ಸಿದ್ದರಾಮಯ್ಯ ಕಾಂಗ್ರೆಸ್ ತೊರೆದು ಹೊರಬರಲಿ: ವರ್ತೂರು ಪ್ರಕಾಶ್
ಕೋಲಾರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ವರ್ಚಸ್ಸಿಗೆ ಧಕ್ಕೆ ತರಲು ಕೆಲವರು ಸಿ.ಡಿ ಫ್ಯಾಕ್ಟರಿ ಇಟ್ಟುಕೊಂಡು ಸಂಚು ರೂಪಿಸಿದ್ದಾರೆ. ಅವರೇ ಬೆಳೆಸಿದ ಮುಖಂಡರು ಸಂಕಷ್ಟದ ಸಮಯದಲ್ಲಿ ಬೆನ್ನಿಗೆ ನಿಲ್ಲುತ್ತಿಲ್ಲ. ಹೀಗಾಗಿ, ಸಿದ್ದರಾಮಯ್ಯ ತಕ್ಷಣವೇ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಹೊರಬರಬೇಕು ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ವರ್ತೂರು ಪ್ರಕಾಶ್

ಕೋಲಾರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ವರ್ಚಸ್ಸಿಗೆ ಧಕ್ಕೆ ತರಲು ಕೆಲವರು ಸಿ.ಡಿ ಫ್ಯಾಕ್ಟರಿ ಇಟ್ಟುಕೊಂಡು ಸಂಚು ರೂಪಿಸಿದ್ದಾರೆ. ಅವರೇ ಬೆಳೆಸಿದ ಮುಖಂಡರು ಸಂಕಷ್ಟದ ಸಮಯದಲ್ಲಿ ಬೆನ್ನಿಗೆ ನಿಲ್ಲುತ್ತಿಲ್ಲ. ಹೀಗಾಗಿ, ಸಿದ್ದರಾಮಯ್ಯ ತಕ್ಷಣವೇ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಹೊರಬರಬೇಕು ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ವರ್ತೂರು ಪ್ರಕಾಶ್ ಆಗ್ರಹಿಸಿದರು.ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘2006 ರಲ್ಲಿ ಚಾಮುಂಡೇಶ್ವರಿ ಉಪಚುನಾವಣೆ ಗೆದ್ದು ಕಾಂಗ್ರೆಸ್ ಸೇರಿದಾಗಿನಿಂದಲೂ ಪಕ್ಷದೊಳಗಿನ ನಾಯಕರೇ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಸಂಚು ರೂಪಿಸುತ್ತಾ ಬಂದಿದ್ದಾರೆ. ಈಗಲೂ ಅದೇ ಹುನ್ನಾರ ನಡೆಯುತ್ತಿದೆ. ಹೀಗಾಗಿ, ಅವರು ಕಾಂಗ್ರೆಸ್ ತೊರೆದು ಹೊರಬರಬೇಕು. ಅವರ ಪರವಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಧ್ವನಿ ಎತ್ತಿದ್ದಾರೆ. ನಾನು ಸೇರಿದಂತೆ ಅಹಿಂದ ವರ್ಗ ಮತ್ತು ಕುರುಬ ಸಮಾಜವು ಅವರಿಗೆ ಬೆನ್ನಲುಬಾಗಿ ನಿಲ್ಲಲಿದೆ’ ಎಂದರು.ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಅವರ ಅಕ್ಕಪಕ್ಕದಲ್ಲಿದ್ದ, ಅನುಯಾಯಿಗಳಾಗಿದ್ದ ಒಬ್ಬೊಬ್ಬ ಸಚಿವರು ತಲಾ ₹ 5 ಸಾವಿರ ಕೋಟಿ ಹೊಡೆದಿದ್ದಾರೆ. ಸಾವಿರಾರು ಎಕರೆ ಜಮೀನನ್ನು ಬೇನಾಮಿ ಹೆಸರಿನಲ್ಲಿ ಮಾಡಿಕೊಂಡಿದ್ದಾರೆ. ಆದರೆ, ಇವತ್ತು ಸಿದ್ದರಾಮಯ್ಯ ಅವರ ಮೇಲೆ ಗಂಭೀರ ಆರೋಪಗಳು ಬಂದು ಸಂಕಷ್ಟದಲ್ಲಿದ್ದಾಗ, ಆ ಯಾವೊಬ್ಬ ಮಂತ್ರಿಯೂ ಬೆಂಬಲಕ್ಕೆ ಧ್ವನಿ ಎತ್ತುತ್ತಿಲ್ಲ, ಬಾಯಿ ತೆರೆಯುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಪ್ರಕರಣವನ್ನು ಎಸ್ಐಟಿಗೆ ವಹಿಸಲು ನನ್ನ ವಿರೋಧವಿದೆ. ಅದು ಎಸ್ಐಟಿ ಅಲ್ಲ; ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಮ್. ಹೀಗಾಗಿ, ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ. ಸಿದ್ದರಾಮಯ್ಯ ಅವರಿಗೆ ನ್ಯಾಯ ಸಿಗಬೇಕಾದರೆ ಹೈಕೋರ್ಟ್ ನ್ಯಾಯಾಧೀಶರ ಉಸ್ತುವಾರಿಯಲ್ಲಿ ತನಿಖೆಯಾಗಬೇಕು ಅಥವಾ ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು.ಸಿದ್ದರಾಮಯ್ಯ ಅವರೊಂದಿಗೆ ನಾನು 25 ವರ್ಷಗಳ ಸುದೀರ್ಘ ಒಡನಾಟ ಹೊಂದಿದ್ದೇನೆ. ಅವರ 50 ವರ್ಷಗಳ ರಾಜಕೀಯ ಜೀವನದಲ್ಲಿ ಎಂದೂ ಭ್ರಷ್ಟಾಚಾರಕ್ಕೆ ಅವಕಾಶ ನೀಡದ ಕಳಂಕರಹಿತ ನಾಯಕರಾಗಿದ್ದಾರೆ. ಆದರೆ ಇವತ್ತು ರಾಜಕೀಯ ನಿವೃತ್ತಿಯ ಅಂಚಿನಲ್ಲಿರುವ ಅವರ ಮುಖಕ್ಕೆ ಮಸಿ ಬಳಿಯುವ ಗಂಭೀರ ಸಂಚು ನಡೆದಿದೆ ಎಂದು ಆರೋಪಿಸಿದರು.ಸಿ.ಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ಬಹಿರಂಗವಾಗಿ ಮಹಾನ್ ನಾಯಕ ಎಂಬುದಾಗಿ ಹೇಳಿದ್ದರು. ಕೊನೆಗೆ ಅವರು ರಾಜಕೀಯವಾಗಿ ಮೂಲೆಗುಂಪಾದರು. ವಾಲ್ಮೀಕಿ ಸಮಾಜದಲ್ಲಿ ಹುಲಿ ರೀತಿ ಇದ್ದ ರಾಜಣ್ಣ ಅವರ ಬಾಯಿ ಮುಚ್ಚಿಸಲು ಸಿ.ಡಿ ಪ್ರಕರಣ ತಂದರು. ಈಗ ಸಿದ್ದರಾಮಯ್ಯ ಅವರ ವಯಸ್ಸಿಗೂ ಬೆಲೆ ಕೊಟ್ಟಿಲ್ಲ, ಎರಡು ಬಾರಿ ಮುಖ್ಯಮಂತ್ರಿ ಆಗಿ ನಡೆಸಿದ ಆಡಳಿತಕ್ಕೂ ಬೆಲೆ ಕೊಟ್ಟಿಲ್ಲ ಎಂದು ಹರಿಹಾಯ್ದರು.ಮುಖಂಡರಾದ ಬೆಗ್ಲಿ ಪ್ರಕಾಶ್, ಬಂಕ್ ಮಂಜುನಾಥ್, ತಂಬಳ್ಳಿ ಮುನಿಯಪ್ಪ ಇದ್ದರು.ಸಿ.ಡಿ ಪ್ರಕರಣದಲ್ಲಿ ಕಾಂಗ್ರೆಸ್ ಆಗಿರಲಿ, ಬಿಜೆಪಿ ಆಗಿರಲಿ, ಜೆಡಿಎಸ್ ಸೇರಿದಂತೆ ಯಾರದ್ದೇ ಕೈವಾಡವಿರಲಿ. ಕೂಡಲೇ ಅಂಥವರನ್ನು ಬಂಧಿಸಬೇಕು, ಕಠಿಣ ಕ್ರಮ ಕೈಗೊಳ್ಳಬೇಕುವರ್ತೂರು ಪ್ರಕಾಶ್, ಮಾಜಿ ಸಚಿವ261016-18-384201571