ಮಾರುವೇಷದ ಕಾರ್ಯಾಚರಣೆ: ಸಿದ್ದರಾಮಯ್ಯ ದೂರು ಆಧರಿಸಿ ಎಫ್ಐಆರ್
ಬೆಂಗಳೂರು: ಸುಳ್ಳು, ದುರುದ್ದೇಶಪೂರಿತ ಹಾಗೂ ನಕಲಿ ಗುರುತನ್ನು ಬಳಸಿ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ಪ್ರಸಾರ ಮಾಡಿ ವರ್ಚಸ್ಸಿಗೆ ಧಕ್ಕೆ ತರಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ದೂರು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ.ಅಪರಿಚಿತ ವ್ಯಕ್ತಿಗಳು ಯೂಟ್ಯೂಬ್ ವಾಹಿನಿಯಲ್ಲಿ ಗಂಭೀರ, ಅವಹೇಳನಕಾರಿ ಆರೋಪಗಳನ್ನು ಮಾಡಿದ್ದಾರೆ.
ಬೆಂಗಳೂರು: ಸುಳ್ಳು, ದುರುದ್ದೇಶಪೂರಿತ ಹಾಗೂ ನಕಲಿ ಗುರುತನ್ನು ಬಳಸಿ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ಪ್ರಸಾರ ಮಾಡಿ ವರ್ಚಸ್ಸಿಗೆ ಧಕ್ಕೆ ತರಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ದೂರು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ.ಅಪರಿಚಿತ ವ್ಯಕ್ತಿಗಳು ಯೂಟ್ಯೂಬ್ ವಾಹಿನಿಯಲ್ಲಿ ಗಂಭೀರ, ಅವಹೇಳನಕಾರಿ ಆರೋಪಗಳನ್ನು ಮಾಡಿದ್ದಾರೆ. ಸುಳ್ಳು ದುರುದ್ದೇಶಪೂರಿತ, ನಕಲಿ ಗುರುತನ್ನು ಬಳಸಿ ವಿಡಿಯೊ ಸೃಷ್ಟಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚುವ ಮೂಲಕ ಸಾರ್ವಜನಿಕ ಗೌರವಕ್ಕೆ ಹಾನಿ ಉಂಟುಮಾಡುವ ಪ್ರಯತ್ನ ಮಾಡಿದ್ದಾರೆ. ವಿಡಿಯೊ ಪ್ರಸಾರ ಮಾಡಿದ ವ್ಯಕ್ತಿಗಳ ವಿರುದ್ಧ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಲ್ಳಬೇಕು ಎಂಬುದಾಗಿ ಸಿದ್ದರಾಮಯ್ಯ ದೂರು ನೀಡಿದ್ದರು.ಈ ಸಂಬಂಧ ಸೈಬರ್ ಅಪರಾಧ ವಿಭಾಗದ ಪೊಲೀಸರು ಪ್ರಕರಣದ ದಾಖಲಿಸಿಕೊಂಡಿದ್ದಾರೆ.ಸಿದ್ದರಾಮಯ್ಯ ವಿರುದ್ಧ ಮಾನಹಾನಿಕಾರ ಸುದ್ದಿ ಪ್ರಸಾರಕ್ಕೆ ಮಧ್ಯಂತರ ತಡೆ‘ಸತ್ಯವೇ ಗೆಲ್ಲುತ್ತದೆ’ತಮಗೂ, ಯುಟ್ಯೂಬ್ನಲ್ಲಿ ಹರಿದಾಡುತ್ತಿರುವ ವಿಡಿಯೊಗೂ ಸಂಬಂಧವಿಲ್ಲ ಎಂದು ಹೇಳಿರುವ ಸಿದ್ದರಾಮಯ್ಯ, ‘ಮಾರುವೇಷದ ಕಾರ್ಯಾಚರಣೆಯ ವಿಡಿಯೊ ವಿಷಯದಲ್ಲಿ ನಾನು ಸಂಪೂರ್ಣ ನಿರಪರಾಧಿ. ಅಂತಿಮವಾಗಿ ಸತ್ಯವೇ ಗೆಲ್ಲುತ್ತದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯರೂ ಆಗಿರುವ ಅವರು, ‘ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳ ವಿವಿಧ ವೇದಿಕೆಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೊಗೆ ನನ್ನ ಹೆಸರನ್ನು ಜೋಡಿಸಿ ಅಪಪ್ರಚಾರ ನಡೆಯುತ್ತಿರುವುದನ್ನು ಗಮನಿಸಿದ್ದೇನೆ. ಇದು ಸ್ಪಷ್ಟವಾಗಿ ರಾಜಕೀಯ ದುರುದ್ದೇಶದಿಂದ ನನ್ನ ಚಾರಿತ್ರ್ಯಹನನ ಮಾಡುವ ಪ್ರಯತ್ನದಂತೆ ಕಾಣುತ್ತಿದೆ’ ಎಂದು ಕಳವಳ ವ್ಯಕ್ತಪಡಿಸಿದ್ದರು.ಸ್ಟಿಂಗ್ ಆಪರೇಷನ್ ವಿಡಿಯೊಗೂ ನನಗೂ ಯಾವುದೇ ಸಂಬಂಧ ಇಲ್ಲ: ಸಿದ್ದರಾಮಯ್ಯಮಾರುವೇಷ ಕಾರ್ಯಾಚರಣೆ ವಿಡಿಯೊ|ನಾನು ನಿರಪರಾಧಿ; ಸತ್ಯವೇ ಗೆಲ್ಲಲಿದೆ: ಸಿದ್ದರಾಮಯ್ಯ