಾಗೂ ಅವರು ಜಿಲ್ಲೆಗೆ ಬಂದಿರುವ ಉದ್ದೇಶದ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಹಿಂದೂ ಸಂಘಟನೆಗಳು ಆಗ್ರಹಿಸಿವೆ. ಇದೇ ವೇಳೆ, ಹಲವು ವರ್ಷಗಳಿಂದ ಅಕ್ರಮ ವಲಸಿಗರ ಕುರಿತು ಮಾಹಿತಿ ನೀಡುತ್ತಿದ್ದರೂ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಸಂಘಟನೆಗಳ ಮುಖಂಡರು ಆರೋಪಿಸಿದ್ದಾರೆ. ಪೊಲೀಸ್ ಇಲಾಖೆಯ ಗುಪ್ತಚರ ವ್ಯವಸ್ಥೆಯ ಕಾರ್ಯವೈಖರಿಯ ಬಗ್ಗೆಯೂ ಅವರು ಪ್ರಶ್ನೆ ಎತ್ತಿದ್ದಾರೆ. ಜಿಲ್ಲೆಯಲ್ಲಿ ಅಕ್ರಮ ವಲಸಿಗರ ಪತ್ತೆ ಹಾಗೂ ಆಂತರಿಕ ಭದ್ರತೆಯ ವಿಚಾರದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಒಟ್ಟಿನಲ್ಲಿ, ಕೊಟ್ಟಿಗೇರಿಯಲ್ಲಿ ನಾಲ್ವರು ಶಂಕಿತ ವಲಸಿಗರು ಪತ್ತೆಯಾಗಿರುವ ಪ್ರಕರಣ ಗಮನ ಸೆಳೆದಿದ್ದು, ಅವರ ಹಿನ್ನೆಲೆ ಹಾಗೂ ದಾಖಲೆಗಳ ಕುರಿತು ಪೊಲೀಸ್ ತನಿಖೆಯಿಂದಷ್ಟೇ ಹೆಚ್ಚಿನ ಮಾಹಿತಿ ಹೊರಬರಬೇಕಿದೆ.