ರಾಹುಲ್ ನೀಡಿದ್ದ ಹೇಳಿಕೆಕುರಿತು ಪೋಸ್ಟ್:ಅಮಿತ್ ಮಾಳವೀಯ ವಿರುದ್ಧದ ಪ್ರಕರಣ ರದ್ದು
ಬೆಂಗಳೂರು: ಆಪರೇಷನ್ ಸಿಂಧೂರ ಹಾಗೂ ಭಾರತದ ಸೇನಾ ಕಾರ್ಯಾಚರಣೆಗಳ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗಳನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಹಿತಿ ತಂತ್ರಜ್ಞಾನ ವಿಭಾಗ ಮಾಜಿ ಸಂಚಾಲಕ ಅಮಿತ್ ಮಾಳವೀಯ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.ತಮ್ಮ ವಿರುದ್ಧ

ಬೆಂಗಳೂರು: ಆಪರೇಷನ್ ಸಿಂಧೂರ ಹಾಗೂ ಭಾರತದ ಸೇನಾ ಕಾರ್ಯಾಚರಣೆಗಳ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗಳನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಹಿತಿ ತಂತ್ರಜ್ಞಾನ ವಿಭಾಗ ಮಾಜಿ ಸಂಚಾಲಕ ಅಮಿತ್ ಮಾಳವೀಯ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಅಮಿತ್ ಮಾಳವೀಯ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ. ಭಾರತೀಯ ನ್ಯಾಯ ಸಂಹಿತಾ–2023ರ (ಬಿಎನ್ಎಸ್) ಕಲಂ 192 (ಗಲಭೆ ಉಂಟುಮಾಡುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಪ್ರಚೋದನೆ ನೀಡುವುದು) ಮತ್ತು 352ರ (ಶಾಂತಿಭಂಗಕ್ಕೆ ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಅವಮಾನಿಸುವುದು) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ‘ಪೋಸ್ಟ್ನಲ್ಲಿ ರಾಹುಲ್ ಗಾಂಧಿ ಅವರು ಪಾಕಿಸ್ತಾನ ಮತ್ತು ಅದರ ಹಿತಾಸಕ್ತಿಗಳನ್ನು ಬೆಂಬಲಿಸುವವರ ಭಾಷೆಯಲ್ಲಿ ಮಾತನಾಡುತ್ತಿದ್ದಾರೆ’ ಎಂದು ಆರೋಪಿಸಲಾಗಿತ್ತು.
Read the complete story at Prajavani